ಕಾರ್ಯಾಚರಣೆ ವೇಳೆ ಇಲಾಖಾ ಸಿಬ್ಬಂದಿ 2 ಚೀಲಗಳಲ್ಲಿ ಸುಮಾರು 20 ರಿಂದ 30 ಕೆ.ಜಿ. ತೂಕದ ವನ್ಯಪ್ರಾಣಿ ಮಾಂಸವನ್ನು ಪತ್ತೆ ಮಾಡಿದ್ದಾರೆ ಜೊತೆಗೆ 4 ಜೊತೆ ಪ್ಯಾರಾಗನ್ ಚಪ್ಪಲಿ, 2 ಲೀಟರ್ ಮೆರಿಂಡಾ ಬಾಟಲಿನಲ್ಲಿ ಕಾಲು ಲೀಟರ್ ನೀರನ್ನು, ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮಾಂಸದ ಪರೀಕ್ಷೆಯನ್ನು ಆ. 16 ರಂದು ಕಳಿಸಿಕೊಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಹನೂರು: ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯದಲ್ಲಿ ಆ. 15ರಂದು ಕಳ್ಳಬೇಟೆ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಿದೆ.
ಚಾಮರಾಜನಗರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಆದೇಶದಂತೆ ಕೊಳ್ಳೇಗಾಲ ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಭಾ.ಆ.ಸೇ. ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಥಳದಲ್ಲಿ ಪತ್ತೆಯಾದ ಸಾಕ್ಷ್ಯ:
ಕಾರ್ಯಾಚರಣೆ ವೇಳೆ ಇಲಾಖಾ ಸಿಬ್ಬಂದಿ 2 ಚೀಲಗಳಲ್ಲಿ ಸುಮಾರು 20 ರಿಂದ 30 ಕೆ.ಜಿ. ತೂಕದ ವನ್ಯಪ್ರಾಣಿ ಮಾಂಸವನ್ನು ಪತ್ತೆ ಮಾಡಿದ್ದಾರೆ ಜೊತೆಗೆ 4 ಜೊತೆ ಪ್ಯಾರಾಗನ್ ಚಪ್ಪಲಿ, 2 ಲೀಟರ್ ಮೆರಿಂಡಾ ಬಾಟಲಿನಲ್ಲಿ ಕಾಲು ಲೀಟರ್ ನೀರನ್ನು, ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮಾಂಸದ ಪರೀಕ್ಷೆಯನ್ನು ಆ. 16 ರಂದು ಕಳಿಸಿಕೊಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ
ಕಳ್ಳ ಬೇಟೆ ಕಡೆ ಶಿಬಿರ ಸೇರಿದಂತೆ 9 ವಸತಿಗೃಹಗಳಿಗೆ ಹಾನಿ:
ಕಳ್ಳಬೇಟೆಗಾರರು ಕಾರ್ಯಾಚರಣೆ ವೇಳೆ 7 ಕಳ್ಳಬೇಟೆ ತಡೆ ಶಿಬಿರಗಳು ಮತ್ತು 9 ವಸತಿಗೃಹಗಳಿಗೆ ಹಾನಿ ಮಾಡಿದ್ದಾರೆ. ಪೀಠೋಪಕರಣ, ಸಾಮಾನುಗಳ ಜೊತೆಗೆ 1 ಇಲಾಖಾ ನಾಲ್ಕು ಚಕ್ರದ ವಾಹನ ಮತ್ತು 4 ದ್ವಿಚಕ್ರ ವಾಹನಗಳನ್ನು ಜಖಂಗೊಳಿಸಿದ್ದಾರೆ. ಇದರಿಂದ ಸರ್ಕಾರ ಮತ್ತು ಅರಣ್ಯ ಇಲಾಖೆಗೆ ಅಪಾರ ನಷ್ಟವಾಗಿದೆ.
ಈ ಸಂಬಂಧ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲು ಅರಣ್ಯ ಇಲಾಖೆ ನಿರ್ಧರಿಸಿದೆ. ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ವಿವರ ಬಹಿರಂಗಪಡಿಸಲಾಗುವುದು ಎಂದು ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.