ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ- 2025 ಮತ್ತು ಪುಸ್ತಕ ಬಹುಮಾನ- 2025ಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಗೌರವ ಪ್ರಶಸ್ತಿ-2025: ಕೊಂಕಣಿ ಸಾಹಿತ್ಯ, ಕೊಂಕಣಿ ಕಲೆ (ಕೊಂಕಣಿ ನಾಟಕ, ಸಂಗೀತ, ಚಲನಚಿತ್ರ), ಕೊಂಕಣಿ ಜಾನಪದ ಈ ಮೂರು ವಿಭಾಗಗಳಲ್ಲಿ ಜೀವಮಾನದ ಸಾಧನೆಗಾಗಿ ಗೌರವ ಪ್ರಶಸ್ತಿಗಾಗಿ ಅರ್ಜಿ ಕರೆಯಲಾಗಿದೆ. ಈ ಪ್ರಶಸ್ತಿಯು 50,000 ರು. ಗೌರವಧನ, ಶಾಲು, ಸ್ಮರಣಿಕೆ, ಹಾರ, ಪ್ರಮಾಣ ಪತ್ರ, ಫಲತಾಂಬೂಲವನ್ನು ಒಳಗೊಂಡಿದೆ. ಸಾಧಕರು ನೇರವಾಗಿ ಅಥವಾ ಸಂಘ ಸಂಸ್ಥೆಗಳು ಅಥವಾ ಸಾರ್ವಜನಿಕರು ಸಾಧಕರ ಹೆಸರು ಮತ್ತು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಗೌರವ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ ‘ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ-2025’ ಹಾಗೂ ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು ‘ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ -2025’ ಎಂದು ಕಡ್ಡಾಯವಾಗಿ ಬರೆದು- ರಿಜಿಸ್ಟ್ರಾರ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಮಹಾನಗರ ಪಾಲಿಕೆ ಕಟ್ಟಡ, ಲಾಲ್‌ಬಾಗ್, ಮಂಗಳೂರು- 575003, ಇಲ್ಲಿಗೆ 2026 ಜ.2ರೊಳಗಾಗಿ ಕಳುಹಿಸಿಕೊಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.