‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ - ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

KannadaprabhaNewsNetwork |  
Published : Sep 06, 2024, 01:01 AM IST
ಗಾಂಧಿ5 | Kannada Prabha

ಸಾರಾಂಶ

ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು.

ಕನ್ನಡಪ್ರಭ ವಾರ್ತೆ ಉಡುಪಿ

ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ 5 ಲಕ್ಷ ರು. ನಗದನ್ನು ಒಳಗೊಂಡ ‘ಮಹಾತ್ಮಾಗಾಂಧಿ ಸೇವಾ ಪ್ರಶಸ್ತಿ - ಕರ್ನಾಟಕ’ಗೆ 2024ನೇ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2024ರ ಅ.2ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.ಮಹಾತ್ಮಗಾಂಧೀಜಿಯವರು ಪ್ರಚುರಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಧಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು ಅಥವಾ ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ನಾಮನಿರ್ದೇಶನ ಕೂಡ ಮಾಡಬಹುದಾಗಿದೆ.ಸೆ.19ರ ಸಂಜೆ 5.30 ರೊಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ.17, ಭಗವಾನ್ ಮಹಾವೀರ ರಸ್ತೆ (ಇನ್ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ informationdiprawards@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೇಖಕ ತನ್ನನ್ನು ತಾನು ವಿಮರ್ಶೆಗೊಳಪಡಿಸಿಕೊಳ್ಳಬೇಕು
ಕುಂದಾನಗರಿಯಲ್ಲಿ ಬೆಳಗಾವಿ ಉತ್ಸವ