ರಾಜ್ಯ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಆಹ್ವಾನ

KannadaprabhaNewsNetwork |  
Published : Jan 09, 2025, 12:48 AM IST
೩೨ | Kannada Prabha

ಸಾರಾಂಶ

20ನೇ ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ 16ರಂದು ಮಂಡ್ಯ ಜಿಲ್ಲೆಯ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಲ್ಲಿ ಭಾಗವಹಿಸಲು ಅವಕಾಶವಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕನ್ನಡ ಸಾಹಿತ್ಯ ಪರಿಷತ್ತು ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆಶ್ರಯದಲ್ಲಿ ಕಳೆದ ೧೯ ವರ್ಷ ಗಳಿಂದ ರಾಜ್ಯ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುತ್ತಾ ಬಂದಿದೆ. ಈ ಬಾರಿ 20ನೇ ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ 16ರಂದು ಮಂಡ್ಯ ಜಿಲ್ಲೆಯ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಲ್ಲಿ ಭಾಗವಹಿಸಲು ಅವಕಾಶವಿದೆ. ಕಥೆ, ಕವನ, ಕಾದಂಬರಿ ಪ್ರಕಟಗೊಳಿಸಿರುವ 17 ವಯಸ್ಸಿನ ಒಳಗಿನ ವಿದ್ಯಾರ್ಥಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಬಹುದಾಗಿದೆ. ಪುಸ್ತಕಗಳ ಪ್ರಕಟಣೆ ಅಥವಾ ಪತ್ರಿಕೆಗಳಲ್ಲಿ ಲೇಖನಗಳು ಬರೆದಿರುವ ವಿದ್ಯಾರ್ಥಿಗಳು ಕೂಡ ಭಾಗವಹಿಸಬಹುದಾಗಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಂಪಿ ಕೇಶವ ಕಾಮತ್ ತಿಳಿಸಿದ್ದಾರೆ.

ಸಮ್ಮೇಳನದಲ್ಲಿ ಕನ್ನಡದ ಎಲ್ಲಾ ರೀತಿಯ ಸಾಹಿತ್ಯ ಬರೆವಣಿಗೆಯಲ್ಲಿ ತೊಡಗಿರುವ ಮಕ್ಕಳಿಗೆ ಭಾಗವಹಿಸಲು ಅವಕಾಶವಿದೆ.

ಹೆಸರು, ವಿಳಾಸ, ದೂರವಾಣಿ ಸಂಖ್ಯೆ. ಓದುವ ತರಗತಿ, ಶಾಲೆ, ಪುಸ್ತಕ ಪ್ರಕಟವಾಗಿದ್ದರೆ ಮಾಹಿತಿ, ಇದುವರೆಗೆ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿ ಪ್ರತಿಭೆ ಅನಾವರಣಗೊಂಡಿದ್ದರೆ ಆ ಎಲ್ಲಾ ಮಾಹಿತಿಯೊಂದಿಗೆ ತಕ್ಷಣ ಕಳುಹಿಸಬಹುದಾಗಿದೆ.

ಸಂಪರ್ಕ: ಡಿ. ಮಂಜುನಾಥ, ಅಧ್ಯಕ್ಷ, ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಶಿವಮೊಗ್ಗ. ದೂರವಾಣಿ : 9449552795.

ಭಾಗವಹಿಸುವವರಿಗೆ ಊಟ, ತಿಂಡಿ, ವಸತಿ ವ್ಯವಸ್ಥೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ