ಕನ್ನಡಪ್ರಭ ವಾರ್ತೆ ಆಳಂದ
ಈ ಕುರಿತು ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸಮುದಾಯ ಮುಖಂಡರ ಸಭೆಯ ಬಳಿಕ ಸಮಾವೇಶಕ್ಕೆ ಸಮುದಾಯ ಜನರಿಗೆ ಬಹಿರಂಗವಾಗಿ ಅಹ್ವಾನಿಸಿ ಅವರು ಮಾತನಾಡಿದರು.
ಜಿಲ್ಲಾ ಮುಖಂಡ, ನ್ಯಾಯವಾದಿ ಮಹಾಂತೇಶ ಕವಲಗಿ, ಜಾಗತಿಕ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ರಮೇಶ ಲೋಹಾರ ಅವರು ಮಾತನಾಡಿ, ಹಿಂದುಳಿದ ಮತ್ತು ಶೋಷಿತ ಸಮುದಾಯುಗಳ ಗಣತಿಯನ್ನು ಮೇಲ್ಜಾತಿಯವರು ಕಾಂತರಾಜ ಆಯೋಗದ ವರದಿಯನ್ನು ವಿರೋಧಿಸುತ್ತಿರುವುದು ಸರಿಯಲ್ಲ. ಸರ್ಕಾರ ಈ ವರದಿಯನ್ನು ಸ್ವೀಕರಿಸಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ನಡೆಯುವ ಈ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆಂದರು.ರಾಜಕೀಯ ಕ್ಷೇತ್ರದಲ್ಲೂ ಒಳ ಮೀಸಲಾತಿ ಕಲ್ಪಿಸಬೇಕು. ರಾಜಕೀಯ ಮೀಸಲಾತಿಯನ್ನು ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಬೇಕು. ಜನಸಂಖ್ಯೆಗೆ ಅನುಗುಣವಾಗಿ ಶೇಕಡವಾರು ಪ್ರಮಾಣದಲ್ಲಿ ಮೀಸಲಾತಿ ಹೆಚ್ಚಿಸಬೇಕು. ಖಾಸಗಿ ಕ್ಷೇತ್ರಕ್ಕೂ ಮೀಸಲಾತಿಯನ್ನು ವಿಸ್ತರಿಸಬೇಕು ಎಂದು ಒತ್ತಾಯಿಸಿದರು.