ಇನ್‌ಕಾಮೆಕ್ಸ್‌ -2026 ಉದ್ಘಾಟನೆ ಕೇಂದ್ರ ಸಚಿವ ಗೋಯಲ್‌ಗೆ ಆಹ್ವಾನ

KannadaprabhaNewsNetwork |  
Published : Mar 10, 2026, 03:15 AM IST
ಸಚಿವ ಪಿಯೂಷ್‌ ಗೋಯಲ್ ಅವರನ್ನು ಇನ್‌ಕಾಮೆಕ್ಸ್‌- 2026ಕ್ಕೆ ಆಹ್ವಾನಿಸಲಾಯಿತು | Kannada Prabha

ಸಾರಾಂಶ

ಹುಬ್ಬಳ್ಳಿ ಎಪಿಎಂಸಿ ಆವರಣದಲ್ಲಿರುವ ವಿವಿಧೋದ್ದೇಶ ವಸ್ತು ಪ್ರದರ್ಶನ ಕೇಂದ್ರದಲ್ಲಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ನೇತೃತ್ವದಲ್ಲಿ ಏ. 25ರಿಂದ 29ರ ವರೆಗೆ ನಡೆಯಲಿರುವ "ಇನ್‌ಕಾಮೆಕ್ಸ್‌ 2026 "ಗೆ ಆಗಮಿಸುವಂತೆ ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಆಹ್ವಾನಿಸಲಾಯಿತು.

ಹುಬ್ಬಳ್ಳಿ:

ಹುಬ್ಬಳ್ಳಿ ಎಪಿಎಂಸಿ ಆವರಣದಲ್ಲಿರುವ ವಿವಿಧೋದ್ದೇಶ ವಸ್ತು ಪ್ರದರ್ಶನ ಕೇಂದ್ರದಲ್ಲಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ನೇತೃತ್ವದಲ್ಲಿ ಏ. 25ರಿಂದ 29ರ ವರೆಗೆ ನಡೆಯಲಿರುವ "ಇನ್‌ಕಾಮೆಕ್ಸ್‌ 2026 "ಗೆ ಆಗಮಿಸುವಂತೆ ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಆಹ್ವಾನಿಸಲಾಯಿತು.

ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಸಚಿವ ಗೋಯಲ್‌ ಅವರನ್ನು ಭೇಟಿಯಾಗಿ ಕಾರ್ಯಕ್ರಮದ ಉದ್ದೇಶ, ವ್ಯಾಪ್ತಿ, ಕೈಗಾರಿಕೆ-ವ್ಯಾಪಾರ ಅಭಿವೃದ್ಧಿಗೆ ಈ ಕಾರ್ಯಕ್ರಮದಿಂದ ಆಗುವ ಪ್ರಯೋಜನಗಳನ್ನು ವಿವರಿಸಲಾಯಿತು.

ಬಳಿಕ ಕೇಂದ್ರ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಿಂದ ಸಹಕಾರ ನೀಡುವ ಜತೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕೋರಲಾಯಿತು. ಮನವಿಗೆ ಸ್ಪಂದಿಸಿದ ಸಚಿವರು ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುವುದಾಗಿ ಭರವಸೆ ನೀಡಿದರು.

ಈ ವೇಳೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ, ಉಪಾಧ್ಯಕ್ಷ ವೀರಣ್ಣ ಕಲ್ಲೂರ, ಗೌರವ ಕಾರ್ಯದರ್ಶಿ ಉದಯ ರೇವಣಕರ, ಜಂಟಿ ಗೌರವ ಕಾರ್ಯದರ್ಶಿ ಪ್ರಕಾಶ ಶೃಂಗೇರಿ ಹಾಗೂ ಇನ್‌ಕಾಮೆಕ್ಸ್‌ 2026ರ ಚೇರಮನ್‌ ಎಂ.ವಿ. ಕರಮರಿ ಹಾಗೂ ಗೋವಿಂದ ಜೋಶಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನಿಷ್ಠವೇತನ ನೀಡಿ, ಇಲ್ಲವಾದರೆ ಸೀರೆ ವಾಪಸ್‌ ಕಳುಹಿಸುತ್ತೇವೆ-ರೇವಣಕರ
ಕಾರಿನ ಮೇಲೆ ಕಂಟೈನರ್ ಬಿದ್ದು 8 ವರ್ಷದ ಮಗು ಬಲಿ