ಅಯೋಡಿನ್ ಯುಕ್ತ ಉಪ್ಪು ಕುಟುಂಬದ ಆರೋಗ್ಯ ಸಂರಕ್ಷಕ: ಡಾ. ಪ್ರೀತ್

KannadaprabhaNewsNetwork |  
Published : Oct 26, 2026, 03:30 AM IST
ಕಾರ್ಯಕ್ರಮದಲ್ಲಿ ಡಾ. ಪ್ರೀತ್‌ ಖೋನಾ ಮಾತನಾಡಿದರು. | Kannada Prabha

ಸಾರಾಂಶ

ಅಯೋಡಿನ್ ಒಂದು ಸೂಕ್ಷ್ಮ ಪೋಷಕಾಂಶವಾಗಿದ್ದು, ಇದು ಮನುಷ್ಯನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತ್ಯವಶ್ಯಕವಾಗಿದೆ.

ಕನ್ನಡಪ್ರಭ ವಾರ್ತೆ ಗದಗ

ಅಯೋಡಿನ್ ಒಂದು ಸೂಕ್ಷ್ಮ ಪೋಷಕಾಂಶವಾಗಿದ್ದು, ಇದು ಮನುಷ್ಯನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತ್ಯವಶ್ಯಕವಾಗಿದೆ. ಅಯೋಡಿನ್ ಕೊರತೆಯಿಂದ ಮಕ್ಕಳು ವಯಸ್ಕರು ಮತ್ತು ಗರ್ಭಿಣಿಯರಲ್ಲಿ ಅನೇಕ ನ್ಯೂನ್ಯತೆಗಳು ಕಂಡುಬರುತ್ತವೆ. ಇದರ ಕೊರತೆಯನ್ನು ತಡೆಗಟ್ಟಲು ನಮಗಿರುವ ಏಕೈಕ ಉಪಾಯವೆಂದರೆ ಅಯೋಡಿನ್ ಯುಕ್ತ ಉಪ್ಪಿನ ಸೇವನೆ. ಅಯೋಡಿನ್ ಯುಕ್ತ ಉಪ್ಪು ನಿಮ್ಮ ಮಕ್ಕಳ ಹಾಗೂ ಕುಟುಂಬದ ಆರೋಗ್ಯ ಸಂರಕ್ಷಕವಾಗಿದೆ ಎಂದು ಗದಗ ತಾಲೂಕು ಆರೋಗ್ಯ ಅಧಿಕಾರಿ ಡಾ. ಪ್ರೀತ್ ಖೋನಾ ಹೇಳಿದರು.

ನಗರದ ತಾಲೂಕು ಆರೋಗ್ಯ ಅಧಿಕಾರಿಗಳ ಸಭಾ ಭವನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಲಕ್ಕುಂಡಿ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಅಯೋಡಿನ್ ಕೊರತೆ ನ್ಯೂನ್ಯತೆಗಳ ನಿಯಂತ್ರಣ ದಿನಾಚರಣೆ ಹಾಗೂ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಮಾತನಾಡಿ, ಮಕ್ಕಳಲ್ಲಿ ಐಯೋಡಿನ್ ಕೊರತೆಯಿಂದ ದೈಹಿಕ ಮತ್ತು ಮಾನಸಿಕ ವಿಕಲತೆ, ಕುಂಠಿತ ಬೆಳವಣಿಗೆ ಕಿವುಡು ಹಾಗೂ ಮೂಗುತನ ಮತ್ತು ವಯಸ್ಕರಲ್ಲಿ ಕಾರ್ಯ ನಿರ್ವಹಣೆಯ ವೈಫಲ್ಯ, ಗಳಗಂಡ ರೋಗ ಕಂಡುಬರುತ್ತದೆ ಎಂದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಡಾ. ರಾಜೇಂದ್ರ ಎಸ್. ಗಡಾದ, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾ ಯಲ್ಲಪ್ಪ ಹಕ್ಕಿಯವರ ಮಾತನಾಡಿದರು.

ಈ ವೇಳೆ ಹಿರಿಯ ಮಹಿಳಾ ಸಂರಕ್ಷಣಾಧಿಕಾರಿ ಸರೋಜಾ ಕಟ್ಟಿಮನಿ, ಟಿ.ಎನ್. ರಾಯಭಾಗಿ, ಮುತ್ತಣ್ಣ ಹಟ್ಟಿಮನಿ, ಎನ್.ನವೀನ್ ಕುಮಾರಿ, ಗಣೇಶ್ ಬಾಗಡೆ ಸೇರಿ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು. ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಸಿದ್ದಪ್ಪ ಲಿಂಗದಾಳ ಸ್ವಾಗತಿಸಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೈ.ಎಂ. ಕಡೆಮನಿ ಕಾರ್ಯಕ್ರಮ ನಿರೂಪಿಸಿದರು. ಅಕ್ಷತಾ ಈಳಿಗೇರ್ ಪ್ರಾರ್ಥಿಸಿದರು. ಲಲಿತಾ ಪವಾರ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶತ ಶತಮಾನದಿಂದಲೂ ಅಭಿವೃದ್ಧಿ ಕಾಣದ ಸ್ಮಾರಕ
ಮಹಿಳೆಯರು ದೇಶದ ಅಭಿವೃದ್ಧಿಗೆ ಕೈ ಜೋಡಿಸಲಿ: ದೀಪಾ ಗವಿಮಠ