ಹಿರಿಯೂರು ತಾ.29, 478 ಮಂದಿ ಪಟ್ಟಿಯಿಂದ ಹೊರಕ್ಕೆ

KannadaprabhaNewsNetwork |  
Published : Aug 26, 2026, 02:00 AM IST
ಚಿತ್ರ 3 | Kannada Prabha

ಸಾರಾಂಶ

iriyur Taluka 29, 478 people removed from the list

ಕನ್ನಡಪ್ರಭ ವಾರ್ತೆ ಹಿರಿಯೂರು

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ- 2026 ರ ಸಂಬಂಧ ತಾಲೂಕಿನ ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದ್ದು ಒಟ್ಟು 2,29,004 ಮತದಾರರು ಕರಡು ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದಾರೆ ಎಂದು ತಹಶೀಲ್ದಾರ್‌ ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿ ಎಂ. ಸಿದ್ದೇಶ್ ತಿಳಿಸಿದ್ದಾರೆ.

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು ತಾಲೂಕಿನ ಒಟ್ಟು 2,51,482 ಮತದಾರರ ಪೈಕಿ ಶೇ. 88.28 ರಷ್ಟು ಅಂದರೆ 2,22,004 ಮತದಾರರ ಮಾಹಿತಿ ಪರಿಶೀಲಿಸಿ ಕರಡು ಪಟ್ಟಿಗೆ ತರಲಾಗಿದ್ದು ಅತ್ಯುತ್ತಮ ಗುಣಮಟ್ಟದ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ.

ಕರಡು ಮತದಾರರ ಪಟ್ಟಿಯಿಂದ ಹೊರಗುಳಿದ ಒಟ್ಟು 29,478 ಮತದಾರರ ಪೈಕಿ 6,759 ಮಂದಿ ಮೃತಪಟ್ಟಿದ್ದರೆ 15,046 ಮತದಾರರು ಶಾಶ್ವತವಾಗಿ ವಲಸೆ ಹೋಗಿದ್ದಾರೆ. 4,127ಮತದಾರರ ಡಬಲ್ ಎಂಟ್ರಿ ಹಾಗೂ ಮೂರ್ನಾಲ್ಕು ಬಾರಿ ಭೇಟಿ ನೀಡಿದರೂ ಸ್ಥಳದಲ್ಲಿ ಲಭ್ಯವಿಲ್ಲದ 3,489 ಮತದಾರರು ಗೈರು ಹಾಜರಿಯಾಗಿದ್ದು 57 ಇತರೆ ಮತದಾರರ ಹೆಸರನ್ನು ಪಟ್ಟಿಯಿಂದ ಹೊರಗಿಡಲಾಗಿದೆ. ಸೆ. 23 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಸಾರ್ವಜನಿಕರಿಂದ ಅರ್ಜಿ ಹಾಗೂ ಆಕ್ಷೇಪಣೆಗಳನ್ನು ಸ್ವೀಕರಿಸಲು ಜಿಲ್ಲಾಧಿಕಾರಿ ಕಚೇರಿ, ತಾಲೂಕು ಕಚೇರಿಗಳು, ಗ್ರಾಮ ಪಂಚಾಯಿತಿ ಕೇಂದ್ರಗಳು ಹಾಗೂ ಬಿಎಲ್‍ಒ ಕೇಂದ್ರಗಳಲ್ಲಿ ಒಟ್ಟು 13 ಜನ ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ನೇಮಿಸಲಾಗಿದೆ.

ಮತದಾರರ ಪಟ್ಟಿಯಲ್ಲಿ ಹೆಸರಿನ ಕಾಗುಣಿತ, ವಿಳಾಸ ಸೇರಿದಂತೆ ಸಣ್ಣಪುಟ್ಟ ತಿದ್ದುಪಡಿಗಳಿರುವ ಸುಮಾರು 9643 ಮತದಾರರಿದ್ದಾರೆ. ಇವರೆಲ್ಲರಿಗೂ ನೋಟಿಸ್ ನೀಡಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಹಾಗೂ ಇಆರ್‌ಒ ಹಂತದಲ್ಲಿ ಕರೆಸಿ ಸೂಕ್ತ ದಾಖಲೆಗಳನ್ನು ಪಡೆದು ತಿದ್ದುಪಡಿಯಲ್ಲಿ ಸರಿಪಡಿಸಲಾಗುವುದು ಎಂದರು.

ಮ್ಯಾಪಿಂಗ್ ವೇಳೆ ಪತ್ತೆಯಾಗದಿದ್ದ 2,644 ನೋ ಮ್ಯಾಪಿಂಗ್ ಮತದಾರರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಹಂತದಲ್ಲೇ ಸ್ವತಃ ನೋಟಿಸ್ ನೀಡಿ ಪರಿಶೀಲನೆ ನಡೆಸಲಾಗುವುದು.

ಈ ಹಿಂದೆ ಮನೆ ಮನೆ ಮ್ಯಾಪಿಂಗ್ ನಡೆಸಿದಾಗ ಸಿಗದಿರುವ ಆದರೆ ಎನ್ಯುಮರೇಷನ್ ಫಾರ್ಮ್ ಸಲ್ಲಿಸಿದಾಗ ಪತ್ತೆಯಾಗಿರುವ 2,644 ನೋ ಮ್ಯಾಪಿಂಗ್ ಪ್ರಕರಣಗಳಿವೆ. ಇವರು ಹಿಂದೆ ಮ್ಯಾಪಿಂಗ್ ವೇಳೆ ಏಕೆ ಸಿಗಲಿಲ್ಲ? ಪ್ರಸ್ತುತ ಎಲ್ಲಿ ವಾಸವಿದ್ದಾರೆ ಎಂಬುದನ್ನು ಖಾತರಿಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಖುದ್ದಾಗಿ ನೋಟಿಸ್ ಜಾರಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿ ಅರ್ಹರಿದ್ದರೆ ಅಂತಿಮ ಮತದಾರರ ಪಟ್ಟಿಗೆ ಅವರನ್ನು ಸೇರ್ಪಡೆ ಮಾಡಲಾಗುವುದು.ತಾಲೂಕಿನಲ್ಲಿ ಈ ಹಿಂದೆ 287 ಮತಗಟ್ಟೆ ಕೇಂದ್ರಗಳಿದ್ದವು. 1,200ಕ್ಕಿಂತ ಹೆಚ್ಚು ಮತದಾರರಿರುವ ಕೇಂದ್ರಗಳನ್ನು ಗುರುತಿಸಿ ಸುಲಭ ಮತದಾನಕ್ಕಾಗಿ 13 ಹೆಚ್ಚುವರಿ ಶಾಶ್ವತ ಮತದಾನ ಕೇಂದ್ರಗಳನ್ನು ನೂತನವಾಗಿ ಸ್ಥಾಪಿಸಲಾಗಿದ್ದು ಇದರಿಂದ ತಾಲೂಕಿನಲ್ಲಿ ಒಟ್ಟು ಮತಗಟ್ಟೆ ಕೇಂದ್ರಗಳ ಸಂಖ್ಯೆ 300ಕ್ಕೆ ಏರಿಕೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಜೆಡಿಎಸ್ ತಾಲೂಕು ಅಧ್ಯಕ್ಷ ಎನ್. ಹನುಮಂತರಾಯಪ್ಪ, ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ನಿತಿನ್ ಗೌಡ, ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ಜ್ಞಾನೇಶ್‌ ಕುಮಾರ್‌ ಮುಂತಾದವರು ಉಪಸ್ಥಿತರಿದ್ದರು.

ಚಿತ್ರ 1,2

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಎಂ ಸಿದ್ದೇಶ್ ಮತದಾರರ ಕರಡು ಪಟ್ಟಿಯ ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಡಗು, ಕರಾವಳಿಯಲ್ಲಿ ಭರ್ಜರಿ ಮಳೆ
ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್​