ನೀರಾವರಿ ನಿಗಮಗಳ ಕಚೇರಿ ಸ್ಥಳಾಂತರ ವಿರೋಧಿಸುವವರ ವಿರುದ್ಧ ಕ್ರಮಕ್ಕೆ ರೈತರ ಆಗ್ರಹ

KannadaprabhaNewsNetwork |  
Published : Oct 30, 2026, 04:00 AM IST
29ಕೆಪಿಎಸ್ಎನ್ಡಿ1: ಶೇಖರಪ್ಪ ಧುಮತಿ ವಕೀಲ | Kannada Prabha

ಸಾರಾಂಶ

ಜಲಸಂಪನ್ಮೂಲ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ನೀರಾವರಿ ನಿಗಮ (ಕೆಎನ್‌ಎನ್‌ಎಲ್) ಹಾಗೂ ಕೃಷ್ಣಾಭಾಗ್ಯ ಜಲ ನಿಗಮದ (ಕೆಬಿಜೆಎನ್‌ಎಲ್) ಪ್ರಾದೇಶಿಕ ಕಚೇರಿಗಳನ್ನು ಬೆಂಗಳೂರಿನಿಂದ ಉತ್ತರ ಕರ್ನಾಟಕದ ಭಾಗಕ್ಕೆ ಸ್ಥಳಾಂತರಿಸಲು ವಿರೋಧಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಉತ್ತರ ಕರ್ನಾಟಕ ರೈತ ಅಭಿವೃದ್ಧಿ ಸಂಘ ಸರ್ಕಾರವನ್ನು ಒತ್ತಾಯಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಜಲಸಂಪನ್ಮೂಲ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ನೀರಾವರಿ ನಿಗಮ (ಕೆಎನ್‌ಎನ್‌ಎಲ್) ಹಾಗೂ ಕೃಷ್ಣಾಭಾಗ್ಯ ಜಲ ನಿಗಮದ (ಕೆಬಿಜೆಎನ್‌ಎಲ್) ಪ್ರಾದೇಶಿಕ ಕಚೇರಿಗಳನ್ನು ಬೆಂಗಳೂರಿನಿಂದ ಉತ್ತರ ಕರ್ನಾಟಕದ ಭಾಗಕ್ಕೆ ಸ್ಥಳಾಂತರಿಸಲು ವಿರೋಧಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಉತ್ತರ ಕರ್ನಾಟಕ ರೈತ ಅಭಿವೃದ್ಧಿ ಸಂಘ ಸರ್ಕಾರವನ್ನು ಒತ್ತಾಯಿಸಿದೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಯಾಸಿನ್ ಜವಳಿ ಮಾತನಾಡಿ, ಉತ್ತರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಮತ್ತು ಆ ಭಾಗದ ಜನರಿಗೆ ಆಡಳಿತ ಕಾರ್ಯಗಳು ಹತ್ತಿರವಾಗಲು ಕೃಷ್ಣಾಭಾಗ್ಯ ಜಲ ನಿಗಮದ ಕಚೇರಿಯನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಆಲಮಟ್ಟಿಗೆ ಹಾಗೂ ಕರ್ನಾಟಕ ನೀರಾವರಿ ನಿಗಮದ ಪ್ರಾದೇಶಿಕ ಕಚೇರಿಯನ್ನು ದಾವಣಗೆರೆಗೆ ಸ್ಥಳಾಂತರಿಸಲು ಕಳೆದ ಎಂಟು ವರ್ಷಗಳ ಹಿಂದೆಯೇ ಆದೇಶ ಹೊರಡಿಸಿದ್ದರೂ ಸರ್ಕಾರದ ನಿಯಮವನ್ನು ಅಧಿಕಾರಿಗಳು ಪಾಲಿಸುತ್ತಿಲ್ಲ ಎಂದು ಆರೋಪಿಸಿದರು.

ಕೃಷ್ಣಾಭಾಗ್ಯ ಜಲಾಶಯ ನಿಗಮವನ್ನು ಅಲಮಟ್ಟಿಗೆ ಸ್ಥಳಾಂತರವಾಗಿದೆ ಎಂದು ಹೈಕೋರ್ಟ್‌ಗೆ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದಾರೆ. ಕೆಲ ಅಧಿಕಾರಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಕೋರ್ಟ್ ಮತ್ತು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡುತ್ತಾ ಬರುತ್ತಿದ್ದಾರೆ. ಹಲವು ವರ್ಷಗಳಿಂದ ನಿಗಮದಲ್ಲೇ ಠಿಕಾಣಿ ಹೂಡಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.

ಬುಧವಾರ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ನಿಗಮದ ಆಡಳಿತ ಮಂಡಳಿ ಸಭೆಯಲ್ಲಿ, ಮುಖ್ಯ ಕಚೇರಿಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರವಾಗದಿರುವ ಬಗ್ಗೆ ಮುಖ್ಯಮಂತ್ರಿಯವರೇ ಅಸಮಾಧಾನ ವ್ಯಕ್ತಪಡಿಸಿ, ಅಧಿಕಾರಿಗಳನ್ನು ತರಾಟೆ ತಗೆದುಕೊಂಡಿದ್ದಾರೆ. ಕೂಡಲೇ ಕಚೇರಿಗಳನ್ನು ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಈ ಎರಡು ನಿಗಮಗಳ ಕೇಂದ್ರ ಕಚೇರಿಯನ್ನು. ಸ್ಥಳಾಂತರಕ್ಕೆ ಕೈಗೊಂಡ ಕ್ರಮದ ವರದಿಯನ್ನು ಕೂಡಲೇ ಸಲ್ಲಿಸುವಂತೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸೂಚಿಸಿದ್ದಾರೆ. ಆದರೂ, ಅಧಿಕಾರಿಗಳು ವಿಳಂಬ ಧೋರಣೆ ಅನುಸುರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರ ನಷ್ಟ ತಡೆಗೆ ಹಾಲಿನ ದರ 8 ರು. ಏರಿಕೆ - ಯಾವ ಪ್ಯಾಕೆಟ್‌ ಹಾಲಿಗೆ ಎಷ್ಟು?
ರೇ* ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ