ಕನ್ನಡಪ್ರಭ ವಾರ್ತೆ ಸಿರಿಗೆರೆ
ದೊಡ್ಡ ಅಣೆಕಟ್ಟುಗಳನ್ನು ಕಟ್ಟುವುದು ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ. ನದಿಗಳು ಹಾದು ಹೋಗುವ ಪ್ರದೇಶಗಳಲ್ಲಿನ ಕೆರೆಗಳನ್ನು ತುಂಬಿಸಬೇಕು. ಇದರಿಂದ ನದಿಗಳಲ್ಲಿನ ಪ್ರವಾಹ ಮಟ್ಟವನ್ನು ತಗ್ಗಿಸುವುದು, ಅಂತರ್ಜಲ ಮಟ್ಟವನ್ನು ವೃದ್ಧಿಸುವುದು, ಆಯಾಯಾ ಭಾಗದ ಜನರ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಗೆ ಕಾರಣವಾಗುತ್ತದೆ. ಇದು ಈಗ ಎದುರಿಸುತ್ತಿರುವ ಜಾಗತಿಕ ಹವಾಮಾನ ಬದಲಾವಣೆಯಂತಹ ಕ್ಲಿಷ್ಟ ಸಮಸ್ಯೆಗಳಿಗೆ ಪರಿಹಾರವಾಗುತ್ತದೆ ಎಂದು ತಿಳಿಸಿದರು.
ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ, ದೊಡ್ಡ ಡ್ಯಾಂಗಳ ನಿರ್ಮಾಣದಿಂದ ಪರಿಸರ ಹಾನಿ, ಮಿತಿಮೀರಿದ ವೆಚ್ಚ, ಡ್ಯಾಂಗಳಲ್ಲಿ ಊಳು ತುಂಬುವುದರಿಂದ ನೀರಿನ ಸಂಗ್ರಹ ಪ್ರಮಾಣ ಕಡಿಮೆ ಆಗುವ ಅಂಶಗಳನ್ನು ಬಗ್ಗೆ ಮಾತನಾಡಿದರು.ತರಳಬಾಳು ಕೃಷಿ ಕೇಂದ್ರದ ನಿರ್ದೇಶಕ ಹಾಗೂ ರಾಜ್ಯ ಯೋಜನಾ ಆಯೋಗದ ಮಾಜಿ ಸದಸ್ಯ ಕೆ.ಪಿ. ಬಸವರಾಜ್ ಮಾತನಾಡಿ, ಶ್ರೀಗಳ ನೇತೃತ್ವದಲ್ಲಿ ಜಾರಿಯಾಗುತ್ತಿರುವ ಏತ ನೀರಾವರಿ ಯೋಜನೆಗಳು ಮಾದರಿಯಾಗಿವೆ. ಜತೆಗೆ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ 3 ಜಿಲ್ಲೆಗಳಲ್ಲಿ ಆರಂಭವಾಗಿರುವ 17 ರೈತ ಉತ್ಪಾದಕ ಸಂಘಗಳನ್ನು ಸದೃಢಗೊಳಿಸಿ ರೈತರಿಗೆ ಬೇಕಾಗಿರುವ ಬೀಜ, ಗೊಬ್ಬರ, ಕೀಟನಾಶಕಗಳು ಮತ್ತು ಇತರೆ ಪರಿಕರಗಳು ಹಾಗೂ ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸಿ ಕೊಟ್ಟಿರುವುದು ಮಾದರಿಯಾಗಿದೆ ಎಂದರು.ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಟಿ.ಎನ್. ದೇವರಾಜ್ ಭಾಗವಹಿಸಿದ್ದರು.