ಯಾರಾದ್ರೂ ಸಿಎಂ ಮುಟ್ಟಲು ಆಗ್ತದಾ?: ವಿ.ಸೋಮಣ್ಣ

KannadaprabhaNewsNetwork |  
Published : Nov 15, 2024, 12:30 AM IST
ವಿ.ಸೋಮಣ್ಣ | Kannada Prabha

ಸಾರಾಂಶ

ನನ್ನನ್ನು ಮುಟ್ಟಿದರೆ ಜನ ಸುಮ್ಮನೆ ಬಿಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಅವರನ್ನು ಯಾರಾದರೂ ಮುಟ್ಟಲು ಆಗುತ್ತದೆಯೇ? ಅವರ ಮಾತಿನ ಮರ್ಮವನ್ನು ಅವರೇ ಅರ್ಥ ಮಾಡಿಕೊಳ್ಳಬೇಕು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವ್ಯಂಗ್ಯವಾಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ನನ್ನನ್ನು ಮುಟ್ಟಿದರೆ ಜನ ಸುಮ್ಮನೆ ಬಿಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಅವರನ್ನು ಯಾರಾದರೂ ಮುಟ್ಟಲು ಆಗುತ್ತದೆಯೇ? ಅವರ ಮಾತಿನ ಮರ್ಮವನ್ನು ಅವರೇ ಅರ್ಥ ಮಾಡಿಕೊಳ್ಳಬೇಕು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವ್ಯಂಗ್ಯವಾಡಿದರು.

ನಗರದಲ್ಲಿ ಗುರುವಾರ ಸುದ್ದಿಗಾರೊರೊಂದಿಗೆ ಮಾತನಾಡಿದ ಅವರು, ಸಿಎಂ ಆದವರನ್ನು ಯಾರಾದರೂ ಮುಟ್ಟಿದರೆ ಪೊಲೀಸರು ಕೇಸ್‌ ಮಾಡಿ ಒಳಗೆ ಹಾಕುತ್ತಾರೆ. ಮುಟ್ಟಲು ಆಗುವುದಿಲ್ಲ. ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ಅವರು ಜನರ ಭಾವನೆ ಕೆರಳಿಸುವಂತೆ ಮಾಡನಾಡುವುದು ಎಷ್ಟು ಸರಿ ಎಂದು ಖಾರವಾಗಿ ಪ್ರಶ್ನಿಸಿದರು.

ಸಿದ್ದರಾಮಯ್ಯ ಅನುಭವಿ ರಾಜಕಾರಣಿ. ಅವರು ಏನು ಮಾತನಾಡುತ್ತಾರೆ ಎನ್ನುವುದು ಅವರಿಗೆ ಬಿಡುತ್ತೇನೆ. ಸಾಮಾನ್ಯ ಜನರ ಭಾವನೆಗೆ ತದ್ವಿರುದ್ಧವಾಗಿ ಮಾತನಾಡುವುದು ಎಷ್ಟರ ಮಟ್ಟಿಗೆ ಸಮಂಜಸ? ರಾಜ್ಯ ಸರ್ಕಾರದ ಕಾರ್ಯವೈಖರಿ ಸರಿಯಿಲ್ಲ. ಈ ಮಟ್ಟದಲ್ಲಿ ಯಾವತ್ತಾದರೂ ನಡೆದಿತ್ತಾ? ನಿಮ್ಮನ್ನು ಯಾರು ಮುಟ್ಟುವುದು ಬೇಡ. ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಗಮನ ಹರಿಸಿ ಎಂದು ಸಲಹೆ ನೀಡಿದರು.

ಬೆಳಗಾವಿ- ಧಾರವಾಡ ನೇರ ರೈಲು ಮಾರ್ಗ ದಿ.ಸುರೇಶ ಅಂಗಡಿ ಅವರ ಕನಸು. ಅದನ್ನು ಇದೇ ಅವಧಿಯಲ್ಲಿ ನನಸು ಮಾಡುವ ಪ್ರಯತ್ನ ಮಾಡುತ್ತೇವೆ. ಈ ಮಾರ್ಗ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ಸಂಕೀರ್ಣ ಮತ್ತು ಸಮಸ್ಯೆಯಾಗಿದೆ. ಅದರ ಕುರಿತು ಚರ್ಚಿಸಿ ಪರಿಹರಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿವರು ಸಹ ಇದೇ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ, ರೈಲು ಓಡಿಸಲು ನಿರ್ಧರಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕೂಡ ಗಂಭೀರವಾಗಿ ಪರಿಗಣಿಸಿದ್ದಾರೆ ಎಂದರು.

ಧಾರವಾಡ ಜಿಲ್ಲಾಧಿಕಾರಿ ಜೊತೆಗೆ ವಿಡಿಯೋ ಕಾನ್ಫ್‌ರೆನ್ಸ್ ಮೂಲಕ ಮಾತನಾಡುತ್ತೇನೆ. ಲೋಕಾಪುರ- ಧಾರವಾಡ ರೈಲು ಮಾರ್ಗದ ಬಗ್ಗೆ ಗಮನ ಹರಿಸುತ್ತೇನೆ ಎಂದ ಅವರು, ಮುಂದಿನ ತಿಂಗಳಿನಿಂದ ಬೆಳಗಾವಿ- ಬೆಂಗಳೂರು ಮಧ್ಯೆ ವಂದೇ ಭಾರತ್ ಸ್ಲೀಪರ್‌ ರೈಲು ಸಂಚಾರ ಆರಂಭಿಸಲಿದೆ ಎಂದು ಹೇಳಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ