ಕನ್ನಡಪ್ರಭ ವಾರ್ತೆ ಮದ್ದೂರು
ಮದ್ದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಹಗರಲಿಂಗನದೊಡ್ಡಿ, ಡಿ.ಹೊಸೂರು, ಹಳ್ಳಿಕೆರೆ, ಅಂಕೇಗೌಡನದೊಡ್ಡಿ ಹಾಗೂ ಕೆಂಪೇಗೌಡನದೊಡ್ಡಿ ಗ್ರಾಮಗಳ ಗ್ರಾಮ ಪರಿಮಿತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ವಿರೋಧ ಪಕ್ಷದ ನಾಯಕರು ಯಾರಾದರೂ ಬಂದು ಕೆಲಸ ಮಾಡಿದರೆ ಅವರಿಗೆ ರೆಡ್ ಕಾರ್ಪೆಟ್ ಹಾಕಿ ಸ್ವಾಗತ ಮಾಡುತ್ತೇನೆ. ಅದು ಬಿಟ್ಟು ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ನನ್ನ ವಿರುದ್ಧ ಸರ್ವಾಧಿಕಾರಿ ಧೋರಣೆ ಎಂದರೆ ಅವರಿಗೆ ಶೋಭೆ ತರುವುದಿಲ್ಲ ಎಂದರು.ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಿಆರ್‌ಎಸ್ ಅನುದಾನ ತಂದು ಕೆ.ಬೆಳ್ಳೂರು ಗ್ರಾಮದಲ್ಲಿ ಶಾಲಾ ಕಟ್ಟಡ ನಿರ್ಮಾಣಕ್ಕೆ ತಡೆಯೊಡ್ಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಯಾವುದೇ ರೀತಿಯ ಧಮಕಿ ಹಾಕಿಲ್ಲ. ಅಂತಹ ಕುಯುಕ್ತಿ ಬುದ್ಧಿ ನನ್ನ ಜಾಯಮಾನದಲ್ಲೂ ಇಲ್ಲ. ಎರಡು ಕೊಠಡಿಗಳನ್ನು ನಿರ್ಮಿಸಲು ಮುಂದಾಗಿದ್ದಾರೆ. ಇನ್ನೂ ಎರಡು ಕೊಠಡಿ ನಿರ್ಮಿಸಲಿ. ಅದಕ್ಕೆ ನನ್ನ ಅಭ್ಯಂತರವಿಲ್ಲ ಎಂದರು.
ಕಾನೂನು ವ್ಯಾಪ್ತಿಯಲ್ಲಿ ಕೆಲಸ ಮಾಡಿದರೆ ಸರ್ವಾಧಿಕಾರಿ ಧೋರಣೆಯೇ, ನನಗೆ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಇಚ್ಛೆ ಇರಲಿಲ್ಲ. ಟ್ರಸ್ಟ್‌ನಿಂದಲೇ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದ್ದೆ. ಅದಕ್ಕೆ ಶಕ್ತಿ ಬೇಕು ಎಂಬ ಕಾರಣಕ್ಕೆ ರಾಜಕಾರಣಕ್ಕೆ ಬಂದಿದ್ದೇನೆ. ನಾನು ಚಿಲ್ಲರೆ ರಾಜಕಾರಣ ಮಾಡುವುದಿಲ್ಲ ಎಂದು ಗುಡುಗಿದರು.
ಬಿ.ಹೊಸೂರು, ಹಳ್ಳಿಕೆರೆ, ಕೆಂಪೇಗೌಡನದೊಡ್ಡಿ, ಅಂಕೇಗೌಡನದೊಡ್ಡಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಬಹಳಷ್ಟು ವರ್ಷಗಳಿಂದ ನೆನಗುದಿಗೆ ಬಿದ್ದಿತ್ತು. ಗ್ರಾಮಸ್ಥರ ಮನವಿ ಮೇರೆಗೆ ಈ ಗ್ರಾಮಗಳನ್ನು ಆಯ್ಕೆ ಮಾಡಿ 1 ಕೋಟಿ ರು. ವೆಚ್ಚದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದ್ದೇನೆ. ಈಗಾಗಲೇ 100 ಹಳ್ಳಿಗಳಿಗೆ ವಿಶೇಷವಾಗಿ ಪೂಜೆ ಮಾಡಿ ಕಾಮಗಾರಿಗೆ ಚಾಲನೆ ಕೊಡುವುದಾಗಿ ಭರವಸೆ ನೀಡಿದರು.
ಮುಖಂಡರಾದ ಕೂಳಗೆರೆ ಜಯರಾಮ್, ತಿಮ್ಮೇಗೌಡ, ಪಾಪಣ್ಣ, ಬೋರೇಗೌಡ, ಶ್ರೀನಿವಾಸ್, ಮನು, ಬಸವರಾಜು ಮತ್ತಿತರರಿದ್ದರು.