ರಾಜಭವನವೋ? ಕಲಾಸಿಪಾಳ್ಯ ಠಾಣೆಯೋ?: ಶರತ್‌ ಬಚ್ಚೇಗೌಡ

KannadaprabhaNewsNetwork |  
Published : Aug 30, 2024, 01:02 AM ISTUpdated : Aug 30, 2024, 01:03 AM IST
464 | Kannada Prabha

ಸಾರಾಂಶ

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ. ಅವರ ಒಂದು ಸಹಿಯಿಲ್ಲ. ಪ್ರಕರಣದಲ್ಲಿ 19 ಜನರ ಹೆಸರಿದ್ದರೂ ಅವರನ್ನು ಬಿಟ್ಟು ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡಿರುವುದು ರಾಜಕೀಯ ಷಡ್ಯಂತ್ರ ಎಂಬುದು ಸ್ಪಷ್ಟವಾಗುತ್ತದೆ ಎಂದು ಶಾಸಕ ಶರತ್‌ ಬಚ್ಚೇಗೌಡ ಹೇಳಿದ್ದಾರೆ.

ಹುಬ್ಬಳ್ಳಿ:

ಬಿಜೆಪಿಯವರು ರಾಜಭವನವನ್ನು ಪಕ್ಷದ ಕಚೇರಿಯನ್ನಾಗಿ ಮಾಡಿಕೊಂಡಿದ್ದಾರೆ. ಪ್ರತಿಯೊಂದು ಸಣ್ಣಪುಟ್ಟ ದೂರುಗಳನ್ನು ರಾಜ್ಯಪಾಲರಿಗೆ ನೀಡುತ್ತಿದ್ದಾರೆ. ಇದನ್ನು ಗಮನಿಸಿದರೆ ರಾಜ್ಯಪಾಲರ ಕಚೇರಿ ಕಲ್ಯಾಸಿಪಾಳ್ಯದ ಪೊಲೀಸ್ ಠಾಣೆಗಿಂತ ಕಡೆಯಾಗಿದೆಯಾ? ಎಂಬ ಅನುಮಾನ ಬರುತ್ತಿದೆ ಎಂದು ಕಿಯೋನಿಕ್ಸ್ ಅಧ್ಯಕ್ಷ ಹಾಗೂ ಶಾಸಕ ಶರತ್ ಬಚ್ಚೇಗೌಡ ವ್ಯಂಗ್ಯವಾಡಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಕಚೇರಿ ಹಾಗೂ ಬಿಜೆಪಿ ಕಚೇರಿಗೆ ಯಾವುದೇ ವ್ಯತ್ಯಾಸ ಕಾಣುತ್ತಿಲ್ಲ. ವಿವಿಧ ತನಿಖಾ ಸಂಸ್ಥೆಗಳು ಶಶಿಕಲಾ ಜೊಲ್ಲೆ, ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ದೂರಿಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರಲಿಲ್ಲ. ಆದರೆ ಖಾಸಗಿ ದೂರಿಗೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರು. ಇದೀಗ ಸಚಿವ ಪ್ರಿಯಾಂಕಾ ಖರ್ಗೆ ವಿರುದ್ಧ ಕೂಡ ಬಿಜೆಪಿಯವರು ದೂರು ನೀಡಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ್ದಾರೆ. ಹೀಗೆ ಸಣ್ಣ ಪುಟ್ಟ ದೂರುಗಳನ್ನು ರಾಜ್ಯಪಾಲರಿಗೆ ನೀಡುತ್ತಿದ್ದಾರೆ. ಇದನ್ನು ನೋಡಿದರೆ ರಾಜ್ಯಭವನ ಕಲಾಸಿ ಪಾಳ್ಯ ಠಾಣೆಗಿಂತಲೂ ಕಡೆಯಾಯಿತಾ? ಎಂದು ಪ್ರಶ್ನಿಸಿದರು.

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ. ಅವರ ಒಂದು ಸಹಿಯಿಲ್ಲ. ಪ್ರಕರಣದಲ್ಲಿ 19 ಜನರ ಹೆಸರಿದ್ದರೂ ಅವರನ್ನು ಬಿಟ್ಟು ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡಿರುವುದು ರಾಜಕೀಯ ಷಡ್ಯಂತ್ರ ಎಂಬುದು ಸ್ಪಷ್ಟವಾಗುತ್ತದೆ ಎಂದು ಕಿಡಿಕಾರಿದರು.

ಮುಡಾ ಹಗರಣದಲ್ಲಿ ಕಾಂಗ್ರೆಸ್ಸಿನವರ ಕೈವಾಡ ಎಂಬ ಬಿಜೆಪಿಯವರ ಆರೋಪಕ್ಕೆ ತಿರುಗೇಟು ನೀಡಿದ ಬಚ್ಚೇಗೌಡ, ಇದು ಶುದ್ದ ಸುಳ್ಳು, ಸಿದ್ದರಾಮಯ್ಯ ಬೆಂಬಲಕ್ಕೆ ಎಲ್ಲ ಶಾಸಕರು ಹಾಗೂ ಹೈಕಮಾಂಡ್ ಇದೆ. ಅಷ್ಟೆ ಅಲ್ಲ ರಾಜ್ಯದ ಜನರು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದಾರೆ. ಹೀಗಿದ್ದರೂ ಹಿಂದುಳಿದ ನಾಯಕನಿಗೆ ಮಸಿ ಬಳಿಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು.

ಇದೀಗ ಬಿಜೆಪಿ ಪಾದಯಾತ್ರೆಗಿಂತಲೂ ಕಾಂಗ್ರೆಸ್ ಜನಾಂದೋಲನಕ್ಕೆ ಜನರು ಹೆಚ್ಚಿನ ಬೆಂಬಲ ನೀಡಿದ್ದಾರೆ. ಆದರೆ ಬಿಜೆಪಿಯವರು ಹಸಿಸುಳ್ಳು ಹಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರಸಂಗವೇ ಬರುವುದಿಲ್ಲ ಎಂದು ಹೇಳಿದರು.

ನಾವು ಅಧಿಕಾರ ಸ್ವೀಕರಿಸಿದ ದಿನದಿಂದಲೂ ಸರ್ಕಾರ ಕೆಡುವಬೇಕೆಂದು ಪ್ರಯತ್ನ ಬಿಜೆಪಿ-ಜೆಡಿಎಸ್‌ ಮಾಡುತ್ತಿವೆ. ಮೊದಲು ಶಾಸಕರನ್ನು 50-60 ಕೋಟಿ ಖರೀದಿಸಲು ಪ್ರಯತ್ನಿಸಿದರು. ಆದರೆ ಅದು ಸಾಧ್ಯವಾಗಲಿಲ್ಲ ಎಂದ ಮೇಲೆ ಐಟಿ, ಇಡಿ ಬಿಟ್ಟು ಪ್ರಯತ್ನಿಸಿದರು. ಅದು ಸಾಧ್ಯವಾಗದಿದ್ದಾಗ ಇದೀಗ ರಾಜ್ಯಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಅಷ್ಟೇ ಎಂದರು.

PREV

Recommended Stories

ಇಂದಿನಿಂದ ಪ್ರೊ ಕಬಡ್ಡಿ ಲೀಗ್‌ ಶುರು : 12ನೇ ಆವೃತ್ತಿ । 12 ತಂಡ, ಒಟ್ಟು 117 ಪಂದ್ಯ
‘ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರು ಕಷ್ಟಕ್ಕೆ ಸಿಲುಕ್ತಾರೆ’