ಶಾಸಕ ಪ್ರದೀಪ್ ಈಶ್ವರ್ ಜೀವಕ್ಕೆ ಆಪತ್ತು?

KannadaprabhaNewsNetwork |  
Published : Jul 04, 2026, 01:30 AM IST
ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ತಪಾಸಣೆ | Kannada Prabha

ಸಾರಾಂಶ

ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ನಡೆದ ಗದ್ದಲ ಹಾಗೂ ಅದರ ನಂತರ ಜಿಲ್ಲೆಯ ರಾಜಕೀಯ ವಲಯದಲ್ಲಿ ಉಂಟಾಗಿರುವ ಬೆಳವಣಿಗೆಗಳ ಹಿನ್ನೆಲೆ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಜೀವಭಯದ ಆತಂಕ ಎದುರಾಗಿರುವ ಕಾರಣ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸುವ ಅಗತ್ಯವಿದೆ ಎಂದು ರಾಜ್ಯ ಗುಪ್ತಚರ ಇಲಾಖೆ ಗೃಹ ಇಲಾಖೆಗೆ ವರದಿ ಸಲ್ಲಿಸಿದೆ

(ಪ್ರದೀಪ್‌ ಈಶ್ವರ್‌ ಮಗ್‌ಶಾಟ್‌)

ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ:

ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ನಡೆದ ಗದ್ದಲ ಹಾಗೂ ಅದರ ನಂತರ ಜಿಲ್ಲೆಯ ರಾಜಕೀಯ ವಲಯದಲ್ಲಿ ಉಂಟಾಗಿರುವ ಬೆಳವಣಿಗೆಗಳ ಹಿನ್ನೆಲೆ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಜೀವಭಯದ ಆತಂಕ ಎದುರಾಗಿರುವ ಕಾರಣ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸುವ ಅಗತ್ಯವಿದೆ ಎಂದು ರಾಜ್ಯ ಗುಪ್ತಚರ ಇಲಾಖೆ ಗೃಹ ಇಲಾಖೆಗೆ ವರದಿ ಸಲ್ಲಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಜೂ. 27ರಂದು ಸರ್ಕಾರದ ವತಿಯಿಂದ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಶಾಸಕ ಪ್ರದೀಪ್ ಈಶ್ವರ್ ಕಾರ್ಯಕ್ರಮದಲ್ಲಿ ಇರಬಾರದು, ಕುಮಾರಸ್ವಾಮಿ ಮತ್ತು ದೇವೇಗೌಡರ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ, ಗೋ ಬ್ಯಾಕ್ ಪ್ರದೀಪ್ ಈಶ್ವರ್ ಎಂದು ಘೋಷಣೆ ಕೂಗುತ್ತಾ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಅಪಮಾನ ಮಾಡಿದ್ದರು. ಇದರಿಂದ ಕುಪಿತರಾದ ಶಾಸಕರು ನಂತರ ಕಾರ್ಯಕ್ರಮ ಮುಗಿಸಿ ಹೊರ ಬಂದಾಗ ಹೊರಗೆ ಬಂದು ತೋಳು ತಟ್ಟಿ ಅಬ್ಬರಿಸಿದ್ದು, ಪ್ರತಿಭಟನಾಕಾರರು ಚಪ್ಪಲಿ ಎಸೆದಿದ್ದು ಭಾರೀ ಸುದ್ದಿಯಾಗಿತ್ತು. ಈ ಅನಿರೀಕ್ಷಿತ ಗಲಾಟೆ ಮತ್ತು ಗದ್ದಲ ಕ್ಷೇತ್ರದಲ್ಲಿ ಅಶಾಂತಿಗೆ ಕಾರಣವಾಗಿತ್ತು. ಮೇಲಾಗಿ ಈ ಘಟನೆ ರಾಜಕೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮುಖಂಡರ ನಡುವೆ ಆರೋಪ-ಪ್ರತ್ಯಾರೋಪ, ದೂರು ಪ್ರತಿದೂರಿಗೆ ಕಾರಣವಾಗಿದೆ. ಈ ಬೆಳವಣಿಗೆಗಳ ಬೆನ್ನಲ್ಲೇ ಜುಲೈ 2ರಂದು ರಾಜ್ಯ ಗುಪ್ತಚರ ಇಲಾಖೆಯ ಹಿರಿಯ ಅಧಿಕಾರಿಗಳು ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡಿ ಕ್ಷೇತ್ರದ ವಿವಿಧ ಭಾಗಗಳಲ್ಲಿ ಸಂಚರಿಸಿ ಮಾಹಿತಿ ಕಲೆ ಹಾಕಿರುವುದು ಗಮನಾರ್ಹವಾಗಿದೆ.ಮುನ್ನೆಚ್ಚರಿಕೆ ಕ್ರಮಗಳಿಗೆ ಶಿಫಾರಸು ಸಲ್ಲಿಕೆಯಾಗಿರುವ ಕ್ಷೇತ್ರದ ಅಧ್ಯಯನದ ವರದಿಯಲ್ಲಿ ಶಾಸಕ ಪ್ರದೀಪ್ ಈಶ್ವರ್‌ಗೆ ಹೆಚ್ಚುವರಿ ಪೊಲೀಸ್ ಭದ್ರತೆ ಒದಗಿಸುವುದು, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಲಾಗಿದೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಆದರೆ ಈ ಕುರಿತು ಪೊಲೀಸ್ ಇಲಾಖೆ ಅಥವಾ ಗೃಹ ಇಲಾಖೆಯಿಂದ ಅಧಿಕೃತ ಮಾಹಿತಿ ಇನ್ನೂ ಹೊರಬಂದಿಲ್ಲ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರದ ಸವವಲತ್ತುಗಳನ್ನು ಶ್ರಮಿಕ ವರ್ಗದವರು ಸದ್ಭಳಕೆ ಮಾಡಬೇಕು: ಡಾ.ಕೆ.ಪಿ.ಅಂಶುಮಂತ್
ಡೇರಿ ಸಿಬ್ಬಂದಿ ಆರೋಗ್ಯ ಕಾಳಜಿ ವಹಿಸಿ: ಬಮೂಲ್‌ ನಿರ್ದೇಶಕ