ಕನ್ನಡಪ್ರಭ ವಾರ್ತೆ ಮಂಡ್ಯ
ಅಭಿವೃದ್ಧಿ, ಆಡಳಿತದ ಬಗ್ಗೆ ಮಾತನಾಡಬೇಕೆನ್ನುವವರು ಶಾಸಕರೂ ಅದೇ ವಿಚಾರವಾಗಿ ಮಾತನಾಡಬೇಕಿತ್ತು. ಸೈಕೋ ಎಂದು ಹೇಳಿರುವುದು ವೈಯಕ್ತಿಕ ತೇಜೋವಧೆಯಲ್ಲದೆ ಮತ್ತೇನು. ಹಿರಿಯರ ಬಗ್ಗೆ ಮಾತನಾಡುವಾಗ ಗೌರವ ಕೊಟ್ಟು ಮಾತನಾಡುವುದನ್ನು ಶಾಸಕರು ಕಲಿಯಲಿ. ಇದೇ ಮೊದಲಬಾರಿಗೆ ಶಾಸಕರಾಗಿದ್ದಾರೆ. ಸ್ವಲ್ಪ ತಾಳ್ಮೆಯಿಂದ ಹೆಜ್ಜೆ ಇಡಲಿ. ದೊಡ್ಡವರ ಬಗ್ಗೆ ನಾಲಿಗೆಯನ್ನು ಹರಿಯಬಿಡದೆ ಹಿಡಿದಲ್ಲಿಟ್ಟುಕೊಂಡು ಮಾತನಾಡುವಂತೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅಭಿವೃದ್ಧಿ ವಿಚಾರದಲ್ಲಿ ಜಿಲ್ಲೆಗೆ ೧೦ ಸಾವಿರ ಕೋಟಿ ರು. ಹಣ ತಂದಿರುವುದಾಗಿ ಹೇಳುತ್ತಿರುವುದು ಸುಳ್ಳಲ್ಲವೇ. ೧೦ ಸಾವಿರ ಕೋಟಿ ರು. ಕಾಮಗಾರಿ ನಡೆದಿದ್ದರೆ ಜಿಲ್ಲೆ ಅಭಿವೃದ್ಧಿಯಲ್ಲಿ ಎಲ್ಲೋ ಇರುತ್ತಿತ್ತು. ಗೃಹಲಕ್ಷ್ಮೀ, ಗೃಹಜ್ಯೋತಿ ಯೋಜನೆಗಳನ್ನು ಮುಂದುವರೆಸುವ ಶಕ್ತಿ ಇಲ್ಲದೆ ಜನರಿಗೆ ಅಗತ್ಯವಿಲ್ಲದ ದಾಖಲೆಗಳನ್ನು ನೀಡುವಂತೆ ಹೇಳಿ ಅವರ ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅಭಿವೃದ್ಧಿ ಬಗ್ಗೆ ಯಾರೂ ಸರ್ಕಾರವನ್ನು ಪ್ರಶ್ನಿಸದಂತೆ ಮಾಡುತ್ತಿರುವ ತಂತ್ರವಿದು ಎಂದು ಟೀಕಿಸಿದರು.ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಮಾಸ್ ಲೀಡರ್. ಅವರಿಗೆ ಇಂಥದ್ದೇ ಕ್ಷೇತ್ರ ಅಭಿವೃದ್ಧಿಯಾಗಬೇಕು ಎನ್ನುವುದಕ್ಕಿಂತ ರಾಜ್ಯದ ಅಭಿವೃದ್ಧಿ, ನಾಡಿನ ನೆಲ-ಜಲ ಸಂರಕ್ಷಣೆ, ರೈತರ ಉದ್ಧಾರವೇ ಅವರ ಪ್ರಮುಖ ಧ್ಯೇಯವಾಗಿದೆ. ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದ ಜನರ ಹಿತ ಕಾಪಾಡಲು ಲಾಟರಿ, ಸಾರಾಯಿ ನಿಷೇಧ, ರೈತರ ಸಾಲ ಮನ್ನಾ ಮಾಡಿದರು. ಗ್ರಾಮ ವಾಸ್ತವ್ಯವನ್ನು ಮೊದಲ ಬಾರಿಗೆ ರಾಜ್ಯಕ್ಕೆ ಪರಿಚಯಿಸಿ ಹಳ್ಳಿ ಜನರ ಕಷ್ಟಗಳನ್ನು ಆಲಿಸಿದರು. ಇವೆಲ್ಲಾ ನಿಮ್ಮಂಥವರ ಕಣ್ಣಿಗೆ ಕಾಣಿಸುವುದಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.
ಕಾಂಗ್ರೆಸ್ ನಾಯಕರನ್ನು ಮೆಚ್ಚಿಸುವ ಸಲುವಾಗಿ ಏನೇನೋ ಮಾತನಾಡಬೇಡಿ. ಯಾರ ಬಗ್ಗೆಯಾದರೂ ಮಾತನಾಡಬೇಕಾದರೆ ಎಚ್ಚರವಿರಲಿ. ಕುಮಾರಸ್ವಾಮಿ ವಿರುದ್ಧ ಆಡಿರುವ ಮಾತುಗಳಿಗೆ ಒಂದು ವಾರದೊಳಗೆ ಕ್ಷಮೆ ಕೇಳದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.