ತಪ್ಪನ್ನು ಮುಚ್ಚಿಡಲು ಜಿಲ್ಲಾಡಳಿತ ಕಸರತ್ತು?

KannadaprabhaNewsNetwork |  
Published : Feb 03, 2024, 01:48 AM IST
2ಕೆಎಂಎನ್‌ಡಿ-9ತಿದ್ದುಪಡಿ ಆದೇಶ ಪತ್ರ. | Kannada Prabha

ಸಾರಾಂಶ

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್‌ ತನ್ವೀರ್‌ ಆಸಿಫ್‌ ಧ್ವಜಸ್ತಂಭ ತೆರವುಗೊಳಿಸುವಂತೆ ಯಾವುದೇ ಆದೇಶ ಹೊರಡಿಸಿಲ್ಲವೆಂದು ತಿಳಿಸಿದ್ದರೆ, ತಾಪಂ ಆಡಳಿತಾಧಿಕಾರಿ ಹಾಗೂ ಜಿಪಂ ಉಪ ಕಾರ್ಯದರ್ಶಿ ಎಂ.ಬಾಬು ಧ್ವಜಸ್ತಂಭ ತೆರವುಗೊಳಿಸುವ ಆದೇಶವನ್ನು ಮೊದಲು ಹೊರಡಿಸಿ ನಂತರ ತಿದ್ದುಪಡಿ ಆದೇಶ ಹೊರಡಿಸಿರುವುದಾಗಿ ತಿಳಿಸಿದ್ದಾರೆ. ಇಬ್ಬರು ಅಧಿಕಾರಿಗಳ ಹೇಳಿಕೆಗಳು ಸಾರ್ವಜನಿಕವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿವೆ.

ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದ ರಂಗಮಂದಿರ ಮುಂಭಾಗದಲ್ಲಿರುವ ಧ್ವಜಸ್ತಂಭ ವಿವಾದಕ್ಕೆ ಸಂಬಂಧಿಸಿ ತಪ್ಪನ್ನು ಮುಚ್ಚಿಡಲು ನಾನಾ ರೀತಿಯ ಕಸರತ್ತುಗಳನ್ನು ಜಿಲ್ಲಾಡಳಿತ ನಡೆಸುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಗೊಂದಲ ಸೃಷ್ಟಿಸುವಂತೆ ಮಾಡಿದೆ.ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್‌ ತನ್ವೀರ್‌ ಆಸಿಫ್‌ ಧ್ವಜಸ್ತಂಭ ತೆರವುಗೊಳಿಸುವಂತೆ ಯಾವುದೇ ಆದೇಶ ಹೊರಡಿಸಿಲ್ಲವೆಂದು ತಿಳಿಸಿದ್ದರೆ, ತಾಪಂ ಆಡಳಿತಾಧಿಕಾರಿ ಹಾಗೂ ಜಿಪಂ ಉಪ ಕಾರ್ಯದರ್ಶಿ ಎಂ.ಬಾಬು ಧ್ವಜಸ್ತಂಭ ತೆರವುಗೊಳಿಸುವ ಆದೇಶವನ್ನು ಮೊದಲು ಹೊರಡಿಸಿ ನಂತರ ತಿದ್ದುಪಡಿ ಆದೇಶ ಹೊರಡಿಸಿರುವುದಾಗಿ ತಿಳಿಸಿದ್ದಾರೆ. ಇಬ್ಬರು ಅಧಿಕಾರಿಗಳ ಹೇಳಿಕೆಗಳು ಸಾರ್ವಜನಿಕವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿವೆ.ಜ.25ರಂದು ವಿವಾದಿತ ಸ್ಥಳದಲ್ಲಿ ಧ್ವಜಸ್ತಂಭ ತೆರವುಗೊಳಿಸುವಂತೆ ಆದೇಶ ಹೊರಡಿಸಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಷಯ ಬಹಿರಂಗಗೊಂಡ ನಂತರ ಜಿಪಂ ಸಿಇಒ ಶೇಖ್‌ ತನ್ವೀರ್‌ ಆಸಿಫ್‌ ರು ಧ್ವಜಸ್ತಂಭ ತೆರವುಗೊಳಿಸುವ ಸಂಬಂಧ ಯಾವುದೇ ಆದೇಶವಿರುವುದಿಲ್ಲವೆಂದು ಪತ್ರಿಕಾ ಪ್ರಕಟಣೆ ಹೊರಡಿಸಿದ್ದರು.ಇದಾದ ಕೆಲ ಗಂಟೆಗಳಲ್ಲೇ ತಾಪಂ ಆಡಳಿತಾಧಿಕಾರಿ ಎಂ.ಬಾಬು, ಜ.25ರ ಆದೇಶದಲ್ಲಿ ಸ್ಥಳದಲ್ಲಿರುವ ಧ್ವಜಸ್ತಂಭವನ್ನು ತೆರವುಗೊಳಿಸಿ ಗ್ರಾಮ ಪಂಚಾಯಿತಿ ಆಸ್ತಿಯನ್ನು ಸುಪರ್ದಿಗೆ ಪಡೆದು ಯಥಾಸ್ಥಿತಿ ಕಾಪಾಡಲು ಕ್ರಮ ವಹಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿತ್ತು. ಆನಂತರದಲ್ಲಿ ತಿದ್ದುಪಡಿ ಆದೇಶ ಹೊರಡಿಸಿದ್ದು, ಗ್ರಾಮ ಪಂಚಾಯಿತಿ ಆಸ್ತಿಯಾದ ರಂಗಮಂದಿರದ ಮುಂಭಾಗದಲ್ಲಿರುವ ಧ್ವಜ ಸ್ತಂಭವನ್ನು ಗ್ರಾಪಂ ಸುಪರ್ದಿಗೆ ಪಡೆದುಕೊಳ್ಳಲು ಕ್ರಮ ವಹಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.ಜಿಪಂ ಸಿಇಒರವರು ಧ್ವಜಸ್ತಂಭ ತೆರವುಗೊಳಿಸುವ ಯಾವುದೇ ಆದೇಶವಿರಲಿಲ್ಲವೆಂದಾದ ಮೇಲೆ ತಿದ್ದುಪಡಿ ಆದೇಶಕ್ಕೆ ಅವಕಾಶ ಸಿಕ್ಕಿದ್ದು ಹೇಗೆ? ಸಿಇಒ ಹಾಗೂ ತಾಪಂ ಆಡಳಿತಾಧಿಕಾರಿ ಬಿಡುಗಡೆ ಮಾಡಿರುವ ಗೊಂದಲದ ಆದೇಶಪತ್ರಗಳು ಹೊಸದೊಂದು ರೀತಿಯ ಚರ್ಚೆಗೆ ಕಾರಣವಾಗುತ್ತಿವೆ.ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆದೇಶಪತ್ರ ಹೇಗೆ ಸೋರಿಕೆಯಾಯಿತು ಎಂಬ ಬಗ್ಗೆ ತಲೆಕೆಡಿಸಿಕೊಂಡಿರುವ ಜಿಲ್ಲಾಡಳಿತ, ಅದನ್ನು ಮುಚ್ಚಿಹಾಕುವ ಪ್ರಯತ್ನವಾಗಿ ಕಸರತ್ತು ನಡೆಸುತ್ತಾ ಎಡವಟ್ಟುಗಳನ್ನು ಮಾಡಿಕೊಳ್ಳುತ್ತಲೇ ಇದೆ.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ