- ಸಿ.ಟಿ.ರವಿ ಆಸ್ಪತ್ರೆಗೆ ದಿಢೀರ್ ಭೇಟಿ । ಹೊರ ರೋಗಿ ಮತ್ತು ಒಳ ರೋಗಿ ವಿಭಾಗದ ವಾರ್ಡ್‌ಗಳಿಗೆ ಭೇಟಿಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಇದು ನಗರದ ಅರಳುಗುಪ್ಪೆ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಕಂಡು ಬಂದ ದೃಶ್ಯಗಳು.
ಸೋಮವಾರ ಮಧ್ಯಾಹ12.30ರ ಸುಮಾರಿಗೆ ಸಿ.ಟಿ,ರವಿ ದಿಢೀರ್‌ನೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ಹೊರ ರೋಗಿ ಮತ್ತು ಒಳ ರೋಗಿ ವಿಭಾಗದ ವಾರ್ಡ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಈ ವೇಳೆ ಬಹುತೇಕ ರೋಗಿಗಳಿಗೆ ವೈದ್ಯರು, ಕೆಲವು ಔಷಧಿ ಚೀಟಿ ಬರೆದುಕೊಟ್ಟು, ಖಾಸಗಿ ಮೆಡಿಕಲ್ ಶಾಪ್‌ನಿಂದ ಖರೀದಿ ಮಾಡಿ ತಂದರೆ ಆ ಔಷಧಿ ಬಳಸಿ ಚಿಕಿತ್ಸೆ ಕೊಡಲಾಗುತ್ತಿದೆ ಎಂಬುದು ತಿಳಿದು ಬಂದಿದೆ
ಡಾಕ್ಟರ್ ಇಲ್ಲ, ವಿದ್ಯಾರ್ಥಿಗಳಿಂದ ಚಿಕಿತ್ಸೆ: ಆರೋಪ
ಡಯಾಲಿಸಿಸ್ ವಿಭಾಗದ ತಪಾಸಣೆ
----ಬಾಕ್ಸ್---
ಜಿಲ್ಲಾಸ್ಪತ್ರೆ ಆವರಣದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ವಿಲೇವಾರಿ ಸಮಸ್ಯೆ ಆಗಿದೆ. ನಗರಸಭೆ ಸಿಬ್ಬಂದಿ ಕಸ ತೆಗೆದುಕೊಂಡು ಹೋಗುತ್ತಿಲ್ಲ ಎಂದು ಆಸ್ಪತ್ರೆ ಅಧಿಕಾರಿಗಳು ಸಿ.ಟಿ.ರವಿ ಅವರಿಗೆ ದೂರಿದರು.
ಔಷಧಿ ಪೂರೈಸದಷ್ಟು ಸರ್ಕಾರ ದಿವಾಳಿ?
ದಿಢೀರ್ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗೆ ಬರುವವರು ಅಸಹಾಯಕರು ಮತ್ತು ಬಡವರು. ಇಲ್ಲಿಯೇ ಔಷಧಿ ಇಲ್ಲದಿದ್ದರೆ ಅವರು ಎಲ್ಲಿಂದ ಹಣ ತರಬೇಕು? ರಾಜ್ಯದಾದ್ಯಂತ ಪ್ರತಿ ಸರ್ಕಾರಿ ಆಸ್ಪತ್ರೆ ಗಳಲ್ಲಿ ಔಷಧಿಗಳ ಕೊರತೆ ಕಾಡುತ್ತಿದೆ. ಪರಿಶೀಲನೆ ಮಾಡಿದ 10 ರೋಗಿಗಳ ಪೈಕಿ 6 ರಿಂದ 7 ರೋಗಿಗಳಿಗೆ ಹೊರಗಿನಿಂದ ಔಷಧಿ ತರಿಸಿ ಚಿಕಿತ್ಸೆ ಕೊಡಲಾಗುತ್ತಿದೆ.
ರಾಜ್ಯ ಸರ್ಕಾರಕ್ಕೆ ಆದ್ಯತೆ ಯಾವುದು? ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸಂಪುಟದ ಸ್ಥಾನಮಾನ ನೀಡುವುದು ಮೊದಲ ಆದ್ಯತೆಯೋ ಅಥವಾ ಜೀವ ಉಳಿಸಿಕೊಳ್ಳಲು ಬರುವ ಬಡವರಿಗೆ ಚಿಕಿತ್ಸೆ ನೀಡುವುದು ಆದ್ಯತೆಯೋ? ಎಂದು ಟೀಕಿಸಿದರು.ಡಯಾಲಿಸಿಸ್ ಘಟಕದ ಟೆಂಡರ್ ಪಡೆದ ಖಾಸಗಿ ಕಂಪನಿಗೆ ಕಳೆದ 10 ತಿಂಗಳಿನಿಂದ ಸರ್ಕಾರ ಒಂದು ರು. ಹಣ ನೀಡಿಲ್ಲ. ಇದರಿಂದ ರೋಗಿಗಳಿಗೆ ಚಿಕಿತ್ಸೆ ಸಿಗದಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಔಷಧಿಗಳ ಸರಬರಾಜು ಸಂಬಂಧ ಸರ್ಕಾರ ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ. ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಬಡ ರೋಗಿಗಳಿಗೆ ಅಗತ್ಯವಿರುವ ಔಷಧಿ ಹಾಗೂ ಸೌಲಭ್ಯಗಳನ್ನು ಒದಗಿಸಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು.ಆಸ್ಪತ್ರೆ ರೋಗಿಗಳಿಗೆ ಊಟ ಪೂರೈಕೆ ಮಾಡುವವರು ಅನುಚಿತವಾಗಿ ನಡೆದುಕೊಳ್ಳಲಾಗುತ್ತಿದೆ ಎಂಬ ದೂರು ಕೇಳಿ ಬಂದಿದೆ. ಜಿಲ್ಲಾ ಸರ್ಜನ್ ಆಸ್ಪತ್ರೆಯಲ್ಲಿರುವ ಸಮಸ್ಯೆ ಬಗ್ಗೆ ಗಮನಕ್ಕೆ ತರಬೇಕು. ಈ ಬಗ್ಗೆ ಆರೋಗ್ಯ ಇಲಾಖೆ ಸಚಿವರು ಹಾಗೂ ಆಯುಕ್ತರೊಂದಿಗೆ ಮಾತನಾಡಲಾಗುವುದು ಎಂದು ಹೇಳಿದರು.