- ಶ್ರೀಮದ್ ಅಭಿನವ ರೇಣುಕ ಮಂದಿರದಲ್ಲಿ ರಂಭಾಪುರಿ ಶ್ರೀ ಸಾನ್ನಿಧ್ಯದಲ್ಲಿ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ದಾವಣಗೆರೆ
ಶ್ರೀಮದ್ ವೀರಶೈವ ಸದ್ಬೋಧನಾ ಸಂಸ್ಥೆ ವತಿಯಿಂದ ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳ 28ನೇ ವರ್ಷದ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಧರ್ಮ ಸಮಾವೇಶವನ್ನು ಆ.6ರಿಂದ ಆರಂಭವಾಗಿದ್ದು, ಆ.10ರವರೆಗೆ ಪ್ರತಿದಿನ ಸಂಜೆ 6 ಗಂಟೆಗೆ ನಗರದ ಶ್ರೀಮದ್ ಅಭಿನವ ರೇಣುಕ ಮಂದಿರದಲ್ಲಿ ನಡೆಯಲಿದೆ.ಆ.7ರ ಧರ್ಮಸಭೆಯಲ್ಲಿ ರಂಭಾಪುರಿ ಶ್ರೀ ದಿವ್ಯ ಸಾನಿಧ್ಯದಲ್ಲಿ ಆವರಗೊಳ್ಳ-ದಾವಣಗೆರೆಯ ಶ್ರೀ ಸುಜ್ಞಾನಪ್ರಭು ಶಿವಲಿಂಗೇಶ್ವರ ಶಿವಾಚಾರ್ಯ ಸ್ವಾಮಿಗಳು ಸಮಾವೇಶದ ನೇತೃತ್ವ ವಹಿಸಲಿದ್ದಾರೆ. ಕಣ್ವಕುಪ್ಪಿ ಗವಿಮಠದ ಡಾ.ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು ಉಪದೇಶ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹರಿಹರ ಶಾಸಕ ಬಿ.ಪಿ. ಹರೀಶ್, ಬಿಜೆಪಿ ಮುಖಂಡರಾದ ಗಾಯತ್ರಿ ಸಿದ್ದೇಶ್ವರ, ಯಶವಂತ ರಾವ್ ಜಾಧವ್, ದಾವಣಗೆರೆ- ಹರಿಹರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಎನ್.ಎ.ಮುರುಗೇಶ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಭಾಗವಹಿಸಲಿದ್ದಾರೆ. ಖ್ಯಾತ ವಕೀಲರಾದ ಸಿ.ಸಂತೋಷ್ ಚನ್ನಬಸಪ್ಪ ಪಾವಟೆ ಅವರಿಗೆ ''''''''ನ್ಯಾಯ ದಾನ ವಾದ ಚತುರ'''''''' ಪ್ರಶಸ್ತಿ ಪ್ರದಾನ ಮಾಡಲಾಗುವುದು ಹಾಗೂ ''''''''ಗುರುಪಥ ದರ್ಶನ'''''''' ಕೃತಿ ಬಿಡುಗಡೆಗೊಳ್ಳಲಿದೆ.
ಆ.9ರಂದು ಮರಿಯಮ್ಮನಹಳ್ಳಿಯ ಶ್ರೀ ಗುರುಪಾದ ಶಿವಾಚಾರ್ಯ ಸ್ವಾಮೀಜಿ ಸಮಾವೇಶ ನೇತೃತ್ವ ವಹಿಸಲಿದ್ದಾರೆ. ಶಿರಸಂಗಿ ಕಾಡಸಿದ್ದೇಶ್ವರ ಮಠದ ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮಿಗಳು ಉಪದೇಶಾಮೃತ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಪ ಸದಸ್ಯ ಅಬ್ದುಲ್ ಜಬ್ಬಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಎಸ್. ಗಣೇಶ್, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ಬಿಜೆಪಿ ಜಿಲ್ಲಾ ಮುಖಂಡ ಲೋಕಿಕೆರೆ ನಾಗರಾಜ, ಬಿಜೆಪಿ ಎಸ್ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಚಿದಾನಂದಪ್ಪ, ಮಾಜಿ ಮಹಾಪೌರ ಬಿ.ಜೆ. ಅಜಯ್ ಕುಮಾರ, ದೂಡಾ ಮಾಜಿ ಅಧ್ಯಕ್ಷ ಅಯೂಬ್ ಪೈಲ್ವಾನ್ ಭಾಗವಹಿಸಲಿದ್ದಾರೆ. ಅಂದು ಅಂಗವಿಕಲ ಶಿಕ್ಷಕಿಯಾದ ಆರ್.ಶೋಭಾ ಅವರಿಗೆ ''''ಸಮಾಜ ಸೇವಾ ಚಂದ್ರಿಕೆ'''' ಪ್ರಶಸ್ತಿ ಪ್ರದಾನ ಮಾಡಲಾಗುವುದು.
- - -