ನಾಳೆಯಿಂದ ಇಷ್ಟಲಿಂಗ ಮಹಾಪೂಜೆ, ಜನಜಾಗೃತಿ ಧಾರ್ಮಿಕ ಸಮಾವೇಶ

KannadaprabhaNewsNetwork |  
Published : Jul 18, 2025, 12:45 AM IST
(ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ಬಾಳೆಹೊನ್ನೂರು ಶ್ರೀಮದ್‌ ವೀರಶೈವ ಸದ್ಬೋಧನಾ ಸಂಸ್ಥೆ ಮತ್ತು ಜಿಲ್ಲಾ ಘಟಕ ಸಹಯೋಗದಲ್ಲಿ ದಾವಣಗೆರೆಯಲ್ಲಿ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಆಷಾಢ ಮಾಸದ ಇಷ್ಟಲಿಂಗ ಮಹಾಪೂಜಾ ಹಾಗೂ ಜನಜಾಗೃತಿ ಧರ್ಮಸಮಾವೇಶ ಕಾರ್ಯಕ್ರಮ ಜುಲೈ 18ರಿಂದ 20ರವರೆಗೆ ನಗರದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಜರುಗಲಿದೆ.

- ಜು.20ರವರೆಗೆ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಆಯೋಜನೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಬಾಳೆಹೊನ್ನೂರು ಶ್ರೀಮದ್‌ ವೀರಶೈವ ಸದ್ಬೋಧನಾ ಸಂಸ್ಥೆ ಮತ್ತು ಜಿಲ್ಲಾ ಘಟಕ ಸಹಯೋಗದಲ್ಲಿ ದಾವಣಗೆರೆಯಲ್ಲಿ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಆಷಾಢ ಮಾಸದ ಇಷ್ಟಲಿಂಗ ಮಹಾಪೂಜಾ ಹಾಗೂ ಜನಜಾಗೃತಿ ಧರ್ಮಸಮಾವೇಶ ಕಾರ್ಯಕ್ರಮ ಜುಲೈ 18ರಿಂದ 20ರವರೆಗೆ ನಗರದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಜರುಗಲಿದೆ.

ಕಾರ್ಯಕ್ರಮದಲ್ಲಿ ಪ್ರತಿದಿನ ಬೆಳಗ್ಗೆ 8.30ಕ್ಕೆ ಇಷ್ಟಲಿಂಗ ಪೂಜೆ, ಸಂಜೆ 6.30ಕ್ಕೆ ಜನಜಾಗೃತಿ ಧರ್ಮ ಸಮಾವೇಶ ನಡೆಯಲಿದೆ. ಬಾಳೆಹೊನ್ನೂರು ಶ್ರೀಗಳ ದಿವ್ಯ ಸಾನ್ನಿಧ್ಯ ಇರಲಿದೆ. ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಗೌರವಾಧ್ಯಕ್ಷರಾದ ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮಿಗಳ ನೇತೃತ್ವದ ಕಾರ್ಯಕ್ರಮವನ್ನು ಶಾಸಕ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಉದ್ಘಾಟಿಸಲಿದ್ದಾರೆ.

ನೆಗಳೂರು ಹಿರೇಮಠದ ಗುರು ಶಾಂತೇಶ್ವರ ಶಿವಾಚಾರ್ಯ ಶ್ರೀಗಳು ಉಪದೇಶಾಮೃತ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಮಹಾಸಭಾ ಉಪಾಧ್ಯಕ್ಷ ಡಾ.ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಉಪಾಧ್ಯಕ್ಷ ಎಸ್.ಎಸ್. ಗಣೇಶ್, ಉದ್ಯಮಿ ಡಿ.ಡಿ.ಬಸವರಾಜಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಪಾಲ್ಗೊಳ್ಳಲಿದ್ದಾರೆ.

ಜು.19ರ ಕಾರ್ಯಕ್ರಮದಲ್ಲಿ ಶ್ರೀ ವಿಮಲ ರೇಣುಕ ವೀರಮಕ್ತಿ ಮುನಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಕೇದಾರಶ್ರೀಗಳ ಅರಿವಿನ ಹಣತೆ ಆಧ್ಯಾತ್ಮಿಕ ಚಿಂತನೆಗಳ ಕೃತಿಯನ್ನು ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಬಿಡುಗಡೆಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಸ್.ಎ. ರವೀಂದ್ರನಾಥ್, ಹರಿಹರ ಶಾಸಕ ಬಿ.ಪಿ. ಹರೀಶ್, ಮಾಜಿ ಮುಖ್ಯ ಸಚೇತಕ ಡಾ. ಎ.ಎಚ್. ಶಿವಯೋಗಿ ಸ್ವಾಮಿ, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ಗಾಯತ್ರಿ ಸಿದ್ದೇಶ್ವರ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಜು.20ರ ಕಾರ್ಯಕ್ರಮದಲ್ಲಿ ಕಣ್ವಕುಪ್ಪೆ ಮಠದ ಮುಮ್ಮಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಲೆಕ್ಕ ಪರಿಶೋಧಕ ಡಾ. ಉಮೇಶ್ ಶೆಟ್ಟಿ ಅವರಿಗೆ ಸಾಧನೆ ಶಿಖರ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ಮುಖ್ಯ ಅತಿಥಿಗಳಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಮಾಜಿ ಮೇಯರ್ ಚಮನ್ ಸಾಬ್, ದೂಡಾ ಆಯುಕ್ತ ಹುಲ್ಮನಿ ತಿಮ್ಮಣ್ಣ, ಇನ್‌ಸೈಟ್ಸ್‌ ಮುಖ್ಯಸ್ಥ ಜಿ.ಬಿ. ವಿನಯ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ.

- - -

(ಸಾಂದರ್ಭಿಕ ಚಿತ್ರ)

PREV

Recommended Stories

ಸ್ವಸ್ಥ ಶರದ್ ಋತು ಪ್ರಕೃತಿಯ ಲಯದಲ್ಲಿ ಸ್ವಸ್ಥತೆ ! ಶರದ್ ಋತುವಿನ ಆಹಾರ ಮತ್ತು ದಿನಚರ್ಯೆ
ನಟ ದರ್ಶನ್‌ಗೆ ಜೈಲಿನಲ್ಲಿ ಹರಿದ ಚಾದರ : ವಕೀಲರ ವಾದ