26 ರಿಂದ ರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಪೂಜೆ

KannadaprabhaNewsNetwork | Published : Dec 24, 2024 12:48 AM

ಸಾರಾಂಶ

ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್ ನಿಂದ ನಗರದಲ್ಲಿ ನಾಲ್ಕು ದಿನಗಳ ಕಾಲ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಧನುರ್ಮಾಸದ ಇಷ್ಟಲಿಂಗ ಮಹಾಪೂಜಾ ಹಾಗೂ ಜನಜಾಗೃತಿ ಧರ್ಮ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ, ತುಮಕೂರುಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್ ನಿಂದ ನಗರದಲ್ಲಿ ನಾಲ್ಕು ದಿನಗಳ ಕಾಲ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಧನುರ್ಮಾಸದ ಇಷ್ಟಲಿಂಗ ಮಹಾಪೂಜಾ ಹಾಗೂ ಜನಜಾಗೃತಿ ಧರ್ಮ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸೇವಾ ಟ್ರಸ್ಟ್ ಅಧ್ಯಕ್ಷ ಟಿ.ಆರ್.ಸದಾಶಿವಯ್ಯ ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿ, ಈ ತಿಂಗಳ 26ರಿಂದ 29ರ ವರೆಗೆ ನಗರದ ವಿಶಾಲಾಕ್ಷಮ್ಮ ಸದಾಶಿವಯ್ಯ ಸಭಾಭವನದಲ್ಲಿ ರಂಭಾಪುರಿ ಜಗದ್ಗುರುಗಳ ಸಾನಿಧ್ಯದಲ್ಲಿ ಸಿದ್ಧರಬೆಟ್ಟ ಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿದಿನ ಬೆಳಿಗ್ಗೆ 5.30ಕ್ಕೆ ಧನುರ್ಮಾಸದ ಇಷ್ಟಲಿಂಗಪೂಜೆ ನೆರವೇರಿಸುವರು.ಅವರ ದಿವ್ಯ ಸಾನಿಧ್ಯದಲ್ಲಿ ಸಂಜೆ 6.30ಕ್ಕೆ ಜನ ಜಾಗೃತಿ ಧರ್ಮ ಸಮಾರಂಭ ನಡೆಯಲಿದೆ ಎಂದು ಹೇಳಿದರು.26ರಂದು ಸಂಜೆ 6.30ಕ್ಕೆ ಮಾಜಿ ಸಂಸದ ಜಿ.ಎಸ್.ಬಸವರಾಜು ಜನಜಾಗೃತಿ ಧರ್ಮ ಸಮಾರಂಭ ಉದ್ಘಾಟಿಸಿದರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸಂಸದ ಡಾ.ಸಿ.ಎಸ್.ಮಂಜುನಾಥ್ ಉಪನ್ಯಾಸ ನೀಡುವರು. ಯಡಿಯೂರು ಮಠದ ರೇಣುಕ ಶಿವಾಚಾರ್ಯ ಸ್ವಾಮೀಜಿ, ಸಿದ್ಧರಬೆಟ್ಟದ ವೀರಭಧ್ರ ಶಿವಾಚಾರ್ಯ ಸ್ವಾಮೀಜಿ, ಬೆಳ್ಳಾವಿ ಕಾರದ ಮಠದ ಕಾರದ ವೀರಬಸವ ಸ್ವಾಮೀಜಿ, ಸಿದ್ಧಗಂಗಾ ವೈದ್ಯಕೀಯ ಕೇಂದ್ರದ ನಿರ್ದೇಶಕ ಡಾ.ಪರಮೇಶ್ವರ್, ಮಾಜಿ ವಿಧಾನ ಪರಿಷತ್ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್ ಮೊದಲಾದವರು ಭಾಗವಹಿಸುವರು. ನಂತರ ವಿವಿಧ ಗಣ್ಯರು ಗುರು ರಕ್ಷೆ ಸ್ವೀಕರಿಸುವರು.27 ರ ಸಮಾರಂಭದಲ್ಲಿ ಬಾಳೆಹೊನ್ನೂರು ಮಠದ ರೇಣುಕಾಚಾರ್ಯ ಸ್ವಾಮೀಜಿ, ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ತಿಪಟೂರು ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ, ಹೊನ್ನಳಿ ಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಮಾದಿಹಳ್ಳಿ ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ದೊಡ್ಡಗುಣಿ ಮಠದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಾಸಕ ಜಿ.ಬಿ.ಜ್ಯೋತಿಗಣೇಶ್ ಮೊದಲಾದವರು ಭಾಗವಹಿಸುವರು.೨೮ರಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ವಿವಿಧ ಮಠಗಳ ಸ್ವಾಮೀಜಿಗಳು, ವಿವಿಧ ಗಣ್ಯರು ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಟಿ.ಆರ್.ಸದಾಶಿವಯ್ಯ ತಿಳಿಸಿದರು.29 ರಂದು ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶಂಕರ್ ಮಹದೇವ್ ಬಿದರಿ, ಸಾಹಿತಿ ಪ್ರಶಾಂತ್ ರಿಪ್ಪನ್‌ಪೇಟೆ ಮೊದಲಾದವರು ಭಾಗವಹಿಸುವರು ಎಂದರು. ಟ್ರಸ್ಟ್ನ ಕಾರ್ಯದರ್ಶಿ ಭಸ್ಮಾಂಗಿ ರುದ್ರಯ್ಯ, ಸಹಕಾರ್ಯದರ್ಶಿ ಜಿ.ಎಸ್.ಸಿದ್ಧರಾಜು, ಮುಖಂಡರಾದ ಜಿ.ಸಿ.ವಿರೂಪಾಕ್ಷ, ಪ್ರಭು ಆರ್.ಎಸ್, ವೈ.ಕೆ.ಜ್ಯೋತಿ, ವಿಜಯಕುಮಾರ್, ಓಂಕಾರಸ್ವಾಮಿ, ಟಿ.ಎಸ್.ಹರೀಶ್, ನಟರಾಜು, ರೇಣುಕುಮಾರ್ ಹಾಜರಿದ್ದರು.

Share this article