ಕಾರ್ಮಿಕ ಮಹಿಳೆಗೆ ಹೆರಿಗೆ ಬಾಂಡ್ ವಿತರಣೆ

KannadaprabhaNewsNetwork |  
Published : Aug 15, 2024, 01:45 AM IST
೧೪ಕೆಎಲ್‌ಆರ್-೨ಶ್ರೀನಿವಾಸಪುರ ತಾಲೂಕಿನ ಕೋನೇಟಿ ತಿಮ್ಮನಹಳ್ಳಿ ಕಟ್ಟಡ ಕಾರ್ಮಿಕರಾದ ಲಕ್ಷ್ಮೀರಿಗೆ ಕಲ್ಯಾಣ ಮಂಡಳಿಯಿಂದ ನೀಡುವ ೩೦ ಸಾವಿರದ ಹೆರಿಗೆ ಬಾಂಡ್ ಕಾರ್ಮಿಕ ಇಲಾಖೆಯ ಪ್ರಕಾಶ್ ವಿತರಿಸಿದರು. | Kannada Prabha

ಸಾರಾಂಶ

ಶ್ರೀನಿವಾಸಪುರ ತಾಲೂಕಿನ ಕೋನೇಟಿ ತಿಮ್ಮನಹಳ್ಳಿ ಕಟ್ಟಡ ಕಾರ್ಮಿಕರಾದ ಲಕ್ಷ್ಮೀಯವರಿಗೆ ಕಲ್ಯಾಣ ಮಂಡಳಿಯಿಂದ ನೀಡುವ ೩೦ ಸಾವಿರ ರು. ಹೆರಿಗೆ ಬಾಂಡ್ ಅನ್ನು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯ ಸಿಬ್ಬಂದಿ ಪ್ರಕಾಶ್ ವಿತರಿಸಿದರು.

ಕನ್ನಡಪ್ರಭ ವಾರ್ತೆ ಕೋಲಾರ

ಶ್ರೀನಿವಾಸಪುರ ತಾಲೂಕಿನ ಕೋನೇಟಿ ತಿಮ್ಮನಹಳ್ಳಿ ಕಟ್ಟಡ ಕಾರ್ಮಿಕರಾದ ಲಕ್ಷ್ಮೀಯವರಿಗೆ ಕಲ್ಯಾಣ ಮಂಡಳಿಯಿಂದ ನೀಡುವ ೩೦ ಸಾವಿರ ರು. ಹೆರಿಗೆ ಬಾಂಡ್ ಅನ್ನು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯ ಸಿಬ್ಬಂದಿ ಪ್ರಕಾಶ್ ವಿತರಿಸಿದರು.

ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ಮಾತನಾಡಿ, ಕಟ್ಟಡ ಕಾರ್ಮಿಕರು ಹಾಗೂ ಇತರೆ ವೃತ್ತಿಯನ್ನು ಮಾಡುವ ಕಾರ್ಮಿಕರಿಗೆ ಇಲಾಖೆಯಿಂದ ನೀಡುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಸಂಘದಿಂದ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ, ಯಾವುದೇ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಅಥವಾ ಇತರೆ ನಿರ್ಮಾಣ ಕಾರ್ಮಿಕರಾಗಿದ್ದರೆ, ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳುವ ಮೂಲಕ ಸರಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದರು.

ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘವು ಕಾರ್ಮಿಕರನ್ನು ಗುರುತಿಸಿ ನೋಂದಣಿಗೆ ಅರ್ಜಿಗಳನ್ನು ಪಡೆಯಲಾಗುತ್ತದೆ, ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾದರೆ ಅಂತಹ ಫಲಾನುಭವಿಗಳಿಗೆ ಮಂಡಳಿಯಿಂದ ವಿವಿಧ ರೀತಿಯ ಪಿಂಚಣಿ ಸೌಲಭ್ಯ, ವಸತಿ ಸೌಲಭ್ಯ, ಹೆರಿಗೆ ಸೌಲಭ್ಯ ನೋಂದಾಯಿತ ಫಲಾನುಭವಿಗಳ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಸೌಲಭ್ಯ, ಶೈಕ್ಷಣಿಕ ಸಹಾಯಧನ ಸೇರಿ ೧೯ ವಿವಿಧ ಸೌಲಭ್ಯಗಳು ಸಿಗುತ್ತವೆ. ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ರಮ ಸಂಬಂಧ ಕಾರಣ ಬಾಲಕನಿಂದ ಡಬಲ್‌ ಮರ್ಡರ್!
ಸಂಚಾರ ಸಮಸ್ಯೆಗೆ ಟನಲ್‌ ರಸ್ತೆ ಪರಿಹಾರ : ವಿಧಾನ ಸಭೆಯಲ್ಲಿ ಡಿಸಿಎಂ ಪ್ರತಿಪಾದನೆ