ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರ ಪುರಸಭೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಐಡಿ ಕಾರ್ಡ್ ಮತ್ತು ಫಲಾನುಭವಿಗಳಿಗೆ ಸಹಾಯಧನ ಚೆಕ್ ವಿತರಿಸಿ ಅವರು ಮಾತನಾಡಿದರು.ಪುರಸಭೆ ವ್ಯಾಪ್ತಿಯ 17 ಮಂದಿ ಬೀದಿಬದಿ ವ್ಯಾಪಾರಿಗಳಿಗೆ ಪ್ರಧಾನ ಮಂತ್ರಿ ಸ್ವ ನಿಧಿ ಯೋಜನೆಯಡಿ ಐಡಿ ಕಾರ್ಡ್, ಇಬ್ಬರು ವಿಶೇಷ ಚೇತನ ಸಣ್ಣ ಉದ್ದಿಮೆದಾರರಿಗೆ ತಲಾ ರು. 23,750, ನಾಲ್ಕು ಮಂದಿಗೆ ಪರಿಶಿಷ್ಟ ಸಮುದಾಯದವರಿಗೆ ಮನೆಯ ದುರಸ್ಥಿಗಾಗಿ ತಲಾ ರು. 20,175 ಸಹಾಯಧನ ಚೆಕ್ ಹಸ್ತಾಂತರ ಮಾಡಿದರು.
ಈ ಸಂದರ್ಭ ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಮುಖ್ಯಾಧಿಕಾರಿ ಗಿರೀಶ್, ಬೀದಿ ಬದಿ ವ್ಯಾಪಾರಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಜಗದೀಶ್, ಕೆಪಿಸಿಸಿ ಬೀದಿಬದಿ ವ್ಯಾಪಾರಿಗಳ ವಿಭಾಗದ ಜಿಲ್ಲಾಧ್ಯಕ್ಷ ಆದಂ ಮತ್ತಿತರರು ಇದ್ದರು.