ಯುಪಿಎ ಅವಧಿ ಪರಿಹಾರ ಬಗ್ಗೆ ಶ್ವೇತಪತ್ರ ಹೊರಡಿಸಿ: ಬಂಡೆಪ್ಪ ಕಾಶೆಂಪುರ

KannadaprabhaNewsNetwork |  
Published : Apr 30, 2024, 02:05 AM IST
(-ಫೋಟೋ: ಬಂಡೆಪ್ಪ ಕಾಶೆಂಪುರ) | Kannada Prabha

ಸಾರಾಂಶ

ಕರ್ನಾಟಕಕ್ಕೆ ಹಿಂದೆ ಡಾ.ಮನಮೋಹನ ಸಿಂಗ್ ಪ್ರಧಾನಿ ಇದ್ದಾಗ ಯುಪಿಎ ಸರ್ಕಾರವು ಎಷ್ಟು ಅನುದಾನ ಬಿಡುಗಡೆ ಮಾಡಿದೆ ಎಂಬ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ ಎಂದು ಜೆಡಿಎಸ್ ಮುಖಂಡ, ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.

- ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ ರಾಜ್ಯ ಆರ್ಥಿಕ ದಿವಾಳಿತನಕ್ಕೆ ಸಾಕ್ಷಿ: ಟೀಕೆ

- - - ಕನ್ನಡಪ್ರಭ ವಾರ್ತೆ, ದಾವಣಗೆರೆ

ಕರ್ನಾಟಕಕ್ಕೆ ಹಿಂದೆ ಡಾ.ಮನಮೋಹನ ಸಿಂಗ್ ಪ್ರಧಾನಿ ಇದ್ದಾಗ ಯುಪಿಎ ಸರ್ಕಾರವು ಎಷ್ಟು ಅನುದಾನ ಬಿಡುಗಡೆ ಮಾಡಿದೆ ಎಂಬ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ ಎಂದು ಜೆಡಿಎಸ್ ಮುಖಂಡ, ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ ಒತ್ತಾಯಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಸರ್ಕಾರವು ರಾಜ್ಯಕ್ಕೆ ₹3400 ಕೋಟಿ ನೀಡಿದರೂ ವಿನಾಕಾರಣ ಕೇಂದ್ರದ ಮೇಲೆ ಗೂಬೆ ಕೂಡಿಸಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಪ್ರತಿಭಟಿಸುತ್ತಿದೆ. ಕೇಂದ್ರದ ವಿರುದ್ಧ ಕಾಂಗ್ರೆಸ್ ಸರ್ಕಾರ ಪ್ರತಿಭಟನೆ ನೋಡಿದರೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯಾಗಿದೆ ಎಂಬುದನ್ನು ತೋರಿಸುತ್ತಿದೆ ಎಂದರು.

ಈ ಹಿಂದೆ ಬಿ.ಎಸ್.ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದ ರೈತರ ಸಾಲ ಮನ್ನಾ ಮಾಡಲಾಗಿತ್ತು. ರೈತರು ಕೇಳದಿದ್ದರೂ ಆಗ ಕುಮಾರಸ್ವಾಮಿ ರೈತರ ₹25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದರು. ಎಂದಿಗೂ ಆಗ ಕೇಂದ್ರ ಸರ್ಕಾರದ ಹಣ ನೆಚ್ಚಿ ಕುಳಿತುಕೊಳ್ಳಲಿಲ್ಲ ಎಂದು ಅವರು ಕಾಂಗ್ರೆಸ್ಸಿಗೆ ಚಾಟಿ ಬೀಸಿದರು.

ಬರ ಪರಿಹಾರಕ್ಕಾಗಿ ಕೇಂದ್ರದ ಹಣಕ್ಕೆ ಕಾಯುತ್ತಾ ಕುಳಿತರೆ ರಾಜ್ಯ ಸರ್ಕಾರದ ಕೆಲಸವಾದರೂ ಏನು? ಗ್ಯಾರಂಟಿ ಹೆಸರಿನಲ್ಲಿ ರಾಜ್ಯದ ಜನರನ್ನು ವ್ಯವಸ್ಥಿತವಾಗಿ ಕಾಂಗ್ರೆಸ್ ಸರ್ಕಾರ ವಂಚಿಸುತ್ತಿದೆ. ತನ್ನದೇ ಗ್ಯಾರಂಟಿಗಳ ಮೇಲೆ ಕಾಂಗ್ರೆಸ್ ವಿಶ್ವಾಸ ಕಳೆದುಕೊಂಡಿದೆ. ಹಾಗಾಗಿಯೇ ಕೇಂದ್ರದತ್ತ ಬೊಟ್ಟು ಮಾಡುವ ಕೆಲಸ ಮಾಡುತ್ತಿದೆ. ನಿಮ್ಮ ಗ್ಯಾರಂಟಿ ಯೋಜನೆ ಲೋಕಸಭೆ ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ. ಇದು ಕಾಂಗ್ರೆಸ್ಸಿಗರಿಗೂ ಮನವರಿಕೆಯಾಗಿದೆ ಎಂದು ಅವರು ಕುಟುಕಿದ ಅವರು, ದೇಶ, ರಾಜ್ಯಾದ್ಯಂತ ಹಳ್ಳಿ ಹಳ್ಳಿಯಲ್ಲೂ ನರೇಂದ್ರ ಮೋದಿ ಜನಪ್ರಿಯತೆ ಬಗ್ಗೆ ಚರ್ಚೆಯಾಗುತ್ತಿದೆ. ಸಹಜವಾಗಿಯೇ ಇದು ಕಾಂಗ್ರೆಸ್ಸಿಗರನ್ನು ಹತಾಶೆಗೊಳಿಸಿದೆ. ಖಾಲಿ ಚೊಂಬು ಹಿಡಿದು ಕೇಂದ್ರದ ವಿರುದ್ಧ ಸುಳ್ಳು ಆರೋಪವನ್ನು ಕಾಂಗ್ರೆಸ್ ಹೊರಿಸುತ್ತಿದೆ. ಸದ್ಯ ರಾಜ್ಯದ ಆರ್ಥಿಕ ಪರಿಸ್ಥಿತಿ ಕೆಟ್ಟಿದೆ. ಕಿಸಾನ್ ಸಮ್ಮಾನ್‌ನಡಿ ಬಿಜೆಪಿ ಸರ್ಕಾರ

ವಿಪಿ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ ಮಾತನಾಡಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ತೆ ತಮಗೆ ಮತ ನೀಡದಿದ್ದರೆ ಮಣ್ಣಿಗಾದರೂ ಬನ್ನಿ ಎಂಬುದಾಗಿ ಕಲ್ಬುರ್ಗಿ ಕ್ಷೇತ್ರದ ಜನರನ್ನು ಭಾವನಾತ್ಮಕವಾಗಿ ಬೆದರಿಸಿದ್ದಾರೆ. 4-5 ದಶಕ ಕಾಲ ಸರ್ಕಾರದ ಹಣದಿಂದಲೇ ಜೀವನ ನಡೆಸಿದ ಖರ್ಗೆ ಕಲಬುರಗಿ ಜಿಲ್ಲೆಗೆ ನೀಡಿದ ಕೊಡುಗೆ ಏನೂ ಇಲ್ಲ. ಹಾಗಾಗಿಯೇ ಕಳೆದ ಚುನಾವಣೆಯಲ್ಲಿ ಸೋತರು ಎಂದರು.

ಬಿಜೆಪಿ ಮುಖಂಡರಾದ ಬಿ.ಎಂ.ಸತೀಶ ಕೊಳೇನಹಳ್ಳಿ, ರಾಜನಹಳ್ಳಿ ಶಿವಕುಮಾರ, ಪ್ರಸನ್ನಕುಮಾರ, ಐರಣಿ ಅಣ್ಣೇಶ, ರಘುನಂದನ ಅಂಬರಕರ್, ಶಿವಮೂರ್ತೆಪ್ಪ, ಐಗೂರು ತಿಪ್ಪೇಸ್ವಾಮಿ, ಜೆಡಿಎಸ್ ಮುಖಂಡ ಕೆ.ಬಿ.ಕಲ್ಲೇರುದ್ರೇಶ, ಟಿ.ಗಣೇಶ ದಾಸಕರಿಯಪ್ಪ, ಬೆಳ‍ವನೂರು ಬಿ.ನಾಗೇಶ್ವರ ರಾವ್‌, ಬಸವರಾಜ ಇತರರು ಇದ್ದರು.

- - - ಕೋಟ್‌ ಕಳೆದ 10 ವರ್ಷದಲ್ಲಿ ರಾಜ್ಯಕ್ಕೆ ₹15,996 ಕೋಟಿ ಬರ ಪರಿಹಾರವಾಗಿ ಕೇಂದ್ರ ನೀಡಿದೆ. ಆದರೆ, ಮನಮೋಹನ ಸಿಂಗ್ ಸರ್ಕಾರ ರಾಜ್ಯಕ್ಕೆ ಕೇವಲ ₹3654 ಕೋಟಿ ಮಾತ್ರ ನೀಡಿತ್ತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ. ರಾಜ್ಯದ ರೈತರಿಗೆ ಕಾಂಗ್ರೆಸ್ ಖಾಲಿ ಚೊಂಬು ಕೊಟ್ಟಿದೆ. ಇದೇ ಕಾಂಗ್ರೆಸ್ ಆಳ್ವಿಕೆಯಲ್ಲಿ ರಾಜ್ಯದಲ್ಲಿ 659 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತೊಂದು ಕಡೆ ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ

- ಎನ್.ರವಿಕುಮಾರ, ವಿಪ ವಿಪಕ್ಷ ಮುಖ್ಯ ಸಚೇತಕ

- - - (-ಫೋಟೋ: ಬಂಡೆಪ್ಪ ಕಾಶೆಂಪುರ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ