ಮಲ್ಲಿಕ್ಯಾತನಹಳ್ಳಿ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ; ಶಾಸಕರಿಗೆ ರೈತಸಂಘದ ಅಧ್ಯಕ್ಷ ಭರತ್ ರಾಜ್ ಅಭಿನಂದನೆ

KannadaprabhaNewsNetwork |  
Published : Feb 18, 2025, 12:32 AM IST
17ಕೆಎಂಎನ್ ಡಿ23 | Kannada Prabha

ಸಾರಾಂಶ

ನಮ್ಮ ಸಂಘಟಿತ ಹೋರಾಟಕ್ಕೆ ಜಯ ಸಿಕ್ಕಿದೆ. ಮಲ್ಲಿಕ್ಯಾತನಹಳ್ಳಿಯ 44 ಕುಟುಂಬಗಳ ಪೈಕಿ 26 ಮಂದಿಗೆ ಮಾತ್ರ ಹಕ್ಕು ಪತ್ರ ದೊರಕಿದೆ. ಉಳಿದ 18 ಮಂದಿಗೂ ಸಣ್ಣಪುಟ್ಟ ವ್ಯತ್ಯಾಸಗಳನ್ನು ಸರಿಪಡಿಸಿ ಹಕ್ಕುಪತ್ರ ವಿತರಿಸಲು ಶಾಸಕರು, ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಮುಂದಾಗಬೇಕು ಎಂದು ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ದಶಕಗಳ ಹೋರಾಟದ ನಂತರ ಮಲ್ಲಿಕ್ಯಾತನಹಳ್ಳಿ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಿದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಎನ್.ಎಲ್.ಭರತ್ ರಾಜ್ ತಿಳಿಸಿದರು.

ಪಟ್ಟಣದ ಸಂಘದ ಕಚೇರಿಯಲ್ಲಿ ಮಾತನಾಡಿದ ಅವರು, ಕಳೆದ 30 ವರ್ಷಗಳಿಂದ ಮಲ್ಲಿಕ್ಯಾತನಹಳ್ಳಿಯ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿದ್ದ ಫಲಾನುಭವಿಗಳಿಗೆ ಹಕ್ಕು ಪತ್ರವನ್ನು ನೀಡುವಂತೆ ಒತ್ತಾಯಿಸಿ ಹಲವು ಹಂತಗಳಲ್ಲಿ ಹೋರಾಟ ನಡೆಸಲಾಗಿತ್ತು. ಕಳೆದ ಜ.22 ಮತ್ತು 23ರಂದು ತಾಲೂಕು ಕಚೇರಿ ಮುಂದೆ ಗ್ರಾಮಸ್ಥರ ಜೊತೆಗೂಡಿ ಧರಣಿ ನಡೆಸಲಾಗಿದ್ದ ವೇಳೆ ತಹಸೀಲ್ದಾರ್ ನೀಡಿದ್ದ ಭರವಸೆಯನ್ನು ಈಡೇರಿಸಿದ್ದಾರೆ ಎಂದು ಹೇಳಿದರು.

ಕ್ಷೇತ್ರದ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ಹಕ್ಕುಪತ್ರ ವಿತರಿಸಿದ್ದಾರೆ. ಇದಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ಶಾಸಕರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದರು.

ನಮ್ಮ ಸಂಘಟಿತ ಹೋರಾಟಕ್ಕೆ ಜಯ ಸಿಕ್ಕಿದೆ. ಮಲ್ಲಿಕ್ಯಾತನಹಳ್ಳಿಯ 44 ಕುಟುಂಬಗಳ ಪೈಕಿ 26 ಮಂದಿಗೆ ಮಾತ್ರ ಹಕ್ಕು ಪತ್ರ ದೊರಕಿದೆ. ಉಳಿದ 18 ಮಂದಿಗೂ ಸಣ್ಣಪುಟ್ಟ ವ್ಯತ್ಯಾಸಗಳನ್ನು ಸರಿಪಡಿಸಿ ಹಕ್ಕುಪತ್ರ ವಿತರಿಸಲು ಶಾಸಕರು, ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಮುಂದಾಗಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ಎನ್.ಲಿಂಗರಾಜಮೂರ್ತಿ, ಗುರುಸ್ವಾಮಿ, ಮಹದೇವು, ವಿಷಕಂಠ, ನಂಜಂಡಸ್ವಾಮಿ, ಮಾದೇಶ, ಮಹಾದೇವಯ್ಯ, ಪ್ರದೀಪ್, ಪ್ರಮೋದ್, ರತ್ನಮ್ಮ, ಹಿಪ್ಜೂಲ್ಲಾ, ಮೀನಾಕ್ಷಿ, ವಿಮಲಾ, ಸುರೇಶ್, ಭಾಗ್ಯಮ್ಮ, ಚಂದ್ರಮ್ಮ, ನಾಗಮ್ಮ, ಸುಮ, ಪದ್ಮ, ಜಯಮ್ಮ, ಪುಟ್ಟಸ್ವಾಮಿ, ನಂಜುಂಡಸ್ವಾಮಿ, ನಮೀದಾಬಾನು. ಮಹದೇವು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ