ಪ್ರವಾಸಿಗರಿಂದ ಸಮಸ್ಯೆ: ಚೇಲಾವರದಲ್ಲಿ ಸಾರ್ವಜನಿಕ ಸಭೆ

KannadaprabhaNewsNetwork |  
Published : Jul 09, 2026, 01:30 AM IST
ನರಿಯಂದಡ ಗ್ರಾಮ ಪಂಚಾಯಿತಿಯ ಚೇಲಾವರ ಗ್ರಾಮದ ಚೇಲಾವರ ಜಲಪಾತ ಹಾಗೂ ಕಬ್ಬೆಬೆಟ್ಟಕ್ಕೆ ಬರುವ ಪ್ರವಾಸಿಗರಿಂದ ಗ್ರಾಮಸ್ಥರಿಗೆ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ಚೇಲಾವರದಲ್ಲಿ ಸಾರ್ವಜನಿಕ ಸಭೆ ನಡೆಯಿತು | Kannada Prabha

ಸಾರಾಂಶ

ಇಲ್ಲಿಗೆ ಸಮೀಪದ ನರಿಯಂದಡ ಗ್ರಾಪಂನ ಚೇಲಾವರ ಗ್ರಾಮದ ಚೇಲಾವರ ಜಲಪಾತ ಹಾಗೂ ಕಬ್ಬೆಬೆಟ್ಟಕ್ಕೆ ಬರುವ ಪ್ರವಾಸಿಗರಿಂದ ಗ್ರಾಮಸ್ಥರಿಗೆ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ಚೇಲಾವರದಲ್ಲಿ ಸಾರ್ವಜನಿಕ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲುಇಲ್ಲಿಗೆ ಸಮೀಪದ ನರಿಯಂದಡ ಗ್ರಾಪಂನ ಚೇಲಾವರ ಗ್ರಾಮದ ಚೇಲಾವರ ಜಲಪಾತ ಹಾಗೂ ಕಬ್ಬೆಬೆಟ್ಟಕ್ಕೆ ಬರುವ ಪ್ರವಾಸಿಗರಿಂದ ಗ್ರಾಮಸ್ಥರಿಗೆ ಉಂಟಾಗುತ್ತಿರುವ ತೊಂದರೆಗಳ ಬಗ್ಗೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ಚೇಲಾವರದಲ್ಲಿ ಸಾರ್ವಜನಿಕ ಸಭೆ ನಡೆಯಿತು. ಚೇಲಾವರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನರಿಯಂದಡ ಗ್ರಾಪಂ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಅಧ್ಯಕ್ಷತೆಯಲ್ಲಿ ಅರಣ್ಯ ಇಲಾಖೆ, ಪೊಲೀಸ್ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಯಿತು.ವಿರಾಜಪೇಟೆ ವಲಯದ ಅರಣ್ಯಧಿಕಾರಿ ಶಿವರಾಮ್ ಮಾತನಾಡಿ, ಕಳೆದ ಐದಾರು ವರ್ಷಗಳ ಹಿಂದೆ ಪ್ರವಾಸಿಗರಿಗೆ ಎಪಿಸಿ ಕ್ಯಾಂಪ್ ಮೂಲಕ ಟಿಕೆಟ್ ವಿತರಿಸಿ ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. ಅದರ ಬಳಿಕ ಕಂದಾಯ ಇಲಾಖೆ ಹಾಗೂ ಗ್ರಾಮಸ್ಥರ ವಿರೋಧದ ನಡುವೆ ಎಪಿಸಿ ಕ್ಯಾಂಪ್ ರದ್ದುಪಡಿಸಲಾಗಿದ್ದು, ಇಲ್ಲಿನ ಗ್ರಾಮಸ್ಥರ ಸಮಸ್ಯೆಗಳ ಬಗ್ಗೆ ಕಂದಾಯ ಇಲಾಖೆ ಹಾಗೂ ತಹಸೀಲ್ದಾರ್ ಗಮನಕ್ಕೆ ತರಲಾಗುವುದು ಎಂದರು.

ಗ್ರಾಪಂ ಮಾಜಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ ಮಾತನಾಡಿ, ಊರಿನ ಅಭಿವೃದ್ಧಿಗೆ ಗ್ರಾಮಸ್ಥರೆಲ್ಲರೂ ಕೈ ಜೋಡಿಸಬೇಕು. ಇಲ್ಲಿನ ಬೆಟ್ಟ ಹಾಗೂ ಜಲಪಾತದ ರಕ್ಷಣೆಆಗಬೇಕು ಎಂದರು.ಪ್ರವಾಸಿಗರ ನಿಯಂತ್ರಣಕ್ಕೆ ಚೆಯ್ಯಂಡಾಣೆಯಲ್ಲಿ ಗೇಟ್ ಅಳವಡಿಸಿ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ ಒತ್ತಾಯಿಸಿದರು. ನಾಪೋಕ್ಲು ಪೊಲೀಸ್ ಠಾಣೆ ಸಹಾಯಕ ಠಾಣಾಧಿಕಾರಿ ಫ್ರಾನ್ಸಿಸ್ ಮಾತನಾಡಿ, ಪೋಲಿಸ್ ಇಲಾಖೆಯಿಂದ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇಲ್ಲಿಗೆ ಬರುವ ಪ್ರವಾಸಿಗರ ವಾಹನಗಳನ್ನು ಗ್ರಾಮಸ್ಥರು ಹಾನಿ ಪಡಿಸುತ್ತಿರುವ ಬಗ್ಗೆ ದೂರುಗಳು ಬಂದಿವೆ. ಗ್ರಾಮಸ್ಥರು ತಮಗೆ ಯಾವುದೇ ತೊಂದರೆಗಳಾದರೆ ಇಲಾಖೆಯ ಗಮನಕ್ಕೆ ತಂದರೆ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ನರಿಯಂದಡ ಗ್ರಾಪಂ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಮಾತನಾಡಿ, ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿ ಮುಂದಿನ ದಿನಗಳಲ್ಲಿ ಬೇಕಾದ ಕ್ರಮ ಕೈಗೊಳ್ಳಲಾಗುವುದು ಎಂದರು. ಗ್ರಾಮಸ್ಥರಾದ ನಡಿಕೇರಿಯಂಡ ದೀಲಿಪ್ ಮಾತನಾಡಿ, ಕಬ್ಬೆಬೆಟ್ಟ ಹಾಗೂ ಚೇಲಾವರ ಜಲಪಾತ ಪ್ರವಾಸೋದ್ಯಮಕ್ಕೆ ಒಳಪಟ್ಟಿದೆ. ಇಲ್ಲಿ ಊರಿನವರಿಗೆ ನೆಮ್ಮದಿ ಬೇಕು. ಕಾನೂನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಗ್ರಾಪಂ ಮಾಜಿ ಸದಸ್ಯ ಪ್ರವೀಣ್ ಈರಪ್ಪ, ಪವನ್ (ಮಂಜು), ಪಟ್ಟಚೆರುವಂಡ ಪ್ರತಾಪ್, ವಿಶು, ಸುರೇಶ್ ಕೆ.ಆರ್., ಪ್ರಗತಿಪರ ಕೃಷಿಕ ನಂದ ಕುಮಾರ್, ಲೋಕೇಶ್, ದೇವಿ ಪ್ರಸಾದ್, ಮತ್ತಿತರರು ಗ್ರಾಮಸ್ಥರ ಪರವಾಗಿ ಮಾತನಾಡಿದರು.

ನರಿಯಂದಡ ಗ್ರಾಪಂ ಮಾಜಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ, ವಿರಾಜಪೇಟೆ ಅರಣ್ಯ ಇಲಾಖೆ ಡಿಆರ್ ಎಫ್ಒ ಶ್ರೀನಿವಾಸ್, ನಾಪೋಕ್ಲು ಪೊಲೀಸ್ ಠಾಣೆ ಸಿಬ್ಬಂದಿ, ಮಾಜಿ ಸದಸ್ಯರು, ಗ್ರಾಮಸ್ಥರು, ಸಂಘ ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾಸ್ತಿ ಮೆಚ್ಚಿದ ಮಹತ್ವದ ಕವಿ ಮಜಿಬೈಲು: ಕುಕ್ಕುವಳ್ಳಿ
ದಾಸ್ ಪ್ರಮೋಷನ್ಸ್ ನವೀಕೃತ ಕೇಂದ್ರ ಕಚೇರಿ ಉದ್ಘಾಟನೆ