ಫೆಬ್ರವರಿ 28ಕ್ಕೆ ಐಟಿ ಬಿಯಾಂಡ್ ಬೆಂಗಳೂರು ಕಾರ್ಯಕ್ರಮ: ಗೋಪಿನಾಥ್

KannadaprabhaNewsNetwork |  
Published : Feb 26, 2026, 01:45 AM IST
ಪೋಟೊ: 25ಎಸ್‌ಎಂಜಿಕೆಪಿ01ಶಿವಮೊಗ್ಗದ ಪತ್ರಿಕಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿದರು.  | Kannada Prabha

ಸಾರಾಂಶ

ನಗರದ ಜೆಎನ್‌ಎನ್‌ಸಿಇ ಕಾಲೇಜಿನ ಎಂಬಿಎ ಸಭಾಂಗಣದಲ್ಲಿ ಫೆ.28ರಂದು ಬೆಳಗ್ಗೆ 10.30ಕ್ಕೆ ಐಟಿ ಬಿಯಾಂಡ್ ಬೆಂಗಳೂರು ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ನಗರದ ಜೆಎನ್‌ಎನ್‌ಸಿಇ ಕಾಲೇಜಿನ ಎಂಬಿಎ ಸಭಾಂಗಣದಲ್ಲಿ ಫೆ.28ರಂದು ಬೆಳಗ್ಗೆ 10.30ಕ್ಕೆ ಐಟಿ ಬಿಯಾಂಡ್ ಬೆಂಗಳೂರು ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ತಿಳಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘಗಳ ಒಕ್ಕೂಟ (ಎಫ್‌ಕೆಸಿಸಿಐ) ಬೆಂಗಳೂರು ಮತ್ತು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಅಧ್ಯಕ್ಷತೆ ವಹಿಸುವರು. ಎಫ್‌ಕೆಸಿಸಿಐ ಅಧ್ಯಕ್ಷೆ ಉಮಾ ರೆಡ್ಡಿ, ಉಪಾಧ್ಯಕ್ಷ ಸಾಯಿ ರಾಮ್ ಪ್ರಸಾದ್, ಮಾಹಿತಿ ತಂತ್ರಜ್ಞಾನದ ಚೇರ್ಮನ್ ಎಚ್.ಎ.ಕಿರಣ್, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ ) ಉಪಾಧ್ಯಕ್ಷ ಚೇತನ್ ದೀಕ್ಷಿತ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.

ಫೆ.28ರಂದು ಮಧ್ಯಾಹ್ನ 2 ರಿಂದ 4.30ರವರಿಗೆ ಮಂಥನ್ 2026, ಎಂಬ ನವೋದಯ ಕೃತಕ ಬುದ್ಧಿಮತ್ತೆ ಕುರಿತು ಉಪನ್ಯಾಸ, ಚರ್ಚೆ ಮತ್ತು ಪ್ರಶ್ನೋತ್ತರದ ಕಾರ್ಯಕ್ರಮ ನಡೆಯಲಿದೆ. ಎಐ ಪರಿಣಿತರಾದ ಕೃಪೇಶ್ ಮತ್ತು ರಾಜೀವ್ ದೀಕ್ಷಿತ್ ಉಪನ್ಯಾಸ ನೀಡುವರು. ಅಶೋಕ್ ಭಟ್, ಸುರೇಶ್ ಕುಮಾರ್, ಅಮಿತ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು ಎಂದರು.

‘ಬೆಂಗಳೂರಿನಾಚೆಗೆ’ ಕಾರ್ಯಕ್ರಮವು ಶಿವಮೊಗ್ಗವನ್ನು ಸ್ವಾವಲಂಬಿ ಕೇಂದ್ರವನ್ನಾಗಿ ಮಾಡುವುದು, ಬೆಂಗಳೂರಿನ ಮೇಲಿನ ಅವಲಂಬನೆ ಕಡಿಮೆ ಮಾಡುವುದು ಮತ್ತು ವೃತ್ತಿಪರರಿಗೆ ಸ್ಥಳೀಯ ಅವಕಾಶಗಳನ್ನು ಒದಗಿಸುವುದು ಪ್ರಮುಖ ಗುರಿಯಾಗಿದೆ. ನಾವೀನ್ಯತೆ ಮತ್ತು ತಂತ್ರಜ್ಞಾನ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವತ್ತ ಗಮನಹರಿಸುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ ಎಂದು ವಿವರಿಸಿದರು.

ಶಿವಮೊಗ್ಗದಲ್ಲಿರುವ ಐಟಿ /ಐಟಿಇಎಸ್, ಬಿಸಿನೆಸ್ ಪ್ರೊಸೆಸಿಂಗ್ ಔಟ್ ಸೋರ್ಸಿಂಗ್ (ಬಿಪಿಒ), ಎಲೆಕ್ಟ್ರಾನಿಕ್ ಸಿಸ್ಟಮ್ ಡಿಸೈನ್ ಮ್ಯಾನುಫ್ಯಾಕ್ಚರಿಂಗ್ (ಇಎಸ್ಡಿಎಂ) ಜೈವಿಕ ತಂತ್ರಜ್ಞಾನ ವಲಯ ಮತ್ತು ಟೆಲಿಕಾಂ ವಲಯದ ಕೈಗಾರಿಕೆಗಳಲ್ಲಿ ಬೆಳವಣಿಗೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಶಿವಮೊಗ್ಗದಲ್ಲಿ ಲಭ್ಯವಿರುವ ಪ್ರತಿಭೆ ಮತ್ತು ಕೌಶಲ್ಯವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಮತ್ತು ಪ್ರವೇಶಿಸಲು ಇದು ಸಹಕಾರಿಯಾಗಲಿದೆ ಎಂದರು.

ಶಿವಮೊಗ್ಗ ನಗರ ಎಂಜಿನಿಯರಿಂಗ್ ಕಾಲೇಜುಗಳು, ಎಂಬಿಎ ಕಾಲೇಜುಗಳನ್ನು ಹೊಂದಿದ್ದು, ಮುಂಬರುವ ಕೈಗಾರಿಕೆಗಳಿಗೆ ನುರಿತ ಕಾರ್ಯಪಡೆಯನ್ನು ಖಚಿತಪಡಿಸುತ್ತದೆ. ಶಿವಮೊಗ್ಗ ನಗರದಲ್ಲಿ ಮಾಹಿತಿ ತಂತ್ರಜ್ಞಾನ ಪ್ರತಿಭಾವಂತರ ಸಂಖ್ಯೆ ಸಾಕಷ್ಟಿದೆ. ಬೌದ್ಧಿಕ ಬಂಡವಾಳ, ಅಭಿವೃದ್ಧಿ ಹೊಂದುತ್ತಿರುವ ಐಟಿ ಪರಿಸರ ವ್ಯವಸ್ಥೆ, ಐಟಿ ಎಸ್ಇಝಡ್ ಮತ್ತು ಟೆಕ್ ಪಾರ್ಕ್, ಇಂಜಿನಿಯರಿಂಗ್ ತಂತ್ರಜ್ಞಾನ ಕಾಲೇಜುಗಳು, ಇನ್‌ಕ್ಯುಬೇಟರ್‌ಗಳು, ಐಟಿ, ಸ್ಟಾರ್ಟ್‌ಅಪ್‌ಗಳನ್ನು ಹೊಂದಿರುವ ನಗರ. ಮಲೆನಾಡು ಪ್ರದೇಶ ಶಿವಮೊಗ್ಗ ಮಾಹಿತಿ ತಂತ್ರಜ್ಞಾನದ ಸಂಭಾವ್ಯ ಕೇಂದ್ರ ವಾಗಿ ಬೆಳೆಯಲು ವಿಪುಲ ಅವಕಾಶವಿದೆ. ಶಿವಮೊಗ್ಗಕ್ಕೆ ಇಂತಹ ಕಾರ್ಯಕ್ರದ ಅವಶ್ಯಕತೆಯಿದೆ ಎಂದು ಮಾಹಿತಿ ನೀಡಿದರು.

ಜೈವಿಕ ತಂತ್ರಜ್ಞಾನ ವಲಯ, ಸಂಶೋಧನೆ ಮತ್ತು ಅಭಿವೃದ್ಧಿ ಮೂಲ ಸೌಕರ್ಯವನ್ನು ಉತ್ತೇಜಿಸಲು ಶಿವಮೊಗ್ಗದಲ್ಲಿ ತಂತ್ರಜ್ಞಾನ ಮತ್ತು ನಾವೀನ್ಯತೆ ಸಂಬಂಧಿತ ಚಟುವಟಿಕೆ ಕೇಂದ್ರಗಳನ್ನು ಸ್ಥಾಪಿಸಬೇಕು. ನವೋದ್ಯಮಗಳು ನಾವೀನ್ಯತೆಗೆ ಉತ್ತೇಜನ ನೀಡಲು ಅನುದಾನಗಳು ಮತ್ತು ಪ್ರೋತ್ಸಾಹಕಗಳ ಅವಶ್ಯಕತೆಯಿದೆ. ಬಹುರಾಷ್ಟ್ರೀಯ ಕಂಪನಿಗಳು ಶಿವಮೊಗ್ಗದಲ್ಲಿ ಹೆಚ್ಚಿನ ಮೌಲ್ಯದ ಸಂಶೋಧನೆ ಜಾಗತಿಕ ಸಾಮರ್ಥ್ಯ ಕೇಂದ್ರಗಳು ಮತ್ತು ಅಭಿವೃದ್ಧಿ, ದತ್ತಾಂಶ ವಿಶ್ಲೇಷಣೆ ಮತ್ತು ಐಟಿ ಸೇವಾ ಘಟಕಗಳನ್ನು ಸ್ಥಾಪಿಸಲು ಬೆಂಬಲಿಸಬೇಕು. ಶಿವಮೊಗ್ಗದಲ್ಲಿ ಎಲೆಕ್ಟ್ರಾನಿಕ್ ಸಿಸ್ಟಮ್ ವಿನ್ಯಾಸ, ಉತ್ಪಾದನೆ (ಇಎಸ್‌ಡಿಎಂ) ಮತ್ತು ಅಗ್ರಿಟೆಕ್, ಹೆಲ್ತ್ ಟೆಕ್ ಮೇಲೆ ಕೇಂದ್ರೀಕರಿಸಿ ಮೀಸಲಾದ ತಂತ್ರಜ್ಞಾನ ಕ್ಲಸ್ಟರ್ ಗಳನ್ನು ಸ್ಥಾಪಿಸಬೇಕಿದೆ ಎಂದು ಹೇಳಿದರು ,

ಈ ವೇಳೆ ಜಿ.ವಿಜಯಕುಮಾರ್, ಎ.ಎಂ.ಸುರೇಶ್, ಆರ್.ಮನೋಹರ್, ಎಸ್.ಎಸ್. ಉದಯ್ ಕುಮಾರ್, ಗಣೇಶ್ ಎಂ ಅಂಗಡಿ, ಜಿ.ವಿ.ಕಿರಣ್ ಕುಮಾರ್ , ರವಿಪ್ರಕಾಶ್ ಜನ್ನೆ ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ.ಮಾದೇಗೌಡರು ಶಿಕ್ಷಣ ಸಂಸ್ಥೆ ಕಟ್ಟದಿದ್ದರೆ ಲಕ್ಷಾಂತರ ಮಂದಿ ಶಿಕ್ಷಣ ವಂಚಿತ: ಡಾ.ಕೆ.ಎಸ್.ಅಮೃತೇಶ್
ಸರ್ಕಾರ ಗುರುರಾಯರ ವರ್ಧಂತಿ ಆಚರಿಸಲಿ: ಆರತಿ ತಿವಾರಿ