- - ಶಿವರಾಜ ತಂಗಡಗಿ ಆರೋಪ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಇದು ನೂರಕ್ಕೆ ನೂರು ಸತ್ಯ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ತಿಳಿಸಿದರು.
ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ, ಇಡಿ ಸಂಸ್ಥೆಗಳನ್ನು ಬಿಜೆಪಿಯವರು ಸ್ವಂತ ಆಸ್ತಿಯಾಗಿ ಮಾಡಿಕೊಂಡಿದ್ದಾರೆ. ಈ ಪ್ರಕರಣವನ್ನು ಸರ್ಕಾರ ಕಾನೂನಾತ್ಮಕವಾಗಿ ವಾಪಸ್ ಪಡೆದಿದ್ದರೂ, ಮತ್ತೊಮ್ಮೆ ಎದುರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.ಇದರ ಮೂಲಕ ಬಿಜೆಪಿ ವಿರುದ್ಧ ಟೀಕೆ ಮಾಡುವವರ ಬಗ್ಗೆ, ಪ್ರಭಾವಿಗಳ ಬಗ್ಗೆ ದ್ವೇಷದ ರಾಜಕೀಯ ಮಾಡಲಾಗುತ್ತಿದೆ. ಅಂತಹವರನ್ನು ಟಾರ್ಗೆಟ್ ಮಾಡಿ ಹತ್ತಿಕ್ಕುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಬಿಜೆಪಿಯವರ ಮೇಲೆ ಯಾಕೆ ಇಡಿ, ಸಿಬಿಐ ಕೇಸ್ ಗಳನ್ನು ಹಾಕುತ್ತಿಲ್ಲ? ಭ್ರಷ್ಟಾಚಾರ, ಸುಳ್ಳು ಹೇಳೋದೆ ಬಿಜೆಪಿ ಅಜೆಂಡಾ ಎಂದು ಅವರು ಆರೋಪಿಸಿದರು.
ಯಾರ ಪೋಷಣೆ, ರಕ್ಷಣೆ ಮಾತೇ ಇಲ್ಲ