ಪೋಷಕರು ಖಾಸಗಿ ಶಾಲೆಗಳಿಗೆ ಮಾರುಹೋಗಿರುವುದು ದುರಂತ

KannadaprabhaNewsNetwork |  
Published : Sep 04, 2025, 01:00 AM IST
3ಎಚ್ಎಸ್ಎನ್8 :  | Kannada Prabha

ಸಾರಾಂಶ

ಇಂದಿನ ಸಮಾಜದಲ್ಲಿ ಶಿಕ್ಷಣವೂ ವ್ಯಾಪಾರೀಕರಣವಾಗಿದ್ದು, ಕೆಲವು ಪಾಲಕ ವರ್ಗದವರು ಖಾಸಗಿ ಶಾಲೆಗಳ ಕಡೇ ಮುಖ ಮಾಡುತ್ತಿದ್ದಾರೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಮತ್ತು ಸದೃಢ ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆಗಾಗಿ ಹಲವು ಶೈಕ್ಷಣಿಕ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಅನುಭವಿ ಅರ್ಹ ಶಿಕ್ಷಕರು, ಸುಸಜ್ಜಿತ ಕೊಠಡಿ, ಪ್ರಯೋಗಾಲಯ, ಗ್ರಂಥಾಲಯ, ಬೋಧನಾ ಸವಲತ್ತುಗಳು ಸೇರಿದಂತೆ ಸಾಕಷ್ಟು ಅನುಕೂಲ ನೀಡುತ್ತಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಸರ್ಕಾರಿ ಶಾಲೆಗಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದ್ದರು, ಪೋಷಕರು ತಮ್ಮ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಕೊಡಿಸಲು ಮುಂದಾಗಿರುವುದು ದುರಂತದ ಸಂಗತಿ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಆತಂಕ ವ್ಯಕ್ತಪಡಿಸಿದರು.ಪಟ್ಟಣದ ಮಾಧ್ಯಮಿಕ ಶಾಲಾ ಆವರಣದಲ್ಲಿ ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ೨೦೨೫-೨೬ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ ಚಟುವಟಿಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಇಂದಿನ ಸಮಾಜದಲ್ಲಿ ಶಿಕ್ಷಣವೂ ವ್ಯಾಪಾರೀಕರಣವಾಗಿದ್ದು, ಕೆಲವು ಪಾಲಕ ವರ್ಗದವರು ಖಾಸಗಿ ಶಾಲೆಗಳ ಕಡೇ ಮುಖ ಮಾಡುತ್ತಿದ್ದಾರೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಮತ್ತು ಸದೃಢ ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆಗಾಗಿ ಹಲವು ಶೈಕ್ಷಣಿಕ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಅನುಭವಿ ಅರ್ಹ ಶಿಕ್ಷಕರು, ಸುಸಜ್ಜಿತ ಕೊಠಡಿ, ಪ್ರಯೋಗಾಲಯ, ಗ್ರಂಥಾಲಯ, ಬೋಧನಾ ಸವಲತ್ತುಗಳು ಸೇರಿದಂತೆ ಸಾಕಷ್ಟು ಅನುಕೂಲ ನೀಡುತ್ತಿದೆ.ಜತೆಗೆ ಕರ್ನಾಟಕ ಪಬ್ಲಿಕ್ ಶಾಲೆಯನ್ನು ತೆರೆದು ಎಲ್‌ಜಿಯಿಂದ ಪಿಯುಸಿವರೆಗೂ ಇಂಗ್ಲಿ? ಮಾಧ್ಯಮದಲ್ಲಿ ಮೂಲಕ ಕಲಿಕೆ ನೀಡುತ್ತಿದೆ. ಆದ್ದರಿಂದ ಸರ್ಕಾರಿ ಶಾಲೆಗಳ ಕಡೇ ಪಾಲಕರು ತಮ್ಮ ಮಕ್ಕಳನ್ನು ಸೇರಿಸಿ ಜತೆಗೆ ಶೈಕ್ಷಣಿಕ ಅಭಿವೃದ್ಧಿಗೆ ಸಹಾಯವನ್ನು ಮಾಡುವ ಮೂಲಕ ಮಾದರಿ ಶಾಲೆಗೆ ಎಲ್ಲರೂ ಕೈ ಜೋಡಿಸಬೇಕು ಎಂದರು.ವಿದ್ಯಾರ್ಥಿಗಳ ಜೀವನದಲ್ಲಿ ಮಾನವೀಯ ಮೌಲ್ಯಗಳು ಅತಿಮುಖ್ಯ. ಉತ್ತಮವಾದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಇನ್ನೊಬ್ಬರಿಗೆ ಮಾದರಿ ಆಗಬೇಕು. ಬೆಳೆಯುವ ಸಿರಿಮೊಳಕೆಯಲ್ಲಿ ಎನ್ನುವ ಹಾಗೆ ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮವಾದ ಗುಣಗಳನ್ನು ಅಳವಡಿಕೊಳ್ಳುವುದರಿಂದ ಮಾತ್ರ ಜೀವನದ ಗುರಿ ಮುಟ್ಟಲು ಸಾಧ್ಯ. ಕಲಿಕೆ ಎನ್ನುವುದು ನಿರಂತರವಾಗಿ ನಡೆಯುವಂತಹದ್ದು. ಮಹಾನ್ ವ್ಯಕ್ತಿಗಳ ಜೀವನ ಸಾಧನೆಗಳನ್ನು ಪ್ರತಿಯೊಬ್ಬರು ಅಧ್ಯಯನ ಮಾಡುವ ಮೂಲಕ ಉತ್ತಮ ಮೌಲ್ಯಗಳನ್ನು ಹೊಂದಬೇಕು. ಹಾಸನ ಜಿಲ್ಲೆ ಶೈಕ್ಷಣಿಕವಾಗಿ ಮುಂದುವರಿದಿದ್ದು ವಿಶೇಷ ಸ್ಥಾನಮಾನವನ್ನು ಗಳಿಸಿದೆ ವೈದ್ಯಕೀಯ, ಅರೆ ವೈದ್ಯಕೀಯ ವೈದ್ಯಕೀಯ ತಾಂತ್ರಿಕ ಶಿಕ್ಷಣ, ಪಶು ವೈದ್ಯಕೀಯ, ಕೃಷಿ ವಿಜ್ಞಾನ ಕಾನೂನು ಪದವಿ ಸೇರಿದಂತೆ ಎಲ್ಲಾ ವಿಧದ ಕೋರ್ಸುಗಳು ಲಭ್ಯವಿದ್ದು, ಪಿಯುಸಿ ನಂತರ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಸ್. ಹೆಚ್. ಗಂಗೇಗೌಡ, ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಟಿ.ರಾಮೇಗೌಡ ಪ್ರಾಸ್ತವಿಕವಾಗಿ ಮಾತನಾಡಿದರು. ಇದೇ ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಲಕ್ಷದ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿ ಹಾಗೂ ಕಲಾವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಹಾಗೂ ಅತಿ ಹೆಚ್ಚು ಅಂಕ ಪಡೆದು ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು.ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿಯ ನಿರ್ದೇಶಕ ಪುಟ್ಟಸ್ವಾಮಿಗೌಡ, ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್. ಎ. ಗಣೇಶ್, ಸದಸ್ಯೆ ಬನಶಂಕರಿ ರಘು, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಚ.ನಾ. ಅಶೋಕ್, ಜಯರಾಮ, ರಾಮಚಂದ್ರ ಸೇರಿದಂತೆ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಪೋಷಕರು ಭಾಗವಹಿಸಿದ್ದರು. ನಂತರ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

PREV

Recommended Stories

.ಜಮಖಂಡಿಯಲ್ಲಿ ವಿನಾಕನಿಗೆ ಅದ್ಧೂರಿ ವಿದಾಯ
ರೈತರ ಹಿತ ಕಾಪಾಡುವುದು ಮುಖ್ಯ: ಹನಮಂತ ನಿರಾಣಿ