ಮೂಲ ಗೇಣಿ ಒಕ್ಕಲು ಸಮಸ್ಯೆ ಜೀವಂತ ಇರುವುದು ದುರಂತ: ಪ್ರೊ.ಕೆ.ಎಸ್‌.ಶೆಟ್ಟಿ

KannadaprabhaNewsNetwork |  
Published : Feb 10, 2025, 01:46 AM IST
9ಗೇಣಿ | Kannada Prabha

ಸಾರಾಂಶ

ಭಾನುವಾರ ಉಡುಪಿ ಬಳಕೆದಾರರ ವೇದಿಕೆಯ ಸಭಾಂಗಣದಲ್ಲಿ ಉಡುಪಿ ಜಿಲ್ಲೆಯ 7 ತಾಲೂಕುಗಳಲ್ಲಿರುವ ಮೂಲಗೇಣಿದಾರರಿಗೆ, ಈ ಸಮಸ್ಯೆಯ ಬಗ್ಗೆ ಸರಕಾರ ಮತ್ತು ನ್ಯಾಯಾಂಗ ಪ್ರಕ್ರಿಯೆಯಲ್ಲಿ ನಡೆದ ಬೆಳವಣಿಗೆ ಕುರಿತು ವಿಶೇಷ ಮಾಹಿತಿ ಹಾಗೂ ಸದಸ್ಯತ್ವ ಅಭಿಯಾನದಲ್ಲಿ ನೆರವೇರಿತು.

ಕನ್ನಡಪ್ರಭ ವಾರ್ತೆ ಉಡುಪಿ

ದೇಶಕ್ಕೆ ಸ್ವಾತಂತ್ರ್ಯ ದೊರಕಿ ಏಳೂವರೆ ದಶಕಗಳ ನಂತರವೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂಲಗೇಣಿ ಒಕ್ಕಲುಗಳ ಸಮಸ್ಯೆ ಜೀವಂತವಾಗಿರುವುದು ಅತ್ಯಂತ ಕಳವಳಕಾರಿ ವಿಷಯ ಎಂದು ನಿವೃತ್ತ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ವಿಷಾದಿಸಿದರು.

ಭಾನುವಾರ ಉಡುಪಿ ಬಳಕೆದಾರರ ವೇದಿಕೆಯ ಸಭಾಂಗಣದಲ್ಲಿ ಜರುಗಿದ ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆ ಮಂಗಳೂರು ಮತ್ತು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ 7 ತಾಲೂಕುಗಳಲ್ಲಿರುವ ಮೂಲಗೇಣಿದಾರರಿಗೆ, ಈ ಸಮಸ್ಯೆಯ ಬಗ್ಗೆ ಸರಕಾರ ಮತ್ತು ನ್ಯಾಯಾಂಗ ಪ್ರಕ್ರಿಯೆಯಲ್ಲಿ ನಡೆದ ಬೆಳವಣಿಗೆ ಕುರಿತು ವಿಶೇಷ ಮಾಹಿತಿ ಹಾಗೂ ಸದಸ್ಯತ್ವ ಅಭಿಯಾನದಲ್ಲಿ ಅವರು ಉಪನ್ಯಾಸ ನೀಡಿದರು.

ಈ ಶೇೂಷಣೆ ನಿವಾರಿಸಲು ರಾಜ್ಯ ಸರ್ಕಾರ 2011ರಲ್ಲಿ ಮೂಲಗೇಣಿದಾರರಿಗೆ ಭೂಮಿಯ ಸಂಪೂರ್ಣ ಒಡೆತನ ಖಾತ್ರಿ ಪಡಿಸುವ ಕಾಯಿದೆ ನಿರ್ಣಯಿಸಿ ರಾಷ್ಟ್ರಪತಿಗಳ ಅಂಕಿತ ಪಡೆದು ಅನುಷ್ಠಾನಗೊಳಿಸಲು ಸಿದ್ದತೆ ನಡೆಸಿದಾಗ, ಕೆಲವೊಂದು ಹಿತಾಸಕ್ತಿ ಮೂಲಿದಾರರು ಹೈಕೋರ್ಟ್ ಮೆಟ್ಟಿಲು ಹತ್ತಿದರು. ಪರಿಣಾಮವಾಗಿ ರಾಜ್ಯ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠ ಮೂಲಗೇಣಿದಾರರ ಬೇಡಿಕೆ ನ್ಯಾಯಯುತವಾಗಿದೆ ಎಂದು ತೀರ್ಪು ನೀಡಿತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕಾರಣ ಇದೀಗ ತೀರ್ಪು ಪ್ರಕಟಗೊಳ್ಳುವ ಹಂತದಲ್ಲಿದೆ. ಈ ನ್ಯಾಯ ಪಡೆಯುವಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಸರ್ವ ಮೂಲಗೇಣಿದಾರರು ಒಟ್ಟಾಗಿ ಧ್ವನಿ ಎತ್ತಿ ಹೋರಾಟ ಮಾ ಬೇಕಾದ ಅನಿವಾರ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.

ಮಂಗಳೂರು ಮೂಲಗೇಣಿ ಒಕ್ಕಲು ವೇದಿಕೆ ಅಧ್ಯಕ್ಷ ಎಂ.ಕೆ.ಯಶೇೂಧರ್ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ಕೇೂಶಾಧಿಕಾರಿ ಶಂಕರ್ ಪ್ರಭು, ಹಿರಿಯ ಪದಾಧಿಕಾರಿಗಳಾದ ಕ್ಯಾಪ್ಟನ್ ಹ್ಯುಗಸ್ ಮಂಗಳೂರುಇದ್ದರು. ಉಡುಪಿ ಜಿಲ್ಲಾ ಏಳು ತಾಲೂಕಿನ ಮೂಲಗೇಣಿದಾರರು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಧಾನ ಕಾರ್ಯದರ್ಶಿ ಸಂದೇಶ್ ಪ್ರಭು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಜಿಲ್ಲಾ ಸಂಘಟನಾ ಪ್ರತಿನಿಧಿ ಎಸ್.ಎಸ್.ಶೇಟ್ ವಂದಿಸಿದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ