ಮನುಷ್ಯನ ಸ್ವಾರ್ಥಕ್ಕಾಗಿ ಪರಿಸರ ಹಾಳುಗೆಡವುತ್ತಿರುವುದು ಆತಂಕಕಾರಿ

KannadaprabhaNewsNetwork |  
Published : Jun 06, 2026, 01:15 AM IST
ಫೋಟೋ  5ಎಚ್‌ಎಸ್‌ಡಿ4 :  ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ   ವಿಶ್ವ ಪರಿಸರ ದಿನಾಚರಣೆ  ಅಂಗವಾಗಿ   ಸಸಿ ನೆಡುವ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಡಿ. ಮಹಾವರ್ಕರ್ ಸಸಿ ನೆಡುವ ಮೂಲಕ  ಉದ್ಘಾಟಿಸಿದರು.  | Kannada Prabha

ಸಾರಾಂಶ

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಡಿ.ಮಹಾವರ್ಕರ್ ಸಸಿ ನೆಡುವ ಮೂಲಕ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಆಧುನಿಕ ಜೀವನ ಶೈಲಿಗೆ ಒಗ್ಗಿಕೊಂಡಿರುವ ನಾವು ಸ್ವಚ್ಛಂದ ಜೀವನ ನಡೆಸಲು ಪ್ರಯತ್ನಿಸುತ್ತಿದ್ದೇವೆಯೇ ಹೊರತು ಅದರಿಂದ ಪರಿಸರದ ಮೇಲಾಗುತ್ತಿರುವ ಹಾನಿಯ ಬಗ್ಗೆ ಯೋಚಿಸುತ್ತಿಲ್ಲ ನಮ್ಮ ಸ್ವಾರ್ಥಕ್ಕಾಗಿ ಪರಿಸರ ಹಾಳುಗೆಡವುತ್ತಿರುವುದು ಆತಂಕಕಾರಿ ಸಂಗತಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಡಿ. ಮಹಾವರ್ಕರ್ ಕಳವಳ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕುಡಿಯುವ ನೀರಿನ ಬಾಟಲಿಗಳನ್ನು ಬಳಸಿ ಎಲ್ಲೆಂದರಲ್ಲಿ ಬಿಸಾಡುವ ಮೂಲಕ ಸ್ವಚ್ಛತೆ ನಿರ್ಲಕ್ಷಿಸುತ್ತಿದ್ದೇವೆ. ಕಸದ ವೈಜ್ಞಾನಿಕ ವಿಲೇವಾರಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ತಂದಿದೆ. ನಗರಸಭೆ ಸಿಬ್ಬಂದಿ ಕಸ ಸಂಗ್ರಹಣೆಗೆ ಬಂದಾಗ ಹಸಿ ಕಸ ಮತ್ತು ಒಣ ಕಸ ಬೇರ್ಪಡಿಸಿ ಕೊಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವೆಲ್ಲರೂ ಪರಿಸರ ಸಂರಕ್ಷಣೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ ಎಂದು ತಿಳಿಸಿದರು.

ಆರೋಗ್ಯವಂತ ದೇಹದಲ್ಲಿ ಮಾತ್ರ ಆರೋಗ್ಯವಂತ ಮನಸ್ಸಿರಲು ಸಾಧ್ಯ. ಆದರೆ ವಾಯು ಮಾಲಿನ್ಯದಿಂದಾಗಿ ನಮ್ಮ ಆರೋಗ್ಯ ಕ್ಷೀಣಿಸುತ್ತಿದೆ. ಹಾಗಾಗಿ ಪರಿಸರ ಮಾಲಿನ್ಯ ತಡೆಗೆ ಗಿಡಗಳನ್ನು ಬೆಳೆಸಿ ಆಮ್ಲಜನಕದ ಪ್ರಮಾಣ ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಹೇಳಿದರು.

1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೀರಣ್ಣ ಸೋಮಶೇಖರ್ ಮಾತನಾಡಿ, ಪರಿಸರ ಹಾಳು ಮಾಡುವುದರಿಂದ ವಾಯು ಮಾಲಿನ್ಯ, ನೀರಿನ ಸಮಸ್ಯೆ ಮತ್ತು ಮಳೆಯ ಕೊರತೆಯಂತಹ ಅನೇಕ ಗಂಭೀರ ಸಮಸ್ಯೆಗಳು ಎದುರಾಗುತ್ತಿವೆ. ಇವುಗಳನ್ನು ಹೋಗಲಾಡಿಸಿ, ಪ್ರಕೃತಿಯನ್ನು ಕಾಪಾಡುವ ಉದ್ದೇಶದಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಪರಿಸರ ಸಂರಕ್ಷಣೆ ಕೇವಲ ಅರಣ್ಯ ಇಲಾಖೆ, ಸರ್ಕಾರಿ ಅಧಿಕಾರಿಗಳ ಜವಾಬ್ದಾರಿಯಲ್ಲ, ಅದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಿ.ಜೆ.ಸುದೀನ್ ಕುಮಾರ್ ಮಾತನಾಡಿ, ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಆಚರಣೆಯಾಗಬಾರದು. ಜಿಲ್ಲೆಯಾದ್ಯಂತ ಗಿಡ-ಸಸಿಗಳನ್ನು ನೆಟ್ಟು ಬೆಳೆಸುವ ಕಾರ್ಯ ನಿರಂತರವಾಗಿ ಸಾಗಬೇಕು ಕರೆ ನೀಡಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋಪ್ಯನಾಯಕ್ , ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್.ಮಹೇಶ್ವರಪ್ಪ ಮಾತನಾಡಿದರು.

ಕಾರ್ಯಕ್ರಮದಲ್ಲಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಗಂಗಾಧರ್ ಚನ್ನಬಸಪ್ಪ ಹಡಪದ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಡಿ.ಮಮತ, 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎಸ್.ಶಕುಂತಲಾ, 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ನಟೇಶ್, 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಕೆ.ಜಿ.ಸತೀಶ್, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪೂಜಾ ಬೆಳಕೆರಿ, 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ನಿಖಿತಾ ಎಸ್ ಅಕ್ಕಿ, ವಲಯ ಅರಣ್ಯಾಧಿಕಾರಿ ಆರ್.ವಸಂತ ಕುಮಾರ್, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಬಿ.ದೇವರಾಜ್, ವಕೀಲರ ಸಂಘದ ಕಾರ್ಯದರ್ಶಿ ಜಗದೀಶ್ ಗುಂಡೇರಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಲು ಮನವಿ
ಹಸಿರು, ಉಸಿರಿಗಾಗಿ ಪರಿಸರ ಉಳಿಸೋಣ: ಶಾಸಕ ಡಿ.ಜಿ.ಶಾಂತನಗೌಡ