ಮೋದಿ ೧೦ ವರ್ಷಗಳ ಕಾಲ ಯಾವುದೇ ಭ್ರಷ್ಟಾಚಾರವಿಲ್ಲದೆ ಜನಪರ ಆಡಳಿತ ನೀಡುವ ಮೂಲಕ ಈ ದೇಶವನ್ನು ಪ್ರಗತಿಪಥದತ್ತ ಸಾಗಿಸಿದ್ದಾರೆ. ಇಡೀ ವಿಶ್ವವೇ ಮೆಚ್ಚುವಂತಹ ಸುಭದ್ರ ಆಡಳಿತ ನೀಡುತ್ತಿದ್ದಾರೆ. ಇದನ್ನು ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ನವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಪ್ರಧಾನಿಯ ಸಾಧನೆ ಮುಂದೆ ಮತ್ತೆ ಕಾಂಗ್ರೆಸ್ ಪಕ್ಷ ನೆಲಕಚ್ಚಲಿದೆ ಎಂದು ವಾಗ್ದಾಳಿ ನಡೆಸಿದರು.
ಯಲಬುರ್ಗಾ: ದೇಶ ಕಂಡ ಪ್ರಧಾನಿಗಳಲ್ಲಿ ನರೇಂದ್ರ ಮೋದಿ ಅಗ್ರಗಣ್ಯರು. ಜನಮೆಚ್ಚಿದ ಪ್ರಧಾನಿ ಮೂರನೇ ಬಾರಿಗೆ ಪ್ರಧಾನಿಯಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಹೇಳಿದರು.
ತಾಲೂಕಿನ ಮುಧೋಳ ಗ್ರಾಮದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ಗ್ರಾಮ ಚಲೋ ಅಭಿಯಾನ ಅಂಗವಾಗಿ ಮತ್ತೊಮ್ಮೆ ನರೇಂದ್ರ ಮೋದಿ ಸರ್ಕಾರ ಎಂಬ ಗೋಡೆ ಬರಹದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕಾಂಗ್ರೆಸ್‌ನವರಿಗೆ ಮೋದಿಯ ಸುಭದ್ರ ಆಡಳಿತ ಸಹಿಸಿಕೊಳ್ಳಲು ಆಗದೇ ಎಷ್ಟೇ ಅಪಪ್ರಚಾರ ಮಾಡಿದರೂ ಮತ್ತೆ ಬಿಜೆಪಿ ಅತೀ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ ಎಂದರು.ಮೋದಿ ೧೦ ವರ್ಷಗಳ ಕಾಲ ಯಾವುದೇ ಭ್ರಷ್ಟಾಚಾರವಿಲ್ಲದೆ ಜನಪರ ಆಡಳಿತ ನೀಡುವ ಮೂಲಕ ಈ ದೇಶವನ್ನು ಪ್ರಗತಿಪಥದತ್ತ ಸಾಗಿಸಿದ್ದಾರೆ. ಇಡೀ ವಿಶ್ವವೇ ಮೆಚ್ಚುವಂತಹ ಸುಭದ್ರ ಆಡಳಿತ ನೀಡುತ್ತಿದ್ದಾರೆ. ಇದನ್ನು ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ನವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಪ್ರಧಾನಿಯ ಸಾಧನೆ ಮುಂದೆ ಮತ್ತೆ ಕಾಂಗ್ರೆಸ್ ಪಕ್ಷ ನೆಲಕಚ್ಚಲಿದೆ ಎಂದು ವಾಗ್ದಾಳಿ ನಡೆಸಿದರು.ರಾಜ್ಯ ಕಾಂಗ್ರೆಸ್ ಸರ್ಕಾರ ಬರೀ ಗ್ಯಾರಂಟಿ ನೆಪದಲ್ಲಿ ಮುಳುಗಿದ್ದು, ಅಭಿವೃದ್ಧಿ ಕಾರ್ಯಗಳು ಶೂನ್ಯವಾಗಿವೆ. ಮೋದಿ ಸಾಧನೆಗಳು ಹಾಗೂ ಜನಕಲ್ಯಾಣ ಕಾರ್ಯಕ್ರಮಗಳನ್ನು ಮನೆ ಮನೆಗಳಿಗೆ ತೆರಳಿ ಕರಪತ್ರ ವಿತರಿಸಲು ಪ್ರತಿಯೊಬ್ಬ ಕಾರ್ಯಕರ್ತರು ಕೇಂದ್ರದ ಯೋಜನೆಗಳನ್ನು ಜನರ ಮನೆಬಾಗಿಲಿಗೆ ಮುಟ್ಟಿಸುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನ ಗೆದ್ದು ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದರು.ಈ ಸಂದರ್ಭದಲ್ಲಿ ಪಕ್ಷದ ವಕ್ತಾರ ವೀರಣ್ಣ ಹುಬ್ಬಳ್ಳಿ, ಮಂಡಲ ಅಧ್ಯಕ್ಷ ವಿರುಪಾಕ್ಷಪ್ಪ ಮೆಣಸಿನಕಾಯಿ, ಜಿಲ್ಲಾ ಉಪಾಧ್ಯಕ್ಷ ರತನ್ ದೇಸಾಯಿ, ಪ್ರಧಾನ ಕಾರ್ಯದರ್ಶಿ ಮಾರುತಿ ಗಾವರಾಳ, ಶರಣಪ್ಪ ಇಳಗೇರ್, ಅಪ್ಪಣ ಪಲ್ಲೇದ, ಶಿವಕುಮಾರ್ ನಾಗಲಾಪುರಮಠ, ಸುರೇಶ ಹೊಸಳ್ಳಿ, ಹನುಮಂತ ರಾಠೋಡ, ರುದ್ರಯ್ಯ ಬೀಳಗಿಮಠ ಹಾಗೂ ಬೂತ್ ಮಟ್ಟದ ಕಾರ್ಯಕರ್ತರು ಮತ್ತಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.