ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದು ನಿಶ್ಚಿತ

KannadaprabhaNewsNetwork |  
Published : May 06, 2024, 12:33 AM IST
ಲಕ್ಷ್ಮೇಶ್ವರ ಸಮೀಪದ ಶಿಗ್ಲಿ ಗ್ರಾಮದಲ್ಲಿ ಭಾನುವಾರ ಶಾಸಕ ಡಾ. ಚಂದ್ರು ಲಮಾಣಿ ಬಸವರಾಜ ಬೊಮ್ಮಾಯಿ ಪರ ಮತಯಾಚನೆ ಮಾಡಿದರು. | Kannada Prabha

ಸಾರಾಂಶ

ಉತ್ಕೃಷ್ಟ ನಾಯಕತ್ವದಲ್ಲಿ ಭಾರತ ವಿಶ್ವದಲ್ಲಿಯೇ ಅತ್ಯಂತ ಪ್ರಭಾವಶಾಲಿ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ

ಲಕ್ಷ್ಮೇಶ್ವರ: ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿ ಆಗುವುದು ಶತಸಿದ್ಧ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಸಮೀಪದ ಶಿಗ್ಲಿ ಗ್ರಾಮದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಮತಯಾಚನೆ ಮಾಡಿ ಮಾತನಾಡಿದರು.

ನರೇಂದ್ರ ಮೋದಿ ದೇಶಕ್ಕಾಗಿ ತಮ್ಮನ್ನು ಅರ್ಪಿಸಿಕೊಂಡ ನಾಯಕರಾಗಿದ್ದಾರೆ. ಭಾರತದ ಏಳ್ಗೆಗಾಗಿ ಸದಾ ಶ್ರಮಿಸುತ್ತಿರುವ ಏಕೈಕ ನಾಯಕ ಎಂದರೆ ಅದು ನರೇಂದ್ರ ಮೋದಿ. ಅಂತಹ ಉತ್ಕೃಷ್ಟ ನಾಯಕತ್ವದಲ್ಲಿ ಭಾರತ ವಿಶ್ವದಲ್ಲಿಯೇ ಅತ್ಯಂತ ಪ್ರಭಾವಶಾಲಿ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಮೋದಿ ಅವರಿಂದ ಮಾತ್ರ ಈ ದೇಶ ಕಾಪಾಡುವ ಶಕ್ತಿ ಇರುವುದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶವನ್ನು ಹರಿದು ಹಂಚುತ್ತಾರೆ ಎಂದು ಹೇಳಿದರು.

ಈ ವೇಳೆ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಮಾತನಾಡಿ. ಬಸವರಾಜ ಬೊಮ್ಮಾಯಿ ಸಂಸದರಾಗಿ ಆಯ್ಕೆಯಾದ ನಂತರ ಸಚಿವರಾಗುವುದು ಗ್ಯಾರಂಟಿಯಾಗಿದೆ. ಅದಕ್ಕಾಗಿ ಬಸವರಾಜ ಬೊಮ್ಮಾಯಿ ಅವರನ್ನು ಗೆಲ್ಲಿಸಿ ಸಂಸತ್ತಿಗೆ ಕಳಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಲೋಕಸಭಾ ಚುನಾವಣೆ ಅಂಗವಾಗಿ ಶಿರಹಟ್ಟಿಯ ವಿಧಾನಸಭಾ ಕ್ಷೇತ್ರದ ಶಿಗ್ಲಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರವಾಗಿ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಅವರೊಂದಿಗೆ ಶಾಸಕ ಡಾ.ಚಂದ್ರು ಕೆ. ಲಮಾಣಿ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ಮಾಡಲಾಯಿತು.

ಈ ವೇಳೆ ಶಿರಹಟ್ಟಿ ಮಂಡಲದ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಗಣ್ಯರು ಹಾಗೂ ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಲ್ಲೆ ಖಂಡಿಸಿ ಜಿಲ್ಲಾಸ್ಪತ್ರೆ ಸ್ಪಾಫ್ ನರ್ಸ್‌ ಪ್ರತಿಭಟನೆ
ಜಯಂತಿಗಳ ಆಚರಣೆಗೆ ಅಗತ್ಯ ಸಿದ್ಧತೆ ಇರಲಿ: ಎಡಿಸಿ ಹೊನಕೇರಿ