ಕನ್ನಪ್ರಭ ವಾರ್ತೆ ಹೊಳೆನರಸೀಪುರ
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಮಾನ ಮನಸ್ಕರ ವೇದಿಕೆಯಿಂದ ಆಯೋಜಿಸಿದ್ದ ಹಾರ್ಟ್ ಲ್ಯಾಂಪ್ ಕೃತಿಯ ನಾಟಕ ಪ್ರದರ್ಶನ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಲೇಖಕರು ಪಡೆದ ಪ್ರಶಸ್ತಿ ಕನ್ನಡ ಸಾಹಿತ್ಯ ಲೋಕದ ಶ್ರೀಮಂತಿಕೆಯನ್ನು ರಾಷ್ಟ್ರಮಟ್ಟದಲ್ಲಿ ರಾರಾಜಿಸುವಂತೆ ಮಾಡುವ ಜತೆಗೆ ನಮ್ಮ ಜಿಲ್ಲೆಯನ್ನು ಮತ್ತೊಮ್ಮೆ ರಾಷ್ಟ್ರ ಗುರುತಿಸುವಂತೆ ಮಾಡಿದ್ದಾರೆ ಎಂದರು.
ದಂಡೋರ ಸಮಿತಿಯ ರಾಜ್ಯ ಕಾರ್ಯದರ್ಶಿ ಟಿ.ಆರ್.ವಿಜಯಕುಮಾರ್ ಪ್ರಾಸ್ತವಿಕ ನುಡಿಗಳನ್ನಾಡಿ, ಬಾನು ಮುಸ್ತಾಕ್ ಅವರ ಕೃತಿಗೆ ಜಾಗತಿಕ ಮಟ್ಟದಲ್ಲಿ ಗೌರವ ಸಿಕ್ಕಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ನಮ್ಮ ದೇಶದ ಪ್ರಧಾನಮಂತ್ರಿಗಳು ಅಂತಾರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ವಿಜೇತ ಲೇಖಕಿಯನ್ನು ಅಭಿನಂದಿಸದೇ ಇರುವುದು ಖಂಡನೀಯ ಎಂದರು.ಜುಲೈ ೧೨ರಂದು ಪಟ್ಟಣದ ಸಾರ್ವಜನಿಕ ಸಮುದಾಯ ಭವನದಲ್ಲಿ ಶಿವಮೊಗ್ಗದ ನೀನಾಸಂ ಕಲಾವಿದರಿಂದ ಹಾರ್ಟ್ ಲ್ಯಾಂಪ್ ನಾಟಕವನ್ನು ಅಭಿನಯಿಸಲಾಗುವುದು ಮತ್ತು ನಾಗರಿಕ ಬಂಧುಗಳು ಈ ನಾಟಕವನ್ನು ವೀಕ್ಷಿಸುವಂತೆ ಕರೆ ನೀಡಿದರು.
ದಲಿತ ಸಂಘರ್ಷ ಸಮಿತಿ, ದಂಡೋರ ಸಮಿತಿ ಹಾಗೂ ಇತರೆ ಸಂಘ ಸಂಸ್ಥೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.