ಕೌಶಲ್ಯವಂತರಾದಾಗ ಉದ್ಯೋಗ ಸಿಗುವುದು ಸುಲಭ: ಡಾ.ಸಂಗಮೇಶ್ವರ

KannadaprabhaNewsNetwork |  
Published : Oct 15, 2026, 01:30 AM IST
೧೪ಕೆಎಂಎನ್‌ಡಿ-೩ಮಂಡ್ಯ ತಾಲೂಕು ಸಿದ್ದಯ್ಯನಕೊಪ್ಪಲು ಗ್ರಾಮದ ಕಾವೇರಿ ತಾಂತ್ರಿಕ ಕಾಲೇಜಿನಲ್ಲಿ ನಡೆದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಕಾವೇರಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಅಧ್ಯಕ್ಷ ಡಾ.ಸಂಗಮೇಶ್ವರ ಉದ್ಘಾಟಿಸಿದರು. | Kannada Prabha

ಸಾರಾಂಶ

ಅಪ್ರೆಂಟಿಸ್ಶಿಪ್ ತರಬೇತಿಯು ವಿದ್ಯಾರ್ಥಿಗಳಿಗೆ ಕೈಗಾರಿಕೆಗಳಲ್ಲಿ ಪ್ರಾಯೋಗಿಕ ಅನುಭವ ಪಡೆಯಲು ಹಾಗೂ ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ನೆರವಾಗುತ್ತದೆ. ಉದ್ಯೋಗ ಪಡೆಯುವುದು ಕಷ್ಟ ಎಂಬ ಭಾವನೆಯನ್ನು ಬದಿಗಿಟ್ಟು, ಕಂಪನಿಗಳ ಅಗತ್ಯಕ್ಕೆ ತಕ್ಕಂತೆ ತಮ್ಮ ಕೌಶಲ್ಯವನ್ನು ಬೆಳೆಸಿಕೊಂಡರೆ ಉತ್ತಮ ಉದ್ಯೋಗಗಳನ್ನು ಪಡೆಯಬಹುದು.

ಕನ್ನಡಪ್ರಭ ವಾರ್ತೆ ಮಂಡ್ಯ

ಉದ್ಯೋಗಾವಕಾಶಗಳ ಕೊರತೆಯಿದೆ ಎಂಬ ಭಾವನೆ ಹಲವರಲ್ಲಿದೆ. ಆದರೆ, ವಿವಿಧ ಕೈಗಾರಿಕೆಗಳು ಹಾಗೂ ಕಂಪನಿಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಿದ್ದು, ವಿದ್ಯಾರ್ಥಿಗಳು ಅವುಗಳಿಗೆ ತಕ್ಕಂತೆ ಕೌಶಲ್ಯಗಳನ್ನು ಬೆಳೆಸಿಕೊಂಡು ಉದ್ಯೋಗ ಪಡೆಯಲು ಸಿದ್ಧರಾಗಬೇಕು ಎಂದು ಕಾವೇರಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಅಧ್ಯಕ್ಷ ಡಾ.ಸಂಗಮೇಶ್ವರ ಹೇಳಿದರು.

ತಾಲೂಕಿನ ಸಿದ್ಧಯ್ಯನಕೊಪ್ಪಲು ಗೇಟ್ ಸಮೀಪದ ಸುಂಡಹಳ್ಳಿಯಲ್ಲಿರುವ ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವತಿಯಿಂದ ಕೇಂದ್ರ ಸರ್ಕಾರದ ಬೋರ್ಡ್ ಆಫ್ ಅಪ್ರೆಂಟಿಸ್‌ಶಿಪ್ ಟ್ರೈನಿಂಗ್ ಸಹಯೋಗದಲ್ಲಿ ಆಯೋಜಿಸಿದ್ದ ಅಪ್ರೆಂಟಿಸ್‌ಶಿಪ್ ಮತ್ತು ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು.

ಅಪ್ರೆಂಟಿಸ್ಶಿಪ್ ತರಬೇತಿಯು ವಿದ್ಯಾರ್ಥಿಗಳಿಗೆ ಕೈಗಾರಿಕೆಗಳಲ್ಲಿ ಪ್ರಾಯೋಗಿಕ ಅನುಭವ ಪಡೆಯಲು ಹಾಗೂ ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ನೆರವಾಗುತ್ತದೆ. ಉದ್ಯೋಗ ಪಡೆಯುವುದು ಕಷ್ಟ ಎಂಬ ಭಾವನೆಯನ್ನು ಬದಿಗಿಟ್ಟು, ಕಂಪನಿಗಳ ಅಗತ್ಯಕ್ಕೆ ತಕ್ಕಂತೆ ತಮ್ಮ ಕೌಶಲ್ಯವನ್ನು ಬೆಳೆಸಿಕೊಂಡರೆ ಉತ್ತಮ ಉದ್ಯೋಗಗಳನ್ನು ಪಡೆಯಬಹುದು. ಉದ್ಯೋಗಾವಕಾಶಗಳಿಲ್ಲ ಎನ್ನುವುದಕ್ಕಿಂತ ಲಭ್ಯವಿರುವ ಅವಕಾಶಗಳಿಗೆ ತಕ್ಕಂತೆ ಸಿದ್ಧರಾಗುವುದು ಮುಖ್ಯ ಎಂದರು.

ಬೋರ್ಡ್ ಆಫ್ ಅಪ್ರೆಂಟಿಸ್‌ಶಿಪ್ ಟ್ರೈನಿಂಗ್‌ನ ಸಹಾಯಕ ನಿರ್ದೇಶಕ ರಾಹುಲ್ ಮಾತನಾಡಿ, ಉದ್ಯೋಗ ಮೇಳಗಳು ವಿದ್ಯಾರ್ಥಿಗಳಿಗೆ ಕೈಗಾರಿಕೆಗಳೊಂದಿಗೆ ನೇರ ಸಂಪರ್ಕ ಸಾಧಿಸಲು ಹಾಗೂ ಉದ್ಯೋಗಾವಕಾಶಗಳನ್ನು ಕಂಡುಕೊಳ್ಳಲು ಉತ್ತಮ ವೇದಿಕೆಯಾಗಿವೆ. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ಕೌಶಲ್ಯಗಳನ್ನು ಬೆಳೆಸಿಕೊಂಡು ಉದ್ಯೋಗ ಪಡೆಯಲು ಪ್ರಯತ್ನಿಸಬೇಕು ಎಂದರು.

ಅಪ್ರೆಂಟಿಸ್‌ಶಿಪ್ ತರಬೇತಿಯ ಮೂಲಕ ವಿದ್ಯಾರ್ಥಿಗಳು ಕೈಗಾರಿಕೆಗಳಲ್ಲಿ ಕೆಲಸದ ಅನುಭವ ಪಡೆಯುವುದರ ಜತೆಗೆ ವೃತ್ತಿಜೀವನಕ್ಕೆ ಅಗತ್ಯವಾದ ಪ್ರಾಯೋಗಿಕ ಜ್ಞಾನವನ್ನು ಗಳಿಸಬಹುದು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಬೋರ್ಡ್ ಆಫ್ ಅಪ್ರೆಂಟಿಸ್‌ಶಿಪ್ ಟ್ರೈನಿಂಗ್ ಕೈಗಾರಿಕೆಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ತರಬೇತಿ ಮತ್ತು ಉದ್ಯೋಗದ ಅವಕಾಶಗಳನ್ನು ಕಲ್ಪಿಸಲು ಕಾರ್ಯನಿರ್ವಹಿಸುತ್ತಿದೆ ಎಂದರು.

ಮಂಡ್ಯ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ವಿದ್ಯಾರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ವಿವಿಧ ಕೈಗಾರಿಕೆಗಳ ಪ್ರತಿನಿಧಿಗಳೊಂದಿಗೆ ಸಂವಹನ ನಡೆಸಿ ತಮ್ಮ ವಿದ್ಯಾರ್ಹತೆ ಹಾಗೂ ಸಾಮರ್ಥ್ಯಕ್ಕೆ ಹೊಂದುವ ಉದ್ಯೋಗಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಪ್ರಾಂಶುಪಾಲ ಡಾ.ಎ.ಎಸ್.ಶ್ರೀಕಂಠಪ್ಪ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಒಂದೇ ವೇದಿಕೆಯಲ್ಲಿ ವಿವಿಧ ಕಂಪನಿಗಳ ಉದ್ಯೋಗಾವಕಾಶಗಳನ್ನು ಪರಿಚಯಿಸಿ, ಉದ್ಯೋಗ ಪಡೆಯಲು ನೆರವಾಗುವ ಉದ್ದೇಶದಿಂದ ಅಪ್ರೆಂಟಿಸ್‌ಶಿಪ್ ಮತ್ತು ಉದ್ಯೋಗ ಮೇಳ ಆಯೋಜಿಸಲಾಗಿದೆ. ಗ್ರಾಮೀಣ ಪ್ರದೇಶದ ಯುವಜನರು ತಮ್ಮ ವಿದ್ಯಾರ್ಹತೆಗೆ ತಕ್ಕ ಉದ್ಯೋಗ ಪಡೆದು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ನೆರವಾಗಲಿವೆ ಎಂದರು.

ಕಾರ್ಯಕ್ರಮದಲ್ಲಿ ಸಿಐಟಿ ಕಾರ್ಯದರ್ಶಿ ಡಾ.ಸಿ.ಜೆ.ಗಂಗಾಧರ್‌ಗೌಡ, ಡಾ.ಬಿ.ಪಿ.ಸಿದ್ದರಾಜು, ಡಾ.ಎಂ.ಜೆ.ವಿನಯ್‌ಕುಮಾರ್, ಅಮಾಸ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉರುಳಿಗೆ ಹುಲಿ ಬಲಿ, ದಂತರಹಿತ ಆನೆ ಕಳೇಬರ
ಸಾಗರ ರೈಲ್ವೆ ನಿಲ್ದಾಣಕ್ಕೆ ಲೋಹಿಯಾ ಹೆಸರಿಡಲು ಒತ್ತಾಯ