ವಿದ್ಯಾರ್ಥಿಗಳಲ್ಲಿ ಕೃಷಿಯ ಮಹತ್ವದ ಅರಿವು ಮೂಡಿಸುವುದು ಅಗತ್ಯ: ಡಾ.ಸಿ.ರಾಮಚಂದ್ರ

KannadaprabhaNewsNetwork |  
Published : Aug 08, 2026, 01:15 AM IST
48 | Kannada Prabha

ಸಾರಾಂಶ

ಕೃಷಿಯು ಕೇವಲ ಒಂದು ಉದ್ಯೋಗವಲ್ಲ, ಅದು ನಮ್ಮ ಜೀವನದ ಅವಿಭಾಜ್ಯ ಅಂಗ ಹಾಗೂ ದೇಶದ ಬೆನ್ನೆಲುಬಾಗಿದೆ. ಕೃಷಿ ಆಧಾರಿತ ಜೀವನೋಪಾಯ, ಕೃಷಿ ಕ್ಷೇತ್ರದಲ್ಲಿನ ಉದ್ಯೋಗಾವಕಾಶಗಳು ಹಾಗೂ ಆಧುನಿಕ ಕೃಷಿ ವಿಜ್ಞಾನಗಳ ಮಹತ್ವವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳುವುದು ಅತ್ಯಂತ ಅಗತ್ಯ.

ಕನ್ನಡಪ್ರಭ ವಾರ್ತೆ ಮೈಸೂರು

ಇಂದಿನ ವಿದ್ಯಾರ್ಥಿಗಳೇ ನಾಳಿನ ಭವಿಷ್ಯದ ರೂವಾರಿಗಳಾಗಿದ್ದು, ಅವರು ಕೃಷಿಯ ಮಹತ್ವ, ಕೃಷಿ ಆಧಾರಿತ ಜೀವನೋಪಾಯ ಹಾಗೂ ಕೃಷಿ ಕ್ಷೇತ್ರದಲ್ಲಿರುವ ವಿಪುಲ ಉದ್ಯೋಗಾವಕಾಶಗಳ ಬಗ್ಗೆ ಅರಿವು ಬೆಳೆಸಿಕೊಳ್ಳಬೇಕು ಎಂದು ಕೃಷಿ ವಿಜ್ಞಾನಗಳ ವಿವಿ ಮಂಡ್ಯದ ವಿಸ್ತರಣಾ ನಿರ್ದೇಶಕ ಡಾ.ಸಿ. ರಾಮಚಂದ್ರ ಹೇಳಿದರು.

ವಿಸ್ತರಣಾ ಶಿಕ್ಷಣ ಘಟಕ ನಾಗನಹಳ್ಳಿ ವತಿಯಿಂದ ಕೆ.ಆರ್. ನಗರ ತಾಲೂಕಿನ ಮಾವತ್ತೂರು ಗ್ರಾಮದ ಶಾಲೆಯಲ್ಲಿ 8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕೃಷಿಯ ಮಹತ್ವ ಮತ್ತು ಉದ್ಯೋಗಾವಕಾಶದ ಅರಿವು ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಕೃಷಿಯು ಕೇವಲ ಒಂದು ಉದ್ಯೋಗವಲ್ಲ, ಅದು ನಮ್ಮ ಜೀವನದ ಅವಿಭಾಜ್ಯ ಅಂಗ ಹಾಗೂ ದೇಶದ ಬೆನ್ನೆಲುಬಾಗಿದೆ. ಕೃಷಿ ಆಧಾರಿತ ಜೀವನೋಪಾಯ, ಕೃಷಿ ಕ್ಷೇತ್ರದಲ್ಲಿನ ಉದ್ಯೋಗಾವಕಾಶಗಳು ಹಾಗೂ ಆಧುನಿಕ ಕೃಷಿ ವಿಜ್ಞಾನಗಳ ಮಹತ್ವವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳುವುದು ಅತ್ಯಂತ ಅಗತ್ಯ. ವಿದ್ಯಾರ್ಥಿಗಳು ಕೃಷಿಯ ಬಗ್ಗೆ ಸಕಾರಾತ್ಮಕ ಮನೋಭಾವ ಬೆಳೆಸಿಕೊಂಡು, ಭವಿಷ್ಯದಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಕೃಷಿಯನ್ನು ಕೇವಲ ಸಾಂಪ್ರದಾಯಿಕ ವೃತ್ತಿಯಾಗಿ ನೋಡದೆ, ಆಧುನಿಕ ತಂತ್ರಜ್ಞಾನ ಮತ್ತು ವೈಜ್ಞಾನಿಕ ಜ್ಞಾನವನ್ನು ಅಳವಡಿಸಿಕೊಂಡು ಉತ್ತಮ ಆದಾಯಗಳಿಸಬಹುದಾದ ಕ್ಷೇತ್ರವಾಗಿ ಪರಿಗಣಿಸುವಂತೆ ಅವರು ಹೇಳಿದರು.

ಸಹಾಯಕ ಪ್ರಾಧ್ಯಾಪಕರಾದ ಡಾ.ಪಿ. ಅರುಣ್ ಕುಮಾರ್, ಡಾ.ಶಿವಕುಮಾರ್, ಧರಣೇಶ್, ಮಾವತ್ತೂರು ಶಾಲೆಯ ಮುಖ್ಯೋಪಾಧ್ಯಾಯ ಮುರಳೀಧರ್, ಶಿಕ್ಷಕರಾದ ಕೆ.ಎಲ್.ಭಾಸ್ಕರ್, ನಂದೀಶ್ ಕುಮಾರ್, ಸುಬ್ರಮಣ್ಯ, ರಾಜಕುಮಾರ್, ಎಸ್. ಗಿರೀಶ್, ಎಂ.ವಿ. ವಿಜಯಲಕ್ಷ್ಮಿ ಇದ್ದರು.

ಅರಣ್ಯ ಇಲಾಖೆ ನಿವೃತ್ತ ಕಾರ್ಯದರ್ಶಿ ಎ.ಸಿ.ಲಕ್ಷ್ಮಣ್‌ಗೆ ಸನ್ಮಾನ

ಕನ್ನಡಪ್ರಭ ವಾರ್ತೆ ಮೈಸೂರು

ಅರಣ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಅಪಾರ ಕೊಡುಗೆಗಾಗಿ ಪ್ರತಿಷ್ಠಿತ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಭಾಜನರಾದ ಅರಣ್ಯ ಇಲಾಖೆ ನಿವೃತ್ತ ಕಾರ್ಯದರ್ಶಿ ಎ.ಸಿ.ಲಕ್ಷ್ಮಣ್ ಅವರನ್ನು ನಿವೃತ್ತ ಅರಣ್ಯಾಧಿಕಾರಿಗಳ ಸಂಘದಿಂದ ಸನ್ಮಾನಿಸಲಾಯಿತು.ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಂ.ಕೆ. ಅಪ್ಪಯ್ಯ ಮಾತನಾಡಿ, ಎ.ಸಿ. ಲಕ್ಷ್ಮಣ್ ಅವರು ಅರಣ್ಯ ಇಲಾಖೆ ಹಾಗೂ ಪರಿಸರ ಸಂರಕ್ಷಣೆಗೆ ನೀಡಿದ ಅಮೂಲ್ಯ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

ಸಮಾರಂಭದಲ್ಲಿ ಭಾಗವಹಿಸಿದ್ದ ಬಿ.ಯು. ಚೆಂಗಪ್ಪ, ಎಸ್.ಕೆ. ರಾಮಲಿಂಗೇಗೌಡ, ಮೋಹನ್‌ ಕರ್ನಾಟ್‌, ಹುಚ್ಚಯ್ಯ, ನಾಗರಾಜಾಚಾರ್ ಮತ್ತು ಟಿ. ಬಾಲಚಂದ್ರ ಅವರು ಲಕ್ಷ್ಮಣ್‌ ಅವರೊಂದಿಗಿನ ಸೇವಾ ಅವಧಿಯ ಅನುಭವಗಳನ್ನು ಹಂಚಿಕೊಂಡು ಶುಭ ಕೋರಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಎ.ಸಿ.ಲಕ್ಷ್ಮಣ್ ಅವರು, ಇಂದಿನ ಕಾಲಘಟ್ಟದಲ್ಲಿ ಎದುರಾಗುತ್ತಿರುವ ಸಂಕೀರ್ಣ ಪರಿಸರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಪ್ರಸ್ತುತ ಸೇವೆಯಲ್ಲಿರುವ ಅರಣ್ಯಾಧಿಕಾರಿಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಅವರೇ ಪರಿಸರದ ನಿಜವಾದ ವೈದ್ಯರು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಿವೃತ್ತ ಅರಣ್ಯಾಧಿಕಾರಿಗಳು ಹಾಗೂ ಅವರ ಕುಟುಂಬಸ್ಥರನ್ನು ಎ.ಸಿ. ಲಕ್ಷ್ಮಣ್ ಮತ್ತು ಅವರ ಪತ್ನಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಲ್ಲೆಯ ವಿವಿಧೆಡೆ ಬರದ ಭೀಕರ ಪರಿಸ್ಥಿತಿ ದರ್ಶನ
ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಸಂಘಟಿತ ಕೆಲಸ