ಮಕ್ಕಳಲ್ಲಿ ಉತ್ತಮ ಸಂಸ್ಕೃತಿ, ಆಚಾರ, ವಿಚಾರ ಬೆಳೆಸುವುದು ಅತ್ಯವಶ್ಯಕವಾಗಿದೆ

KannadaprabhaNewsNetwork |  
Published : Dec 24, 2025, 03:00 AM IST
ಫೋಟೊ ಶೀರ್ಷಿಕೆ: 22ಆರ್‌ಎನ್‌ಆರ್6ರಾಣಿಬೆನ್ನೂರು ನಗರದ ಹುಣಸಿಕಟ್ಟಿ ರಸ್ತೆಯ ನ್ಯಾಶನಲ್ ಪಬ್ಲಿಕ್ ಸ್ಕೂಲಿನಲ್ಲಿ ಏರ್ಪಡಿಸಿದ್ದ ವಾರ್ಷಿಕೋತ್ಸವ ಸಮಾರಂಭವನ್ನು ಕರ್ನಾಟಕ ರಾಜ್ಯ ಗಣಿ ನಿಗಮದ ಕಾರ್ಯಕಾರಿ ನಿರ್ದೇಶಕ ವಿಶ್ವನಾಥ ಹಿರೇಮಠ ಉದ್ಘಾಟಿಸಿದರು. ಫೋಟೊ ಶೀರ್ಷಿಕೆ: 22ಆರ್‌ಎನ್‌ಆರ್6ಎರಾಣಿಬೆನ್ನೂರು ನಗರದ ಹುಣಸಿಕಟ್ಟಿ ರಸ್ತೆಯ ನ್ಯಾಶನಲ್ ಪಬ್ಲಿಕ್ ಸ್ಕೂಲಿನಲ್ಲಿ ಏರ್ಪಡಿಸಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ನೃತ್ಯರೂಪಕ  | Kannada Prabha

ಸಾರಾಂಶ

ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಉತ್ತಮ ಸಂಸ್ಕೃತಿ, ಆಚಾರ, ವಿಚಾರಗಳನ್ನು ಬೆಳೆಸುವುದು ಅತ್ಯವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಗಣಿ ನಿಗಮದ ಕಾರ್ಯಕಾರಿ ನಿರ್ದೇಶಕ ವಿಶ್ವನಾಥ ಹಿರೇಮಠ ಹೇಳಿದರು.

ರಾಣಿಬೆನ್ನೂರು:ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಉತ್ತಮ ಸಂಸ್ಕೃತಿ, ಆಚಾರ, ವಿಚಾರಗಳನ್ನು ಬೆಳೆಸುವುದು ಅತ್ಯವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಗಣಿ ನಿಗಮದ ಕಾರ್ಯಕಾರಿ ನಿರ್ದೇಶಕ ವಿಶ್ವನಾಥ ಹಿರೇಮಠ ಹೇಳಿದರು. ನಗರದ ಹುಣಸಿಕಟ್ಟಿ ರಸ್ತೆಯ ನ್ಯಾಶನಲ್ ಪಬ್ಲಿಕ್ ಸ್ಕೂಲಿನಲ್ಲಿ ಏರ್ಪಡಿಸಿದ್ದ ವಾರ್ಷಿಕೋತ್ಸವ ಸಮಾರಂಭ ಸಂವರ್ಧಿನಿ ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮಸುಂದರ ಅಡಿಗ ಮಾತನಾಡಿ, ಮಕ್ಕಳು, ಶಿಕ್ಷಕರು ಮತ್ತು ಪಾಲಕರು ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದಾಗ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ತುಳಜಪ್ಪ ಲದ್ವಾ ಮಾತನಾಡಿದರು. ಶಾಲೆಯ ಅಧ್ಯಕ್ಷೆ ವಜ್ರೇಶ್ವರಿ ಲದ್ವಾ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ 2024-25ನೇ ಸಾಲಿನಲ್ಲಿ ನಡೆದ ಸಿಬಿಎಸ್‌ಇ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ 10 ವರ್ಷಗಳ ಕಾಲ ನಿರಂತರ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ಸಾಂಸ್ಕೃತಿಕ ಕಾರ್ಯಕ್ರಮ ಸಭಿಕರ ಮನಸೂರೆಗೊಂಡವು. ಸಂಸ್ಥೆಯ ನಿರ್ದೇಶಕರುಗಳಾದ ಡಾ. ಎಂ.ಎಂ. ಅನಂತರೆಡ್ಡಿ, ಡಾ. ಬಿ.ಆರ್. ಸಾವಕಾರ, ವಿನೋದ ಕಲಬುರ್ಗಿ, ಮಲ್ಲಿಕಾರ್ಜುನ ಅಂಗಡಿ, ಕಾಶಿನಾಥ ಪವಾರ, ಅರುಣಾ ಕಬಾಡಿ, ಪರಶುರಾಮ ಕಬಾಡಿ, ಮುರುಗೇಶ ಮಹಾಂತಶೆಟ್ಟರ್, ವಿಜಯಾನಂದ ಬೆಲ್ಲದ, ಪರಶುರಾಮ ಲದ್ವಾ, ಸುಷ್ಮಾ ಲದ್ವಾ, ಶಾಲೆಯ ಪ್ರಾಂಶುಪಾಲರಾದ ಶಿವಲೀಲಾ ಕುರುವತ್ತಿ, ಶಾಲೆಯ ಶಿಕ್ಷಕ ವೃಂದ ಹಾಗೂ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಹಂಸಭಾವಿ, ನ್ಯೂ ಸಾಯಿ ಪಬ್ಲಿಕ್ ಸ್ಕೂಲ್ ಬೆನಕನಕೊಂಡ ಶಾಲೆಗಳ ಪ್ರಾಂಶುಪಾಲರು, ಶಿಕ್ಷಕ ವೃಂದ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ