ಕನ್ನಡಪ್ರಭ ವಾರ್ತೆ ಮಂಡ್ಯ
ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಯಿಂದ ನಗರದ ಹೊರ ವಲಯದಲ್ಲಿರುವ ಎ ಅಂಡ್ ಎ ಸಭಾಂಣದಲ್ಲಿ ನಡೆದ ಪ್ರಾಂತೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಪೌರ ಕಾರ್ಮಿಕರು ಒಂದೆರಡು ದಿನಗಳ ಕಾಲ ಚಳವಳಿ ನಡೆಸಿದರೆ ನಗರದ ಪರಿಸ್ಥಿತಿ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಎಂಬುದನ್ನು ಊಹಿಸಲಾಗದು ಎಂದರು.
ಪೌರ ಕಾರ್ಮಿಕರು ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಸೇವಾ ಕಾರ್ಯದಲ್ಲಿ ತೊಡಗುವರು. ಜೊತೆಗೆ ಶ್ರಮಿಕರು ಸಹ ಸಮಾಜಕ್ಕಾಗಿ ಕೆಲಸ ಮಾಡುತ್ತಾರೆ. ಅವರಿಗೂ ವಿವಿಧ ಸೌಲಭ್ಯಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದರು.ಪ್ರಾಂತೀಯ ಅಧ್ಯಕ್ಷ ಎಸ್.ಪಿ.ಆದರ್ಶ ಮಾತನಾಡಿ, ಪ್ರತಿಯೊಬ್ಬರಲ್ಲೂ ಅದಮ್ಯ ಚೈತನ್ಯ ಶಕ್ತಿ ಅಂತರ್ಗತವಾಗಿದೆ. ಅದು ಸಮಾಜಮುಖಿಯಾಗಿ ಎಲ್ಲರನ್ನೂ ದೈವ್ಯತ್ವದೆಡೆಗೆ ಸೆಳೆಯುವ ಶಕ್ತಿಯನ್ನು ಉದ್ದೀಪನಗೊಳಿಸುವ ಶಕ್ತಿ ಸಾಮಾಜಿಕ ಸಂಸ್ಥೆಗಳಿವೆ. ನಿಸ್ವಾರ್ಥ ಸೇವಾ ಮನೋಭಾವ ಸಮಾಜಗ್ರಾಹ್ಯ ಚಟುವಟಿಕೆಗಳನ್ನು ಗಮನ ಸೆಳೆಯುವಂತೆ ಮಾಡುತ್ತದೆ ಎಂದರು.
ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ಪತ್ರಾಭಿಯಾನ
ತಹಸೀಲ್ದಾರ್ ಅಧ್ಯಕ್ಷರು, ತಾಪಂ ಇಒ, ಆಯಾ ತಾಲೂಕಿನ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ, ಟಿ.ಸಿ.ಒ ಸದಸ್ಯರು ಹಾಗೂ ಸಮಾಜ ಕಲ್ಯಾಣ ಇಲಾಖೆಯ, ಸಹಾಯಕ ನಿರ್ದೇಶಕರು, ಸದಸ್ಯ ಕಾರ್ಯರ್ಶಿ ಇವರನ್ನು ಒಳಗೊಂಡಂತೆ ತಾಲೂಕು ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.