ಸ್ವಾತಂತ್ರ್ಯ ಉಳಿಸಿಕೊಳ್ಳವುದು ಎಲ್ಲರ ಕರ್ತವ್ಯ: ಮಾದಾರ ಚೆನ್ನಯ್ಯ ಶ್ರೀ

KannadaprabhaNewsNetwork |  
Published : Aug 17, 2025, 01:33 AM IST
ಫೋಟೋ (16 ಹೆಚ್‌ ಎಲ್‌ ಕೆ .1) ತಾಲೂಕಿನ  ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ  ಕಾಲೇಜುಗಳ ವತಿಯಿಂದ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ  ಧ್ವಜಾರೋಹಣ ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಅಧ್ಯಕ್ಷ ಡಾ.ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಧ್ವಜಾರೋಹಣ ನೆರವೇರಿಸಿ  ಮಾತನಾಡಿದರು……………………………… | Kannada Prabha

ಸಾರಾಂಶ

ಸ್ವಾತಂತ್ರ್ಯ ಹೋರಾಟಗಾರರ ಶ್ರಮದಿಂದ ಪಡೆದುಕೊಂಡ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಅಧ್ಯಕ್ಷ ಡಾ.ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹೊಳಲ್ಕೆರೆ

ಸ್ವಾತಂತ್ರ್ಯ ಹೋರಾಟಗಾರರ ಶ್ರಮದಿಂದ ಪಡೆದುಕೊಂಡ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಅಧ್ಯಕ್ಷ ಡಾ.ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ತಿಳಿಸಿದರು.

ತಾಲೂಕಿನ ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಎಲ್ಲಾ ಶಾಲಾ ಕಾಲೇಜುಗಳ ವತಿಯಿಂದ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಹೋರಾಟಗಾರರ ನೂರಾರು ವರ್ಷಗಳ ಫಲವಾಗಿ ನಮಗೆ ಸಿಕ್ಕಿದೆ ಅವರ ತ್ಯಾಗ, ಬಲಿದಾನ, ಹೋರಾಟಗಳು ವ್ಯರ್ಥವಾಗಬಾರದು. 1947ಕ್ಕಿಂತ ಮುಂಚೆ ನಮಗೆ ಯುದ್ಧ ಮಾಡುವ ಸಾಮರ್ಥ್ಯ ಸಹ ಇರಲಿಲ್ಲ. ಇಂದು ನಮಗೆ ಎಲ್ಲಾ ರೀತಿಯ ಹೋರಾಟದ ಶಕ್ತಿ ಬಂದಿದೆ. ಜಾತಿ ಮತ ಪಂಥವೆನ್ನದೆ ದೇಶಕ್ಕಾಗಿ ನಾವು ಎನ್ನುವ ಸಂಕಲ್ಪದಡಿಯಲ್ಲಿ ಎಲ್ಲರೂ ಕರ್ತವ್ಯವನ್ನು ನಿರ್ವಹಿಸಬೇಕು, ಭಾರತದ ಆಂತರಿಕ ವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ಶಕ್ತಿಗಳನ್ನು ಎದುರಿಸುವ ಶಕ್ತಿ ನಮ್ಮಲ್ಲಿದ್ದು ಮಿಲಿಟರಿ ಕ್ಷೇತ್ರದಲ್ಲಿ ವಿಶ್ವದಲ್ಲೇ ನಾವು ನಾಲ್ಕನೇ ಸ್ಥಾನದಲ್ಲಿ ಇದ್ದೇವೆ. ಇಂದು ಪ್ರಪಂಚದಲ್ಲಿ ಭಾರತ ಎಲ್ಲಾ ರೀತಿಯಲ್ಲಿ ಮುಂಚೂಣಿಗೆ ಬಂದಿದ್ದು ಇನ್ನಷ್ಟು ಕಾಲ ಒಗಟ್ಟಿನಿಂದ ಕೆಲಸ ಮಾಡಿದಲ್ಲಿ ವಿಶ್ವದಲ್ಲಿ ಮೊದಲ ಸ್ಥಾನ ತಲುಪುತ್ತೇವೆ. ಇಂದು ಭಾರತ ಒಂದೇ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿಲ್ಲ ವಿಜ್ಞಾನ, ತಂತ್ರಜ್ಞಾನ, ಸಾಂಸ್ಕೃತಿಕ, ಆಧ್ಯಾತ್ಮಿಕ ಮುಂತಾದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದೆ ಎಂದರು.

ಹಿರಿಯ ವೈದ್ಯ ಡಾ.ಸತೀಶ್ ಮಾತನಾಡಿ ಸ್ವಾತಂತ್ರ್ಯವನ್ನು ಪಡೆದುಕೊಳ್ಳುವುದು ಎಷ್ಟು ಮುಖ್ಯವೋ ಅಷ್ಟೇ ದೇಶಕ್ಕಾಗಿ ಕರ್ತವ್ಯವನ್ನು ನಿಷ್ಠೆಯಿಂದ ಮಾಡುವುದು ಅಷ್ಟೇ ಮುಖ್ಯವಾಗುತ್ತದೆ ನಾವೆಲ್ಲರೂ ಸೇರಿ ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಅಭಿವೃದ್ಧಿಗೆ ಕೈಗೂಡಿಸಿದಾಗ ಇದು ಇನ್ನಷ್ಟು ಬೆಳೆದು ಈ ಭಾಗದ ಜನರಿಗೆ ದಾರಿದೀಪವಾಗುತ್ತದೆ ಎಂದರು.

ಪುಣ್ಯಾರಾಧನೆ ಅಂಗವಾಗಿ ಏರ್ಪಡಿಸಿದ್ದ ಭಜನಾ ಸ್ಪರ್ಧೆಗಳಲ್ಲಿ ವಿಜೇತರಾದವರು ಹಾಗೂ ಶಾಲಾ ಕಾಲೇಜುಗಳಲ್ಲಿ ಅತೀ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳನ್ನು ಸನ್ಮಾನ ಮಾಡಲಾಯಿತು. ಅನಾಥಸೇವಾಶ್ರಮದ ಕಾರ್ಯದರ್ಶಿ ಎಸ್.ಕೆ.ಬಸವರಾಜನ್, ಖಜಾಂಚಿ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ, ವಿಶ್ವಸ್ತರಾದ ಕೆ.ಡಿ.ಬಡಿಗೇರ, ಎಂ.ಜಿ.ರಾಮದಾಸ್, ಪಿ.ಕೆ.ರಾಜಪ್ಪ, ಕೆಂಗುಂಟೆ ಜಯಣ್ಣ, ಸುಧಾಕರ್, ಆಡಳಿತಾಧಿಕಾರಿ ಡಾ.ಜಿ.ಪಾಂಡುರಂಗಮೂರ್ತಿ, ಖ್ಯಾತ ಚಲನಚಿತ್ರ ನಿರ್ದೇಶಕ ರಾಧಾಕೃಷ್ಣ ಪಲ್ಲಕ್ಕಿ, ಎಲ್ಲಾ ಶಾಲಾ ಕಾಲೇಜುಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿವರ್ಗ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌