ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ಎಲ್ಲರ ಕರ್ತವ್ಯ

KannadaprabhaNewsNetwork |  
Published : Aug 24, 2025, 02:00 AM IST
ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತ | Kannada Prabha

ಸಾರಾಂಶ

ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ನಗರಸಭೆ ಅಧ್ಯಕ್ಷ ಎಸ್.ಸುರೇಶ್ ಹೇಳಿದರು.

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ನಗರಸಭೆ ಅಧ್ಯಕ್ಷ ಎಸ್.ಸುರೇಶ್ ಹೇಳಿದರು.

ನಗರದ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಅಂಗವಾಗಿ ಕ್ವಿಟ್ ಇಂಡಿಯಾ ಚಳುವಳಿಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಗಾಂಧಿವಾದಿ ಸಿ. ರಂಗಸ್ವಾಮಿ ಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರದಲ್ಲಿ ಗಾಂಧಿವಾದಿ ರಂಗಸ್ವಾಮಿ ಹಾಗೂ ಇತರರು ಗಾಂಧೀಜಿಯವರ ಅನುಯಾಯಿಯಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಜಿಲ್ಲೆಯಲ್ಲಿ ಸ್ವಾತಂತ್ರ್ಯ. ಹೋರಾಟದ ಚಳವಳಿಗಳನ್ನು ಪ್ರೇರೇಪಿಸಿದರು. ಅವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.

ಪ್ರತಿಯೊಬ್ಬರೂ ವಿದೇಶಿವಸ್ತುಗಳನ್ನು ನಿರಾಕರಿಸಿ, ಸ್ವದೇಶಿ ವಸ್ತುಗಳನ್ನು ಬಳಸುವ ಮೂಲಕ ದೇಶಪ್ರೇಮವನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಚೂಡಾಧ್ಯಕ್ಷ ಮಹಮ್ಮದ್‌ ಅಸ್ಕರ್ ಮಾತನಾಡಿ, ಅನೇಕ ಮಹನೀಯರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆತು 79 ವರ್ಷಗಳು ತುಂಬಿದೆ. ಸ್ವಾತಂತ್ರ್ಯ ಹೋರಾಟಗಾರರ ಶ್ರಮದಿಂದ ನಾವೆಲ್ಲರೂ ಚೆನ್ನಾಗಿದ್ದೇವೆ. ಸ್ವಾತಂತ್ರ್ಯ ಹೋರಾಟಗಾರರನ್ನು ಸದಾ ಸ್ಮರಿಸುವ ಕೆಲಸ ಆಗಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಶೈಲೇಶ್‌ಕುಮಾ‌ರ್ ಮಾತನಾಡಿ, ಕ್ವಿಟ್ ಇಂಡಿಯಾ ಚಳವಳಿ ಬ್ರಿಟಿಷರಿಗೆ ಕೊಟ್ಟ ಶಾಪ. ಮಾಡು ಇಲ್ಲವೆ ಮಡಿ ಭಾರತೀಯರಿಗೆ ಕೊಟ್ಟ ಮಂತ್ರ. ವ್ಯಾಪಾರಕ್ಕಾಗಿ ಬ್ರಿಟಿಷರು ಭಾರತಕ್ಕೆ ಬಂದು ಭಾರತದ ಮೇಲೆ ಸಂಪಾದನೆ ಮಾಡಿ ದೇಶದಲ್ಲಿ ದೌರ್ಜನ್ಯ ಮಾಡುತ್ತಿದ್ದರು. ಅವರ ವಿರುದ್ಧ ಗಾಂಧೀಜಿಯವರ ನೇತೃತ್ವದಲ್ಲಿ ಸ್ವಾತಂತ್ರ್ಯ ಹೋರಾಟದ ಪ್ರತಿಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಅದನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ರಾಷ್ಟ್ರ ಯುವ ಪ್ರಶಸ್ತಿ, ಮರಸ್ಕೃತ ಸುರೇಶ್‌ಎನ್‌.ಗುದ್ವೇದಿ ಮಾತನಾಡಿ, ವರ್ಷದಲ್ಲಿ 2 ದಿನವಾದರೂ ಕೂಡ ಖಾದಿಬಟ್ಟೆ ತೊಡುವ ಸಂಕಲ್ಪ ಮಾಡೋಣ. ಖಾದಿ ನಮ್ಮ ರಾಷ್ಟ್ರೀಯ ಹೆಮ್ಮೆ. ಸಂಕೇತ, ಖಾದಿಗಾಗಿ, ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಜನರು ತಮ್ಮ ಪ್ರಾಣ ಅರ್ಪಿಸಿದರು ಎಂದರು.

ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಪ್ರಾಸ್ತಾವಿಕ ಭಾಷಣ ಮಾಡಿದರು. ಉದ್ಯಮಿ ಶ್ರೀನಿಧಿ ಕುದರ್ ಮಾತನಾಡಿದರು.

ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಎಸ್‌.ಜಿ.ಮಹಾಲಿಂಗಸ್ವಾಮಿ, ದೈಹಿಕ ಶಿಕ್ಷಣ ಶಿಕ್ಷಕಿ ಸುಶೀಲ, ಆಶ್ರಯಸೇವಾ ಟ್ರಸ್ಟ್ ಅಧ್ಯಕ್ಷ ಎಂ.ರಮೇಶ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಸಭಾ ಮಾಜಿ ಗಣೇಶದೀಕ್ಷಿತ್, ಚಾ.ವೆಂ.ರಾಜ್ ಗೋಪಾಲ್ ಮಹಾಸಭಾದ ಪಣ್ಯದಹುಂಡಿ ರಾಜು, ಮಹೇಶಗೌಡ, ಅರುಣ್‌ಕುಮಾರ್‌ಗೌಡ, ಲೋಕೇಶ್ ಹೊಮ್ಮ, ಮುತ್ತಿಗೆ ಗೋವಿಂದರಾಜು, ನಂಜುಂಡಸ್ವಾಮಿ, ಮುತ್ತು ರಾಜ್, ಆಟೋ ಲಿಂಗರಾಜು, ಚನ್ನಶೆಟ್ಟಿ, ಇತರರು ಹಾಜರಿದ್ದರು.

PREV

Recommended Stories

ಬುರುಡೆ ಗ್ಯಾಂಗ್‌ಗೆ ಚಿನ್ನಯ್ಯ ಸೇರಿದ್ದು ಹೇಗೆ ? ಪರಿಚಯಿಸಿದ್ದೇ ಸೌಜನ್ಯ ಮಾವ!
ಬುರುಡೆ ತನಿಖೆ ವೇಳೆ ಎಲ್ಲರೂ, ಬಂಧನ ವೇಳೆ ಕೈಕೊಟ್ಟರು!