ಧರ್ಮಸ್ಥಳದ ಪರ ನಿಲ್ಲುವುದು ಪ್ರತಿಯೊಬ್ಬರ ಕರ್ತವ್ಯ

KannadaprabhaNewsNetwork |  
Published : Aug 24, 2025, 02:00 AM IST
ವಿಜೆಪಿ ೨೩ವಿಜಯಪುರ ಪಟ್ಟಣದ ಶ್ರೀ ಚನ್ನಕೇಶವ ಸ್ವಾಮಿ ಆವರಣದಲ್ಲಿ ತಾಲೂಕು ವಿಶ್ವ ಹಿಂದೂ ಪರಿಷದ್, ಬಜರಂಗದಳ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ವತಿಯಿಂದ ಆಯೋಜಿಸಿದ ಸಾಮೂಹಿಕ ಶಿವಪಂಚಾಕ್ಷರಿ ಮಂತ್ರ ಪಠಣೆ ಕಾರ್ಯಕ್ರಮದಲ್ಲಿ ಸಂಗಮೇಶ್ವರ ಧರ್ಮಸಂಸ್ಥೆಯ ಅಧ್ಯಕ್ಷ  ಎಂ. ಚಂದ್ರಕಾಂತ್ ಕುಮಾರ್ ಮಾತನಾಡಿದರು. | Kannada Prabha

ಸಾರಾಂಶ

ಧರ್ಮಸ್ಥಳದ ಶ್ರೀ ಮಂಜುನಾಥನ ಶ್ರೀಕ್ಷೇತ್ರ ಕಳೆದ ಹಲವು ದಶಕಗಳಿಂದ ಸಹಸ್ರಾರು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ, ನೂರಾರು ಧಾರ್ಮಿಕ ಕ್ಷೇತ್ರಗಳನ್ನು ಜೀರ್ಣೋದ್ಧಾರಗೊಳಿಸುವ ಪವಿತ್ರ ಕಾರ್ಯವನ್ನು ಮಾಡಿಕೊಂಡು ಬಂದಿದೆ.

ಕನ್ನಡಪ್ರಭ ವಾರ್ತೆ ವಿಜಯಪುರ

ಕೋಟ್ಯಂತರ ಹಿಂದೂಗಳ ಶ್ರದ್ಧಾ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಮಾಡುತ್ತಿರುವವರಿಗೆ ತಕ್ಕ ಶಿಕ್ಷೆ ಆಗಬೇಕು, ಶ್ರೀಕ್ಷೇತ್ರ ಧರ್ಮಸ್ಥಳದ ಅಪಪ್ರಚಾರ, ಷಡ್ಯಂತ್ರ ದೂರವಾಗಿ, ಕ್ಷೇತ್ರದ ಶ್ರದ್ಧೆಭಕ್ತಿ ವೃದ್ಧಿಸಲಿ ಎಂದು ಸಂಗಮೇಶ್ವರ ಧರ್ಮಸಂಸ್ಥೆಯ ಅಧ್ಯಕ್ಷ ಎಂ. ಚಂದ್ರಕಾಂತ್ ಕುಮಾರ್ ಹೇಳಿದರು.

ಪಟ್ಟಣದ ಶ್ರೀ ಚನ್ನಕೇಶವ ಸ್ವಾಮಿ ಆವರಣದಲ್ಲಿ ತಾಲೂಕು ವಿಶ್ವ ಹಿಂದೂ ಪರಿಷತ್‌, ಬಜರಂಗದಳ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ವತಿಯಿಂದ ಆಯೋಜಿಸಿದ ಸಾಮೂಹಿಕ ಶಿವಪಂಚಾಕ್ಷರಿ ಮಂತ್ರ ಪಠಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಧರ್ಮಸ್ಥಳದ ಶ್ರೀ ಮಂಜುನಾಥನ ಶ್ರೀಕ್ಷೇತ್ರ ಕಳೆದ ಹಲವು ದಶಕಗಳಿಂದ ಸಹಸ್ರಾರು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ, ನೂರಾರು ಧಾರ್ಮಿಕ ಕ್ಷೇತ್ರಗಳನ್ನು ಜೀರ್ಣೋದ್ಧಾರಗೊಳಿಸುವ ಪವಿತ್ರ ಕಾರ್ಯವನ್ನು ಮಾಡಿಕೊಂಡು ಬಂದಿದೆ. ಜೊತೆಗೆ ಕ್ಷೇತ್ರದಲ್ಲಿ ನಿರಂತರ ಅನ್ನದಾನದ ಪುಣ್ಯ ಕಾರ್ಯ ಮಾಡುತ್ತಿದೆ. ರಾಜ್ಯ ದೇಶ ವಿದೇಶಗಳಿಂದ ಕೋಟ್ಯಂತರ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶಿವನ ದರ್ಶನ ಪಡೆದು ಧನ್ಯರಾಗುತ್ತಾರೆ. ನೂರಾರು ವರ್ಷಗಳ ಪರಂಪರೆ ಇರುವ ಒಂದು ನಂಬಿಕೆಯ ಶ್ರದ್ಧಾಕೇಂದ್ರವನ್ನು ಹಿಂದೂ ಧರ್ಮ ವಿರೋಧಿಶಕ್ತಿಗಳು ವ್ಯಾಪಕವಾಗಿ ಷಡ್ಯಂತ್ರ ಮಾಡಿ ಅಪಪ್ರಚಾರವೆಸಗುವ ಮೂಲಕ ಕ್ಷೇತ್ರಕ್ಕೆ ಕೆಟ್ಟ ಹೆಸರು ತರುವ ಸಂಚು ನಡೆಸುತ್ತಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ನಿಲ್ಲುವುದು ಪ್ರತಿಯೊಬ್ಬರ ಕರ್ತವ್ಯ ವಾಗಿದೆ ಎಂದರು.

ಬಜರಂಗದಳ ಜಿಲ್ಲಾ ಸಂಯೋಜಕ ಕೃಷ್ಣಮೂರ್ತಿ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಪವಿತ್ರ ಶ್ರದ್ಧಾಕೇಂದ್ರವು ಧರ್ಮ ವಿರೋಧಿ ಶಕ್ತಿಗಳ ಷಡ್ಯಂತ್ರದಿಂದ ವ್ಯಾಪಕವಾಗಿ ಅಪಚಾರಕ್ಕೆ ಗುರಿಯಾಗಿದೆ. ಇಂತಹ ಷಡ್ಯಂತ್ರಗಳಿಗೆ ಸೋಲುಂಟಾಗಲು ಮತ್ತು ಅಪಪ್ರಚಾರ ಕೊನೆಯಾಗಿ ಕ್ಷೇತ್ರದಲ್ಲಿ ಶ್ರದ್ಧೆಭಕ್ತಿ ಬೆಳಗಿ ಶಾಂತಿ ನೆಲಸಲಿ ಎಂಬ ಸಂಕಲ್ಪದೊಂದಿಗೆ ರಾಜ್ಯಾದ್ಯಂತ ಆಗಸ್ಟ್ ತಿಂಗಳಲ್ಲಿ ಒಂದು ವಾರದ ಕಾಲ ಸಾಮೂಹಿಕ ಶಿವಪಂಚಾಕ್ಷರಿ ಓಂ ನಮಃ ಶಿವಾಯ ಜಪ ಅನುಷ್ಟಾನಕ್ಕೆ ಎಲ್ಲ ಭಕ್ತರಲ್ಲಿ ವಿಶ್ವ ಹಿಂದೂ ಪರಿಷತ್‌ ಕರೆ ನೀಡುತ್ತಿದೆ.

ಜಿಲ್ಲೆಯ ಎಲ್ಲಾ ಹಿಂದೂ ಸಂಘಟನೆಗಳು, ಧಾರ್ಮಿಕ ಸಂಘ-ಸಂಸ್ಥೆಗಳು ಹಾಗೂ ಮಠ ಮಂದಿರ, ಭಜನಾಮಂದಿರ, ದೇವಸ್ಥಾನ, ದೈವಸ್ಥಾನಗಳಲ್ಲಿ ಸಾಮೂಹಿಕವಾಗಿಯೂ ಮತ್ತು ಮನೆ ಮನೆಗಳಲ್ಲಿ ವೈಯುಕ್ತಿಕವಾಗಿಯೂ ಶಿವಪಂಚಾಕ್ಷರಿ ನಾಮ ಜಪ ಮಾಡುವ ಮೂಲಕ ಧರ್ಮಸ್ಥಳಕ್ಕೆ ಬಂದಿರುವ ಕಳಂಕವನ್ನು ಅಳಿಸಬೇಕಾಗಿ ವಿನಂತಿ ಮಾಡಿದರು.

ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಸಂಚಾಲಕ ರಘು ಮಾತನಾಡಿದರು, ಮಹಂತಿನ ಮಠ ಧರ್ಮ ಸಂಸ್ಥೆಯ ಖಜಾಂಚಿ ಎ. ಮಧು, ಮುಖಂಡರಾದ ರವಿ, ಮಣಿ ಸೇರಿದಂತೆ ಧರ್ಮಸ್ಥಳ ಕ್ಷೇತ್ರದ ಅಭಿಮಾನಿಗಳು ಇದ್ದರು.

PREV

Recommended Stories

ಬುರುಡೆ ಗ್ಯಾಂಗ್‌ಗೆ ಚಿನ್ನಯ್ಯ ಸೇರಿದ್ದು ಹೇಗೆ ? ಪರಿಚಯಿಸಿದ್ದೇ ಸೌಜನ್ಯ ಮಾವ!
ಬುರುಡೆ ತನಿಖೆ ವೇಳೆ ಎಲ್ಲರೂ, ಬಂಧನ ವೇಳೆ ಕೈಕೊಟ್ಟರು!