ಕನ್ನಡಪ್ರಭ ವಾರ್ತೆ ಸೊರಬ
ಪಟ್ಟಣದ ಶ್ರೀ ಶಕ್ತಿ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಕೀಲರ ಸಂಘ, ಹಿರಿಯ ನಾಗರಿಕರ ವಿವಿಧ ವೇದಿಕೆ/ಸಂಸ್ಥೆಗಳು, ನಿವೃತ್ತ ಸರ್ಕಾರಿ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹಿರಿಯ ನಾಗರಿಕರು ಸಾಂಸ್ಕೃತಿಕ ಮತ್ತು ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಇತರರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು ಜೀವನೋತ್ಸಾಹ ಹೆಚ್ಚಿಸಿಕೊಳ್ಳಲು ಸಾಧ್ಯ. ವಯಸ್ಸು ಕೇವಲ ದೇಹಕ್ಕೆ ಮಾತ್ರ, ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ ಯಾವುದೇ ಅಂಜಿಕೆ ಇಲ್ಲದೇ ಮುಕ್ತವಾಗಿ ಭಾಗವಹಿಸಬೇಕು ಎಂದರು.ಹಿರಿಯ ನಾಗರಿಕರ ರಕ್ಷಣೆಗಾಗಿ ಸರ್ಕಾರ ಹಲವಾರು ಕಾಯ್ದೆ ಹಾಗೂ ಕಾನೂನುಗಳನ್ನು ಜಾರಿಗೆ ತಂದಿದೆ. ಹಿರಿಯ ನಾಗರಿಕರು ಇವುಗಳ ಬಗ್ಗೆ ಮಾಹಿತಿಗಳನ್ನು ಹೊಂದುವುದರೊಂದಿಗೆ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಸಮಾಜದಲ್ಲಿ ಕಿರಿಯರಿಂದ ಸಮಸ್ಯೆಗೆ ಸಿಲುಕಿದ ಹಿರಿಯ ನಾಗರಿಕರ ರಕ್ಷಣೆಗಾಗಿ ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆಯಲ್ಲಿನ ಅವಕಾಶದಂತೆ ಪ್ರತಿ ಕಂದಾಯ ಉಪವಿಭಾಗದಲ್ಲಿ ಒಂದು ನಿರ್ವಹಣಾ ನ್ಯಾಯಮಂಡಳಿಯನ್ನು ಸ್ಥಾಪಿಸಲಾಗಿದ್ದು, ಈ ನ್ಯಾಯಮಂಡಳಿಗಳಲ್ಲಿ ಜೀವನ ನಿರ್ವಹಣೆಗಾಗಿ ತೊಂದರೆಗೊಳಗಾದ ಹಿರಿಯರು ಜೀವನಾಂಶವನ್ನು ಪಡೆಯಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವಕೀಲ ಸಂಭಾವಿ, ನವಚೇತನ ಬುದ್ಧಿಮಾಂದ್ಯ ಮಕ್ಕಳ ಸಂಸ್ಥೆಯ ಕಾರ್ಯದರ್ಶಿ ರಾಮಪ್ಪ ಚೌಡಿಕೊಪ್ಪ, ಸಂಸ್ಥೆಯ ಮುಖ್ಯ ಶಿಕ್ಷಕ ಎಸ್. ರವೀಂದ್ರ, ಶಿಕ್ಷಕಿಯವರಾದ ಮಂಗಳ ಪೂಜಾರ್, ಪಲ್ಲವಿ, ಕೆ.ಬಿ. ಪುಟ್ಟರಾಜು, ಎಂಆರ್‌ಡಬ್ಲ್ಯೂ ಭರತ್, ಹಿರಿಯ ನಾಗರಿಕರ ಸಮಾಲೋಚಕ ರವೀಂದ್ರ ವಿ.ಆರ್.ಡಬ್ಲ್ಯೂ ರಾಬರ್ಟ್ ಶಿವಮೊಗ್ಗ ಮೊದಲಾದವರು ಹಾಜರಿದ್ದರು.