It is everyone's responsibility to uphold the ideals of the Constitution.
ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಅಮೃತೇಶ್ವರ ಸ್ವಾಮಿ ಹೇಳಿಕೆಕನ್ನಡಪ್ರಭ ವಾರ್ತೆ ಹಿರಿಯೂರು
ಭಾರತ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕು, ಸ್ವಾತಂತ್ರ‍್ಯ, ನ್ಯಾಯ ಮತ್ತು ಘನತೆಯಿಂದ ಬದುಕುವ ಅವಕಾಶ ಕಲ್ಪಿಸಿದ್ದು ಅದು ಪ್ರಜಾಪ್ರಭುತ್ವದ ಆತ್ಮವಾಗಿದೆ. ಅದರ ಆಶಯಗಳನ್ನು ಪಾಲಿಸುವುದು ಪ್ರತಿಯೊಬ್ಬರ ಹೊಣೆಯಾಗಿದೆ ಎಂದು ಶಿಕ್ಷಣ ಸುಧಾರಣಾ ಸಮಿತಿ ಅಧ್ಯಕ್ಷ ಅಮೃತೇಶ್ವರಸ್ವಾಮಿ ಹೇಳಿದರು.
ನಗರದ ಟಿ.ಬಿ.ವೃತ್ತದ ಸಮೀಪದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಆವರಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಮತ್ತು ಪೊಲೀಸ್ ಇಲಾಖೆ ನೇತೃತ್ವದಲ್ಲಿ ಆಯೋಜಿಸಿದ್ದ ಸಂವಿಧಾನ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯಾಗಿರುವಂತಹ ಸಂವಿಧಾನವನ್ನು 1949ರ ನ.26ರಂದು ಅಂಗೀಕರಿಸಿದ ದಿನ. ಈ ಐತಿಹಾಸಿಕ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತದೆ. ಜಾತಿ, ಧರ್ಮ, ಭಾಷೆ, ಪ್ರದೇಶ ಎಂಬ ಭೇದಭಾವವಿಲ್ಲದೆ ಎಲ್ಲರಿಗೂ ಸಮಾನ ಸ್ಥಾನಮಾನ ನೀಡಿರುವುದು ನಮ್ಮಸಂವಿಧಾನದ ವಿಶೇಷವಾಗಿದೆ ಎಂದರು.
ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಸೂರಗೊಂಡನಹಳ್ಳಿ ಕೃಷ್ಣಮೂರ್ತಿ ಮಾತನಾಡಿ, ಇಂದಿನ ಯುವಜನತೆ ಸಂವಿಧಾನದ ಆಶಯಗಳನ್ನು ಅರಿತುಕೊಳ್ಳುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮ ಆಯೋಜಿಸುವ ಜತೆಗೆ ಪ್ರತಿ ಮನೆಗೂ ಸಂವಿಧಾನದ ಪುಸ್ತಕಗಳನ್ನು ತಲುಪಿಸುವ ಕಾರ್ಯವಾಗಬೇಕು.
ಆ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕಿದೆ. ಅದರ ಆಶಯಗಳನ್ನು ನಮ್ಮ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಈ ದಿನಕ್ಕೆ ನಿಜವಾದ ಅರ್ಥ ಸಿಗಲಿದೆ ಎಂದರು.
ಇದೇ ವೇಳೆ ನಗರಸಭೆ ಪೌರಾಯುಕ್ತ ಎ.ವಾಸಿಂ ಸಂವಿಧಾನ ಪೀಠಿಕೆಯನ್ನು ಭೋಧಿಸಿದರು. ವಕೀಲ ನವಾಜ್ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಉಪ ತಹಸೀಲ್ದಾರ್ ಕೆ.ಬಿ.ತಿಪ್ಪೇಸ್ವಾಮಿ, ದಲಿತ ಮುಖಂಡರಾದ ಜೀವೇಶ್, ಹರ್ತಿಕೋಟೆ ದಯಾನಂದ, ಎಂ.ಡಿ.ಸಣ್ಣಪ್ಪ, ಕೇಶವಮೂರ್ತಿ, ರಾಮಚಂದ್ರ, ಪ್ರಾಂಶುಪಾಲ ಈ.ನಾಗೇಂದ್ರಪ್ಪ, ತಾಪಂ ಇಒ ನಿರ್ಮಲಾ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದಿನೇಶ್, ಬಿಸಿಎಂ ಅಧಿಕಾರಿ ಶಿವಕುಮಾರ್, ಸಿಪಿಐಗಳಾದ ಚಂದ್ರಶೇಖರ್, ಮಹಮ್ಮದ್ ಸಿರಾಜ್, ಮುಖಂಡರಾದ ಓಂಕಾರಪ್ಪ, ಖಾದಿ ರಮೇಶ್, ಜ್ಞಾನೇಶ್, ರಾಘವೇಂದ್ರ, ಮಾರುತೇಶ್ ಮುಂತಾದವರು ಹಾಜರಿದ್ದರು.---
ಪೋಟೋ ಕ್ಯಾಪ್ಶನ್: 1,2
ಹಿರಿಯೂರು ನಗರದ ಟಿ.ಬಿ.ವೃತ್ತದ ಅಂಬೇಡ್ಕರ್ ಪ್ರತಿಮೆ ಬಳಿ ತಾಲೂಕು ಆಡಳಿತದ ವತಿಯಿಂದ ಸಂವಿಧಾನ ದಿನಾಚರಣೆ ಆಚರಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.