ಕನ್ನಡಪ್ರಭ ವಾರ್ತೆ ಕುಶಾಲನಗರ
ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಇಕೋ ಕ್ಲಬ್, ಎನ್.ಎಸ್.ಎಸ್.ಘಟಕ, ವಿಜ್ಞಾನ ಸಂಘ, ಸೀಕೋ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ ಹಾಗೂ ಎಸ್ ಡಿ ಎಂ ಸಿ ಯ ಸಹಯೋಗದೊಂದಿಗೆ ‘ಅರಣ್ಯಗಳು ಮತ್ತು ನಾವೀನ್ಯತೆ’ ಎಂಬ ಧ್ಯೇಯದೊಂದಿಗೆ ವಿಶ್ವ ಅರಣ್ಯ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪರಿಸರ ಜಾಗೃತಿ ಆಂದೋಲನದಲ್ಲಿ ಅರಣ್ಯ ದಿನದ ಮಹತ್ವ ಮತ್ತು ಪ್ರಾಮುಖ್ಯತೆ ಕುರಿತು ಮಾತನಾಡಿದರು.
ಪ್ರಸಕ್ತ ವರ್ಷ ‘ಅರಣ್ಯಗಳು ಮತ್ತು ನಾವೀನ್ಯತೆ‘’ಎಂಬ ವಿಷಯದ ಮೇಲೆ 2024 ರ ಅಂತರಾಷ್ಟ್ರೀಯ ಅರಣ್ಯ ದಿನವನ್ನು ಆಚರಿಸಲಾಗುತ್ತಿದೆ. ಮಾನವೀಯತೆ ಮತ್ತು ಗ್ರಹದ ಉಳಿವಿಗಾಗಿ ಕಾಡುಗಳು ಮತ್ತು ಮರಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ವಿಶ್ವ ಅರಣ್ಯ ದಿನ ಆಚರಿಸಲಾಗುತ್ತಿದೆ ಎಂದರು.ನಾವು ನಾಳಿನ ಉತ್ತಮ ಭವಿಷ್ಯತ್ತಿಗಾಗಿ ನೆಲ -ಜಲ, ಅರಣ್ಯ, ವನ್ಯಜೀವಿಗಳು ಹಾಗೂ ಜೀವಿ- ವೈವಿಧ್ಯ ಸಂರಕ್ಷಿಸುವ ಮೂಲಕ ಪರಿಸರ ಸಂರಕ್ಷಿಸಲು ಪಣ ತೊಡಬೇಕಿದೆ ಎಂದರು.
ಮಾನವ ಜನಾಂಗದ ಉಳಿವು ಮತ್ತು ಜೀವನಾಧಾರಕ್ಕಾಗಿ ಕಾಡುಗಳು ಬಹಳ ಮುಖ್ಯವಾಗಿವೆ.ಪ್ರಕೃತಿ ಮೇಲೆ ಮಾನವನ ಹಸ್ತಕ್ಷೇಪದಿಂದ ಇಂದು ಜೀವ ವೈವಿಧ್ಯ ದಿನೇ ದಿನೇ ಕ್ಷೀಣಿಸುತ್ತಿದೆ. ಈ ದಿಸೆಯಲ್ಲಿ ನಾವು ಉತ್ತಮ ಭವಿಷ್ಯತ್ತಿಗಾಗಿ ನೆಲ -ಜಲ, ಅರಣ್ಯ, ವನ್ಯಜೀವಿಗಳು ಹಾಗೂ ಜೀವಿ- ವೈವಿಧ್ಯ ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನಾವು ಕೊಡಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಪ್ರೇಮಕುಮಾರ್ ಹೇಳಿದರು.
ಅರಣ್ಯ ದಿನದ ಮಹತ್ವ ಕುರಿತು ಮಾತನಾಡಿದ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ , ನಮ್ಮ ದೈನಂದಿನ ಜೀವನದಲ್ಲಿ ಅರಣ್ಯ ಸಂಪನ್ಮೂಲದ ಪಾತ್ರ ಮತ್ತು ಅದರ ವಿನಾಶದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಈ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ ಎಂದರು.ಶಿಕ್ಷಕರಾದ ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಎನ್.ಸುಜಾತ, ಎಸ್.ಎಂ.ಗೀತಾ, ಬಿ.ಎಸ್.ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ, ಸಿಬ್ಬಂದಿ ಎಂ.ಉಷಾ, ವಿದ್ಯಾರ್ಥಿಗಳು ಇದ್ದರು.
ವಿದ್ಯಾರ್ಥಿಗಳು ಅರಣ್ಯ ಸಂರಕ್ಷಣೆಗೆ ಸಂಬಂಧಿಸಿದಂತೆ ಪರಿಸರ ಘೋಷಣೆಗಳನ್ನು ಪ್ರಚುರಪಡಿಸಿದರು.