- ಚನ್ನಗಿರಿಯಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಆಡಳಿತ ಆಶ್ರಯದಲ್ಲಿ ವಿಶ್ವ ಗ್ರಾಹಕರ ದಿನ ಸಮಾರಂಭ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ವಸ್ತುಗಳ ಖದೀದಿಸಿದಾಗ ಅಧಿಕೃತ ಬಿಲ್ ಪಡೆದುಕೊಳ್ಳಬೇಕು. ಇದರಿಂದ ಖರೀದಿ ವಸ್ತುಗಳ ಲೋಪದೋಷಗಳ ವಿರುದ್ಧ ಕ್ರಮ ಕೈಗೊಳ್ಳಲು ಸಹಕಾರಿ ಆಗುತ್ತದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಎಂ.ರಾಜಪ್ಪ ಮಾತನಾಡಿ, ಪ್ರತಿ ಹಂತಗಳಲ್ಲಿಯೂ ಗ್ರಾಹಕರ ಶೋಷಣೆಗಳು ನಡೆಯುತ್ತಿವೆ. ಇದನ್ನು ತಪ್ಪಿಸುವ ಉದ್ದೇಶದಿಂದ ಗ್ರಾಹಕರ ಸಂರಕ್ಷಣಾ ಹಕ್ಕುಗಳ ಬಗ್ಗೆ ತಿಳಿಸಲು ಇಂತಹ ದಿನಾಚರಣೆಗಳನ್ನು ನಡೆಸುತ್ತ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು.ಮುಖ್ಯ ಅತಿಥಿಗಳಾಗಿ ತಹಸೀಲ್ದಾರ್ ಎನ್.ಜೆ. ನಾಗರಾಜ್, ವಕೀಲರ ಸಂಘದ ಉಪಾಧ್ಯಕ್ಷ ಆರ್.ಬಾಬುಜಾನ್, ಕಾರ್ಯದರ್ಶಿ ಜಗದೀಶ್, ಖಜಾಂಚಿ ಮಲ್ಲಿಕಾರ್ಜುನ್, ತಿಪ್ಪೇಶ್ ಉಪಸ್ಥಿತರಿದ್ದರು.
- - - -26ಕೆಸಿಎನ್‌ಜಿ1.ಜೆಪಿಜಿ:ಚನ್ನಗಿರಿ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಆಡಳಿತ ಆಶ್ರಯದಲ್ಲಿ ವಿಶ್ವ ಗ್ರಾಹಕರ ದಿನ ಸಮಾರಂಭವನ್ನು ನ್ಯಾಯಾಧೀಶ ವಿಶ್ವನಾಥ ವಿ. ಮುಗತಿ ಉದ್ಘಾಟಿಸಿದರು.