ಮೂಲ ಸೌಕರ್ಯಗಳ ಜತೆ ವಿದ್ಯಾರ್ಥಿಗಳಆರೋಗ್ಯ ಕಾಪಾಡುವುದು ಅವಶ್ಯ: ಸಿಇಓ

KannadaprabhaNewsNetwork |  
Published : Feb 13, 2024, 12:48 AM IST
ಶಿವಮೊಗ್ಗ ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾಕರು ಮತ್ತು ಅಡುಗೆ ಸಿಬ್ಬಂದಿಗಳಿಗೆ ಹಾಗೂ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಉದ್ಘಾಟಿಸಿದರು. | Kannada Prabha

ಸಾರಾಂಶ

ಗ್ರಾಮೀಣ ಭಾಗದಲ್ಲಿ ಅವಕಾಶಗಳ ಕೊರತೆ ಮತ್ತು ಬಡತನದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ನಿಲಯಗಳಿಗೆ ಆಗಮಿಸುವ ವಿದ್ಯಾರ್ಥಿ ಗಳನ್ನು ಮೇಲ್ವಿಚಾರಕರು ಪ್ರೀತಿ ಮತ್ತು ಕಾಳಜಿಯಿಂದ ನೋಡಿಕೊಳ್ಳಬೇಕೆಂದು ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಸಲಹೆ ನೀಡಿದರು.

ಕನ್ನಡಪ್ರಭವಾರ್ತೆ ಶಿವಮೊಗ್ಗ

ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವುದರ ಜೊತೆಗೆ ಅವರ ಆರೋಗ್ಯ ಕಾಪಾಡುವುದು ಅತಿ ಅವಶ್ಯಕವಾಗಿದೆ ಎಂದು ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾಕರು ಮತ್ತು ಅಡುಗೆ ಸಿಬ್ಬಂದಿಗಳಿಗೆ ಹಾಗೂ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಾಸ್ಟೆಲ್ ವಿದ್ಯಾರ್ಥಿಗಳು ತಂದೆ ತಾಯಿಗಳನ್ನು ಬಿಟ್ಟು ವಿದ್ಯಾರ್ಥಿನಿಲಯದ ಮೇಲ್ವಿಚಾರಕರು ಮತ್ತು ಅಲ್ಲಿನ ಸಿಬ್ಬಂದಿಗಳ ಮೇಲೆ ನಂಬಿಕೆ ಇಟ್ಟುಕೊಂಡು ಬಂದಿರುತ್ತಾರೆ. ಗ್ರಾಮೀಣ ಭಾಗದಲ್ಲಿ ಅವಕಾಶಗಳ ಕೊರತೆ ಮತ್ತು ಬಡತನದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಗಳಿಗೆ ಆಗಮಿಸುತ್ತಾರೆ. ಆದ್ದರಿಂದ ಮೇಲ್ವಿಚಾರಕರು ಅವರನ್ನು ಪ್ರೀತಿ ಮತ್ತು ಕಾಳಜಿ ಯಿಂದ ನೋಡಿಕೊಳ್ಳಬೇಕು. ಆಹಾರ ತಯಾರಿಯಲ್ಲಿ ಸ್ವಚ್ಚತೆ, ಗುಣಮಟ್ಟ ಕಾಪಾಡಿಕೊಂಡು ಬರಬೇಕು.

ಅಡುಗೆಯ ಸಿಬ್ಬಂದಿಗಳು ಮತ್ತು ಮೇಲ್ವಿಚಾರಕರು ನಡುವೆ ಹೊಂದಾಣಿಕೆ ಅಗತ್ಯವಾಗಿದ್ದು ಹಾಸ್ಟೆಲ್ ಗಳಲ್ಲಿ ಯಾವುದೇ ಸಮಸ್ಯೆಗಳು ನಿರ್ಮಾಣವಾಗದಂತೆ ಎಚ್ಚರ ವಹಿಸಬೇಕು. ಹಾಗೂ ವಿದ್ಯಾರ್ಥಿಗಳ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು, ವ್ಯತ್ಯಾಸಗಳು ಕಂಡು ಬಂದಲ್ಲಿ ಸೂಕ್ತ ಚಿಕಿತ್ಸೆ ಕುರಿತು ಗಮನ ನೀಡುವುದು ನಿಮ್ಮ ಜವಾಬ್ದಾರಿ ಆಗಿದೆ ಎಂದು ಸೂಚಿಸಿದರು.

ಹಾಸ್ಟೆಲ್ ನಲ್ಲಿ ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಕಾಣಬೇಕು. ಅಡುಗೆ ಸಿಬ್ಬಂದಿಗಳು ಅತಿ ಜಾಗರೂಕತೆಯಿಂದ ತಮ್ಮ ಕಾರ್ಯವನ್ನು ನಿರ್ವಹಿಸಬೇಕು. ಇಲಾಖೆಗೆ, ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಗಳು ಆಗದಂತೆ ಎಚ್ವರಿಕೆಯಿಂದ ಕಾರ್ಯನಿರ್ವಹಿಸಿ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಆಹಾರ ನಿರೀಕ್ಷಕರದ ಸೋಮೇಶ್ವರ್ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಸಂರಕ್ಷಣೆ, ದಾಸ್ತಾನು ಕೊಠಡಿಯ ಕುರಿತು ಮಾಹಿತಿಯನ್ನು ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ, ಎಲ್ಲಾ ತಾಲೂಕಿನ ಸಹಾಯಕ ನಿರ್ದೇಶಕರುಗಳು, ಮೊರಾರ್ಜಿ ವಸತಿ ಶಾಲೆಗಳ ಪ್ರಾಂಶುಪಾರುಗಳು, ಅಧಿಕಾರಿಗಳು, ಸಿಬ್ಬಂದಿಗಳು ಅಡುಗೆ ಸಹಾಯಕರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ