- ವಿದ್ಯಾರ್ಥಿನಿ ಶ್ಯಾಗಲೆ ಆರ್.ಕವಿತಾ ಸನ್ಮಾನ ಕಾರ್ಯಕ್ರಮದಲ್ಲಿ ಬಿ.ವೀರಣ್ಣ
ಕನ್ನಡಪ್ರಭ ವಾರ್ತೆ ದಾವಣಗೆರೆ
ಶಾಲೆಗಳಲ್ಲಿ ಸಿಗುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಂಡು ಸಮಗ್ರ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಪಾಲಕರು ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿ ಕಡೆ ಸೂಕ್ತ ಗಮನಹರಿಸಬೇಕು ಎಂದು ವಾಲ್ಮೀಕಿ ನಾಯಕ ಸಮಾಜ ಜಿಲ್ಲಾಧ್ಯಕ್ಷ ಬಿ.ವೀರಣ್ಣ ಹೇಳಿದರು.ಶನಿವಾರ ಐಐಟಿ ಎಂಎಸ್‌ಸಿ, ಎಂಟೆಕ್ ರಸಾಯನ ಶಾಸ್ತ್ರ ಡ್ಯುಯಲ್ ಪದವಿಗೆ ಆಯ್ಕೆಯಾದ ಎ.ವಿ. ಕಮಲಮ್ಮ ಮಹಿಳಾ ಕಾಲೇಜು ಹಾಗೂ ಜೆ.ಎಚ್. ಪಟೇಲ್ ಬಡಾವಣೆಯ ಎಸ್‌ಟಿ ಬಾಲಕಿಯರ ಹಾಸ್ಟೆಲ್‌ನ ವಿದ್ಯಾರ್ಥಿನಿ ಶ್ಯಾಗಲೆ ಆರ್.ಕವಿತಾ ಅವರಿಗೆ ನಾಯಕ ಸಮಾಜದಿಂದ ಸನ್ಮಾನಿಸಿ ಅವರು ಮಾತನಾಡಿದರು.
ಸುಸಂಸ್ಕೃತ ಸಮಾಜ ನಿರ್ಮಾಣ ಆಗಬೇಕಾದರೆ ಇಂದಿನ ಮಕ್ಕಳಿಗೆ ಉತ್ತಮ ಪ್ರೋತ್ಸಾಹ, ಮಾರ್ಗದರ್ಶನ ಅವಶ್ಯಕತೆ ಬಹಳಷ್ಟಿದೆ. ಉಳ್ಳವರು ಸಮಾಜಕ್ಕೆ ಏನಾದರೂ ಕೊಡುಗೆ ನೀಡಿದಾಗ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದರು.
ನಮ್ಮ ಸಮಾಜದ ಅಧ್ಯಕ್ಷ ಬಿ.ವೀರಣ್ಣ ಅವರು ನನ್ನ ಸಾಧನೆ ಗುರುತಿಸಿ ಸನ್ಮಾನಿಸಿರುವುದು ಇನ್ನಷ್ಟು ಜವಾಬ್ದಾರಿ ಹೆಚ್ಚಾಗುವಂತೆ ಮಾಡಿದೆ. ಅವರ ಆಶಯದಂತೆ ಉತ್ತಮ ಅಭ್ಯಾಸ ಮಾಡಿ ಸಮಾಜಕ್ಕೆ ಹಾಗೂ ಪೋಷಕರಿಗೆ, ಅಧಿಕಾರಿ ವೃಂದದವರಿಗೆ ಕೀರ್ತಿ ತರಲು ಪ್ರಯತ್ನಿಸುತ್ತೇನೆ ಎಂದರು.
- - -
ದಾವಣಗೆರೆಯಲ್ಲಿ ವಿದ್ಯಾರ್ಥಿನಿ ಶ್ಯಾಗಲೆ ಆರ್.ಕವಿತಾ ಅವರನ್ನು ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾಧ್ಯಕ್ಷ ಬಿ. ವೀರಣ್ಣ ಸನ್ಮಾನಿಸಿದರು.