ಕನ್ನಡಪ್ರಭ ವಾರ್ತೆ ಕಲಬುರಗಿ
ನಗರದ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಹಿಂದಿ ವಿಭಾಗದ ವತಿಯಿಂದ ಹಮ್ಮಿಕೊಂಡ ಒಂದು ದಿನದ ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣದಲ್ಲಿ ಆಶಯ ನುಡಿಗಳನ್ನಾಡಿದರು.
ಕಾರ್ಯಕ್ರಮವನ್ನು ಪ್ರೊ. ಧನ್ಯಕುಮಾರ ಬಿರಾದಾರ, ರಾಷ್ಟ್ರೀಯ ಮಹಾ ಮಂತ್ರಿಗಳು ಅಖಿಲ ಭಾರತೀಯ ಹಿಂದಿ ಮಹಾಸಭಾ ಹೊಸದಿಲ್ಲಿ ಇವರು ಉದ್ಘಾಟಿಸಿದರು.ಇಂದು ಭಾಷಾ ಸಂಸ್ಕೃತಿ ಅರಿತುಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಾ.ರಾಜೇಂದ್ರ ಕೊಂಡಾ ವಹಿಸಿಕೊಂಡು ಮಾತನಾಡಿ, ಹಿಂದಿ ವಿಭಾಗದವರು ಆಯೋಜಿಸಿರುವ ಈ ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ನಮ್ಮ ಮಹಾವಿದ್ಯಾಲಯದ ಇತಿಹಾಸದಲ್ಲಿ ಒಂದು ಹೊಸ ಸಾಧನೆ ಎಂದು ಹೇಳಿದರು.
ಹಿಂದಿ ವಿಭಾಗದ ಮುಖ್ಯಸ್ಥರು ಹಾಗೂ ವಿಚಾರಸಂಕಿರಣದ ಸಂಘಟಕರಾದ ಡಾ.ಪ್ರೇಮಚಂದ ಚವ್ಹಾಣ ಪ್ರಾಸ್ತಾವಿಕ ಮಾತನಾಡಿ, ಸರ್ವರನ್ನು ಸ್ವಾಗತಿಸಿದರು. ಕುಮಾರಿ ಶೃತಿ ಕುಲಕರ್ಣಿ ಪ್ರಾರ್ಥಿಸಿ, ಡಾ.ವಿಲಾಸ ಸೊಲಂಕಿ ಕಾರ್ಯಕ್ರಮ ನಿರ್ವಹಿಸಿದರು ಎಂದು ಮಹಾವಿದ್ಯಾಲಯದ ನ್ಯಾಕ್ ಸಂಯೋಜಕರಾದ ಡಾ. ಮೋಹನರಾಜ್ ಪತ್ತಾರ ತಿಳಿಸಿದ್ದಾರೆ.