ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಡ್ಡಾಯ ಪಾಲಿಸಿ

KannadaprabhaNewsNetwork | Published : Jun 2, 2024 1:46 AM

ಸಾರಾಂಶ

ಲೋಕಸಭಾ ಚುನಾವಣೆಯ ಮತ ಏಣಿಕೆ ಕಾರ್ಯ ಜೂ.4 ರಂದು ಪಟ್ಟಣದ ಆರ್.ಡಿ ಕಾಲೇಜಿನಲ್ಲಿ ಜರುಗಲಿದೆ. ರಾಜಕೀಯ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು ತಮ್ಮ ಚುನಾವಣಾ ಏಜೆಂಟರು, ಮತ ಏಣಿಕಾ ಏಜೆಂಟರುಗಳು ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ಹೇಳಿದರು.

ಕನ್ನಡಪ್ರಭ ವಾರ್ತೆ ಚಿಕ್ಕೋಡಿ

ಲೋಕಸಭಾ ಚುನಾವಣೆಯ ಮತ ಏಣಿಕೆ ಕಾರ್ಯ ಜೂ.4 ರಂದು ಪಟ್ಟಣದ ಆರ್.ಡಿ ಕಾಲೇಜಿನಲ್ಲಿ ಜರುಗಲಿದೆ. ರಾಜಕೀಯ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು ತಮ್ಮ ಚುನಾವಣಾ ಏಜೆಂಟರು, ಮತ ಏಣಿಕಾ ಏಜೆಂಟರುಗಳು ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ಹೇಳಿದರು.

ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಮತ ಏಣಿಕೆ ಪ್ರಕ್ರಿಯೆಗಳ ಕುರಿತು ಅಭ್ಯರ್ಥಿಗಳ ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಮತ ಏಣಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು, ಚುನಾವಣಾ ಏಜೆಂಟರ್‌, ಮತ ಏಣಿಕೆ ಏಜೆಂಟರಿಗೆ ವಾಹನ ನಿಲುಗಡೆಗೆ, ಉಪಹಾರಕ್ಕೆ ನಿಗದಿತ ಸ್ಥಳ ಗುರುತಿಸಿ, ಸಿದ್ಧತೆ ಮಾಡಲಾಗಿದೆ. ಅಂದು ಮತ ಏಣಿಕಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ 144 ಕಲಂ ಅಡಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅನಗತ್ಯ ಓಡಾಟ, ಗುಂಪು ಸೇರುವುದು ಮಾಡುವಂತಿಲ್ಲ ಎಂದು ತಿಳಿಸಿದರು.ಮತ ಏಣಿಕಾ ಕೇಂದ್ರದೊಳಗೆ ಮೊಬೈಲ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತು ತರಲು ಅವಕಾಶವಿಲ್ಲ. ಯಾವುದೇ ರೀತಿಯ ಆಯುಧ, ಗುಟಕಾ, ಬೀಡಿ ಸಿಗರೇಟ್, ಎಲೆ ಅಡಿಕೆ ತರುವುದನ್ನು ಸಹ ನಿರ್ಬಂಧಿಸಲಾಗಿದೆ. ಚುನಾವಣಾ ಆಯೋಗದ ಎಲ್ಲ ನಿಯಮಗಳನ್ನು ಪಾಲಿಸುವ ಮೂಲಕ ಮತ ಏಣಿಕೆ ಕಾರ್ಯ ನಿಯಮಾನುಸಾರ, ಸುಗಮವಾಗಿ ಜರುಗಲು ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಸಹಕಾರ ನೀಡಬೇಕು ಎಂದು ತಿಳಿಸಿದರು. ಜೂ.4 ರಂದು ಬೆಳಗ್ಗೆ ಸ್ಟ್ರಾಂಗ್ ರೂಮ್ ತೆರೆಯುವುದರಿಂದ ಹಿಡಿದು ಸಂಜೆ ಇವಿಎಂ ಮಷಿನ್‌ಗಳು ಭದ್ರತಾ ಕೊಠಡಿಗೆ ಹೋಗುವವರೆಗಿನ ಎಲ್ಲ ಹಂತಗಳ ಕುರಿತು ಸಭೆಯಲ್ಲಿ ವಿವರಿಸಿದರು. ರಾಜ್ಯ ಮಟ್ಟದ ಚುನಾವಣಾ ತರಬೇತಿದಾರ ಎನ್‌.ವಿ.ಶಿರಗಾಂವಕರ ಅವರು ಮತ ಏಣಿಕೆ ಪ್ರಕ್ರಿಯೆ, ಹಂತಗಳ ಕುರಿತು ಸವಿವರವಾಗಿ ಅಭ್ಯರ್ಥಿಗಳಿಗೆ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯ ಸಹಾಯಕ ಚುನಾವಣಾಧಿಕಾರಿ ಬಸವರಾಜ ಅಡವಿಮಠ, ಅಭ್ಯರ್ಥಿಗಳು ಮತ್ತು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Share this article