ಕನ್ನಡಪ್ರಭ ವಾರ್ತೆ ಕನಕಪುರ
ಇದು ಕಾರ್ಯಕರ್ತರ ಚುನಾವಣೆಯಾಗಿದ್ದು, ಕಾರ್ಯಕರ್ತರು ನನ್ನ ಚುನಾವಣೆ ಮಾಡುವಾಗ ಅವರ ಚುನಾವಣೆಗೆ ನಾನು ಬಂದು ಮತ ಹಾಕದಿದ್ದರೆ ನನ್ನಿಂದ ಕರ್ತವ್ಯ ಲೋಪವಾಗುವುದರಿಂದ ಎಲ್ಲಾ ಕೆಲಸಗಳನ್ನು ಬದಿಗೊತ್ತಿ ಮತ ಚಲಾವಣೆಗೆ ಬಂದಿದ್ದೇನೆ ಎಂದರು.ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಮತ ಚಲಾಯಿಸಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿ. ಕೆ ಶಿವಕುಮಾರ್ ರಾಮಕೃಷ್ಣ ಹೆಗಡೆ ಅವರು ಸಿಎಂ ಆಗಿದ್ದಾಗ ಇದೇ ಚುನಾವಣೆಗೆ ನಾನು ಹಾಗೂ ದಿ. ಶ್ರೀಕಂಠಯ್ಯ ಅವರು ಚುನಾವಣೆಗೆ ಸ್ಪರ್ಧಿಸಿದ್ದೆವು, ಉಳಿದಂತೆ ಜನತಾದಳ ಪಕ್ಷದಿಂದ ಹಲವು ಮುಖಂಡರು ಸ್ಪರ್ಧಿಸಿದ್ದರು, ನನ್ನ ರಾಜಕೀಯ ಬದುಕಿನ ಮೊದಲ ಚುನಾವಣೆ ಅದಾಗಿತ್ತು, ಕನಕಪುರದಲ್ಲಿ ಈ ಚುನಾವಣೆ ಗೆದ್ದು ನಿರ್ದೇಶಕನಾಗಿ ಆಯ್ಕೆಯಾಗಿದ್ದೆ, ಆಗ ನಮ್ಮ ಪಕ್ಷದ ಮುಖಂಡರಾದ ಆಸ್ಕರ್ ಫರ್ನಾಂಡೀಸ್ ಅವರು ಇದೇ ಕಟ್ಟಡದ ಕೋಣೆಯಲ್ಲಿ ಒಂದು ತಿಂಗಳು ಇದ್ದು ಚುನಾವಣೆ ಮಾಡಿದ್ದರು ಎಂದರು.
ಪಕ್ಷದ ಕಾರ್ಯಕರ್ತರು ಬಲಿಷ್ಠವಾಗಿದ್ದರೆ ಮಾತ್ರ ನಾವು ಬಲಿಷ್ಠವಾಗುತ್ತೇವೆ, ಈ ಚುನಾವಣೆಯಲ್ಲಿ ಕೆಲವರು ರಾಜಿ ಮಾಡಿಕೊಳ್ಳಿ ಎಂದು ಕೇಳಿದರು. ಆದರೆ ನಾವೇ ರಾಜೀ ಮಾಡಿಕೊಳ್ಳವುದು ಬೇಡ ಚುನಾವಣೆ ನಡೆಯಲಿ ನಮ್ಮ ಕಾರ್ಯಕರ್ತರಿಗೆ ಚುನಾವಣೆಯ ಅನುಭವವಾಗಲಿ ಎಂದು ಹೇಳಿದೆ. ಏಕೆಂದರೆ ನಾವು ಸಂಸತ್ ಚುನಾವಣೆ ವೇಳೆ ಯಾಮಾರಿದೆವು ಎಷ್ಟೋ ಬೂತ್‌ಗಳಿಗೆ ಏಜೆಂಟ್‌ಗಳು ಇರದಿದ್ದರೂ ಸಹ ನಮ್ಮ ಎದುರಾಳಿಗೆ ಮತಗಳು ಹೇಗೆ ಬಿದ್ದವು, ನಮಗೆ ಒಳೇಟು ಯಾವ ರೀತಿ ಬಿತ್ತು ಎಂದು ತಿಳಿಯಲಿಲ್ಲ ನಾವು ನಮ್ಮ ತಪ್ಪನ್ನ ತಿದ್ದುಕೊಳ್ಳಲು ರಾಜಕಾರಣದಲ್ಲಿ ನಮ್ಮ ವೈರಿ ಯಾರು ಎಂದು ಮೊದಲು ತಿಳಿದುಕೊಳ್ಳಬೇಕು ಎಂದರು.ಈ ಚುನಾವಣೆಯಲ್ಲಿ ನಮ್ಮ ಪರ ಯಾರು ನಿಂತಿದ್ದಾರೆ, ವಿರುದ್ಧ ಯಾರು ನಿಂತಿದ್ದಾರೆ ಎಂದು ತಿಳಿಯುವುದರಿಂದ ಚುನಾವಣೆ ನಡೆಯುತ್ತಿದೆ, ಪಕ್ಷಕ್ಕೆ ಮೂಲ ಸ್ವರೂಪ ಇಲ್ಲವಾದರೆ ಯಾವ ಪಕ್ಷವೂ ಇರಲು ಸಾಧ್ಯವಿಲ್ಲ, ಇದು ನಮ್ಮ ಮೂಲ ಸೊಸೈಟಿ, ಹಾಲಿನ ಒಕ್ಕೂಟ, ಪಿಎಲ್‌ಡಿ ಬ್ಯಾಂಕ್ ಮುನ್ಸಿಪಾಲಿಟಿ, ಪಂಚಾಯ್ತಿಗಳು ನಮ್ಮ ಆಸ್ತಿಗಳಿದ್ದಂತೆ. ಇಲ್ಲಿರುವುದು 300 ಚಿಲ್ಲರೆ ಮತಗಳು, ಆದರೂ 300 ನಾಯಕರು ಕಾರ್ಯಕರ್ತರ ಗೆಲುವಿಗೆ ಬಂದಿದ್ದಾರೆ. ಹೀಗಾಗಿ ಎಷ್ಟೇ ಕೆಲಸದ ಒತ್ತಡ ಇದ್ದರೂ ಬಂದು ಮತ ಹಾಕುತ್ತಿದ್ದೇನೆ, ನಾವು ಬರಲಿಲ್ಲ ಅಂದರೆ, ನಾಯಕರೇ ಬಂದು ಮತ ಹಾಕಿಲ್ಲ, ನಾವು ಯಾಕೆ ಮತ ಹಾಕಬೇಕು ಎಂದು ಹಳ್ಳಿಗಳಲ್ಲಿ ಜನರು ನಮ್ಮ ಮುಖಂಡರ, ಅಭ್ಯರ್ಥಿ ಗಳ ಮರ್ಯಾದೆ ತೆಗೆಯುತ್ತಾರೆ ಎಂಬ ಭಾವನೆಯಿಂದ ಬಂದು ಮತ ಚಲಾಯಿಸಿರುವುದಾಗಿ ತಿಳಿಸಿದರು. ಸಚಿವ ಸ್ಥಾನ ಆಕಾಂಕ್ಷಿಗಳು ದೆಹಲಿಗೆ ಹೋಗಿದ್ದಾರೆ:ಕೆಲ ಶಾಸಕರು ದೆಹಲಿಗೆ ತೆರಳಿದ್ದು, ನಿಮ್ಮನ್ನು ಸಿಎಂ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕೇಳಿದಾಗ, ಸಚಿವ ಸ್ಥಾನದ ಆಕಾಂಕ್ಷೆ ಇರುವವರು ಹೋಗಿದ್ದಾರೆ, ನನ್ನನ್ನು ಸಿಎಂ ಮಾಡುವ ಪ್ರಯತ್ನದ ಬಗ್ಗೆ ನನಗೆ ಗೊತ್ತಿಲ್ಲ. ನಾನು ಅವರಿಗೆ ಕರೆ ಮಾಡಿಲ್ಲ, ಅವರನ್ನು ಕಳುಹಿಸಿಲ್ಲ. ಯಾಕೆ ಹೋದಿರಿ ಎಂದು ಪ್ರಶ್ನೆ ಮಾಡುವುದಿಲ್ಲ ಎಂದರು.ಅಧಿಕಾರ ಹಂಚಿಕೆ ಒಪ್ಪಂದ ಆಗಿತ್ತೇ ಎಂದು ಕೇಳಿದಾಗ, “ನಾನು ಆ ಬಗ್ಗೆ ಯಾಕೆ ಮಾತನಾಡಲಿ, ನೀವುಗಳೇ (ಮಾಧ್ಯಮಗಳು) ಏನೇನೋ ಬರೆಯುತ್ತಿದ್ದೀರಿ” ಎಂದು ತಿಳಿಸಿದರು.ಅಧಿಕಾರ ಹಂಚಿಕೆ ವಿಚಾರವಾಗಿ ಬಸವರಾಜ ರಾಯರೆಡ್ಡಿ, ಸದಾನಂದ ಗೌಡರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಯಾರ ಹೇಳಿಕೆಗೂ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಅವರ ವಕ್ತಾರನಲ್ಲ” ಎಂದು ತಿಳಿಸಿದರು.
ಕೆ ಕೆ ಪಿ ಸುದ್ದಿ 02: ಡಿ ಸಿ ಎಂ ಡಿ ಕೆ ಶಿವಕುಮಾರ್ ರವರುಮಂಗಳವಾರ ನಡೆದ ಟಿ ಎಸ್ ಪಿ ಸಿ ಎಂ ಎಸ್ ಚುನಾವಣೆ ಯಲ್ಲಿ ಮತ ಚಲಾಯಿಸಿದರು.