ಕನ್ನಡಪ್ರಭ ವಾರ್ತೆ ಹಾವೇರಿ
ಸವಣೂರು ಪಟ್ಟಣದ ಶ್ರೀ ಲಲಾಟೇಶ್ವರ ಕಲ್ಯಾಣ ಮಂಟಪದಲ್ಲಿ ಬುಧವಾರ ಜರುಗಿದ ಅಕ್ಕನ ಬಳಗದ 50ನೇ ವರ್ಷದ ಸುವರ್ಣ ಸಂಭ್ರಮ ಸಮಾರಂಭದಲ್ಲಿ ಸುವರ್ಣ ಸಂಭ್ರಮ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದ ಭಕ್ತಿಯ ಕ್ರಾಂತಿ ನಿರಂತರವಾಗಿ ನಡೆದಿರುವುದು ಭಾರತದಲ್ಲಿ, ಅದೂ ಕನ್ನಡ ನಾಡಿನಲ್ಲಿ. ಸವಣೂರಿನ ಅಕ್ಕನ ಬಳಗ ಕ್ರೀಯಾಶೀಲವಾಗಿ 50 ವರ್ಷ ಕಾಲ ಕೆಲಸ ಮಾಡಿಕೊಂಡು ಬಂದಿದೆ. ಶುದ್ಧ ಅಂತಃಕರಣ, ಭಕ್ತಿಯ ಭಾವ ಇರುವಂತದ್ದು ಅಕ್ಕ ಮಹಾದೇವಿ ಅವರ ವಚನದಲ್ಲಿದೆ. ಯಾವುದನ್ನು ಬಯಸದೆ ಶುದ್ಧ ಅಂತಃಕರಣದಲ್ಲಿ ಲೀನವಾಗಿ ಕರಗಿರುವ ಶರಣೆ ಅಕ್ಕಮಹಾದೇವಿ. ಅಂತಹ ಶರಣರು ನಡೆದಾಡಿದ ಪುಣ್ಯ ಭೂಮಿಯಲ್ಲಿ ಜನಿಸಿದ ನಾವು ಧನ್ಯರು. ನಮ್ಮ ಸಂಸ್ಕೃತಿ, ಸಂಸ್ಕಾರದ ಮೌಲ್ಯಗಳು ನಮ್ಮ ಪರಿವಾರದಲ್ಲಿ ಉಳಿದುಕೊಂಡಿವೆ ಎಂದರೆ ಅದು ತಾಯಿಂದಿರಿಂದ. ತಾಯಂದಿರು ಆಧ್ಯಾತ್ಮಿಕವಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಭಕ್ತಿಯ ಭಾವ, ಮಠಗಳ ಪಾತ್ರದಿಂದ ಕನ್ನಡ ನಾಡಿನಲ್ಲಿ ಇಂದು ಸದ್ಭಾವನಾ, ಸದ್ವಿಚಾರದ ಸಂಸ್ಕಾರದಿಂದ ಇರಲು ಸಾಧ್ಯವಾಗಿದೆ. ಇವುಗಳನ್ನು ಉಳಿಸಿ, ಬೆಳಸಿಕೊಂಡು ಹೋಗುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.ಸಮಾರಂಭದ ಉದ್ಘಾಟನೆಯನ್ನು ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್ ನೆರವೇರಿಸಿ ಮಾತನಾಡಿದರು. ಚೆನ್ನಮ್ಮ ಬೊಮ್ಮಾಯಿ ಅವರು ಅಕ್ಕನ ವಚನಗಳು ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಅಕ್ಕನ ಬಳಗದ ಅಧ್ಯಕ್ಷೆ ಕವಿತಾ ಬಡಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ಶಾಸಕ ಬಸವರಾಜ ಬೊಮ್ಮಾಯಿ ದಂಪತಿ ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಅಕ್ಕನಬಳಗದ ಶರಣೆಯರು, ಸಾರ್ವಜನಿಕರು ಹಾಗೂ ಇತರರು ಪಾಲ್ಗೊಂಡಿದ್ದರು. ಐಶ್ವರ್ಯ ಸೋಲಾರಗೊಪ್ಪ ಕಾರ್ಯಕ್ರಮ ನಿರ್ವಹಿಸಿದರು.ಶಿಗ್ಗಾಂವಿ, ಸವಣೂರು ಜನತೆಯನ್ನು ಮರೆಯಲ್ಲ
ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ